AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಸಹ ಪ್ರಾಧ್ಯಾಪಕ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಧ್ಯಪ್ರದೇಶದ ಕಾಲೇಜ್​ವೊಂದರಲ್ಲಿ ಪ್ರದ್ಯಾಪಕ ಮತ್ತು ಪ್ರಾಂಶುಪಾಲರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಇದರ ದೃಶ್ಯಗಳು  ಸಿಸಿಟಿವಿ (CCTV)ಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕಾಲೇಜು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಸಹ ಪ್ರಾಧ್ಯಾಪಕ : ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸುತ್ತಿರುವ ಪ್ರದ್ಯಾಪಕ
TV9 Web
| Edited By: |

Updated on:Jan 19, 2022 | 3:29 PM

Share

ಮಧ್ಯಪ್ರದೇಶದ ಕಾಲೇಜ್​ವೊಂದರಲ್ಲಿ ಪ್ರಾಧ್ಯಾಪಕ  ಮತ್ತು ಪ್ರಾಂಶುಪಾಲರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಇದರ ದೃಶ್ಯಗಳು  ಸಿಸಿಟಿವಿ (CCTV)ಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಧ್ಯಪ್ರದೇಶದ ಉಜ್ಜಯನಿಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಬ್ರಹ್ಮದೀಪ ಅಲುನೆ ಎನ್ನುವ ಸಹಪ್ರಾಧ್ಯಾಪಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೇಖರ್ ​ಮೆಡ್ಮಾವರ್​ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಉಜ್ಜಯಿನಿಯ ಘಟ್ಟಿ ಪ್ರದೇಶದ ದಿವಂಗತ ನಾಗುಲಾಲ್ ಮಾಳವೀಯ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 

ಎನ್​ಡಿಟಿವಿ ವರದಿಯ ಪ್ರಕಾರ, ಜನವರಿ 15 ರಂದು ಘಟನೆಯ ಸಿಸಿಟಿವಿ ವಿಡಿಯೋ ವೈರಲ್​ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಧ್ಯಾಪಕ ಬ್ರಹ್ಮದೀಪ ಅಲುನೆ  ಮೇಲೆ ಹಲ್ಲೆ ಆರೋಪವನ್ನು ಹೊರಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಾಂಶುಪಾಲರ ಹೇಳಿಕೆ ಪ್ರಕಾರ ಬ್ರಹ್ಮದೀಪ ಅಲುನೆ  ಅವರು ಭೂಪಾಲ್​ನಿಂದ  ಉಜ್ಜಯನಿ ಕಾಲೇಜಿಗೆ ವರ್ಗಾವಣೆಯಾಗಿದ್ದು ಪ್ರತಿದಿನ 5 ಕಿಮೀ ನಡೆದುಕೊಂಡು ಕಾಲೇಜಿಗೆ ಬರುತ್ತಾರೆ. ಹೀಗೆ ಒಂದು ದಿನ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಕಾಲೇಜಿನಲ್ಲಿ ವ್ಯಾಕ್ಸಿನೇಷನ್​ ಸೆಂಟರ್​ ತೆರೆಯುವುದರ ಕುರಿತು ಮಾತನಾಡಲು ಕ್ಯಾಬಿನ್​ಗೆ ಕರೆಸಿದಾಗ ಕೋಪಗೊಂಡು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ ಪ್ರಾಧ್ಯಾಪಕ ಬ್ರಹ್ಮದೀಪ ಅಲುನೆ ಪ್ರಾಂಶುಪಾಲರು ಸಿಬ್ಬಂದಿಗಳ ಜತೆ ಅನುಚಿತವಾಗಿ ವರ್ತಿಸುತ್ತಾರೆ. ಈಗಾಗಲೇ ಇವರ ವರ್ತನೆಯಿಂದ ಬೇಸತ್ತು ಇಬ್ಬರು ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆದುಕೊಂಡು ಹೋಗಿದ್ದಾರೆ. ಆಫೀಸ್​ಗೆ ಕರೆಸಿದ ವೇಳೆ ನನ್ನ ಬಳಿಯೂ ಅನುಚಿತವಾದ ಮಾತುಗಳನ್ನು ಆಡಿದ್ದರು. ಹೀಗಾಗಿ ಹಲ್ಲೆ ನಡೆಯಿತು ಎಂದಿದ್ದಾರೆ.

ಸಿಸಿಟಿವಿ ವಿಡಿಯೋದಲ್ಲಿ ಪ್ರಾಧ್ಯಾಪಕ ಮತ್ತು ಪ್ರಾಂಶುಪಾಲರು ಕುಳಿತು ಮಾತನಾಡುತ್ತಿರುವುದನ್ನು ಕಾಣಬಹುದು ಈ ವೇಳೆ ಒಂದೇ ಸಲಕ್ಕೆ ಎದ್ದು ನಿಂತ ಪ್ರಾಧ್ಯಾಪಕ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಹೊರಗಡೆ ಇದ್ದ ಜನ ಬಂದು ಗಲಾಟೆಯನ್ನು ತಪ್ಪಿಸಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು ಸಹಾಯಕ ಪ್ರಾಧ್ಯಾಪಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಹೋಮ್​​ವರ್ಕ್ ಮಾಡಿಸಲು ಮುಂಜಾನೆ 3-4 ಗಂಟೆವರೆಗೆ ಮಕ್ಕಳೊಂದಿಗೆ ಕುಳಿತುಕೊಳ್ಳಬೇಕಾಗಿ ಬರುತ್ತದೆ: ಪ್ರಿಯಾಂಕಾ ಗಾಂಧಿ

Published On - 2:56 pm, Wed, 19 January 22

Follow Us
TV9 Web
TV9 Web

TV9 Kannada

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ