ಹೈದರಾಬಾದ್: ಕಾರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ನಡೆದ ವಿಡಿಯೋ ಕ್ಲಿಪ್ಪಿಂಗ್ ಬಯಲು ಮಾಡಿದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು

ವಕೀಲರೂ ಅಗಿರುವ ಬಿಜೆಪಿ ಶಾಸಕರು, ಸೂಕ್ತ ಸಮಯದಲ್ಲಿ ತನ್ನಲ್ಲಿರುವ ಎಲ್ಲ ಸಾಕ್ಷ್ಯಗಳನ್ನು ಕೋರ್ಟಿನ ಮುಂದೆ ಹಾಜರುಪಡಿಸುವುದಾಗಿ ತಿಳಿಸಿದರು. ಸುದ್ದಿಗೋಷ್ಟಿಯೊಂದರಲ್ಲಿ ರಘುನಂದನ್ ಬಿಡುಗಡೆ ಮಾಡಿರುವ ವಿಡಿಯೋ ಕ್ಲಿಪ್ಪಿಂಗ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೈದರಾಬಾದ್: ಕಾರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ನಡೆದ ವಿಡಿಯೋ ಕ್ಲಿಪ್ಪಿಂಗ್ ಬಯಲು ಮಾಡಿದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು
ಬಿಜೆಪಿ ಶಾಸಕ ಎಮ್ ರಘುನಂದನ್ ರಾವ್
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Jun 07, 2022 | 5:50 PM

ಹೈದರಾಬಾದ್: ಇತ್ತೀಚಿಗೆ ಹೈದರಾಬಾದ ನಗರದ ಪ್ರತಿಷ್ಠಿತ ಪ್ರದೇಶ ಎನಿಸಿಕೊಂಡಿರುವ ಜುಬಿಲೀ ಹಿಲ್ಸ್ (Jubilee Hills) ಏರಿಯಾನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ (gang-rape) ಪೋಟೋಗ್ರಾಫ್ ಮತ್ತು ವಿಡಿಯೋವನ್ನು ಶೇರ್ ಮಾಡಿರುವ ಆರೋಪದಲ್ಲಿ ನಗರದ ಪೊಲೀಸರು ಬಿಜೆಪಿ ಶಾಸಕ ಎಮ್ ರಘುನಂದನ್ ರಾವ್ (M Raghunandan Rao) ಅವರ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿಕೊಂಡಿದ್ದಾರೆ. ವಕೀಲರೊಬ್ಬರು ದಾಖಲಿಸಿದ ದೂರಿನ ಆಧಾರದ ಮೇಲೆ ಇಂಡಿಯನ್ ಪೀನಲ್ ಕೋಡ್ ಸೆಕ್ಷನ್ 228 ಎ ಅಡಿಯಲ್ಲಿ ಆಬಿಡ್ಸ್ ಪೊಲೀಸ್ ಸ್ಟೇಶನ್ ನಲ್ಲಿ ದೂರು ದಾಖಲಿಸಲಾಗಿದೆ.

ರಘುನಂದನ್ ವಿರುದ್ಧ ಸೋಮವಾರ ರಾತ್ರಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಮತ್ತು ಕಾನೂನಿನ ಸಲಹೆ ಪಡೆದ ನಂತರ ಅವರ ವಿರುದ್ಧ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಆಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೆಕ್ಷನ್ 228ರ ಅಡಿಯಲ್ಲಿ ಯಾವುದೇ ವ್ಯಕ್ತಿಯು ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಗುರುತನ್ನು ಪ್ರಿಂಟ್ ಅಥವಾ ಪ್ರಕಾಶಿಸುವ ಮೂಲಕ ಬಹಿರಂಗಗೊಳಿಸಿದರೆ ಎರಡು ವರ್ಷ ಸೆರೆವಾಸದ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.

ದುಬ್ಬಕ್ ಶಾಸಕರಾಗಿರುವ ರಘುನಂದನ್ ಅವರು ಶಾಸಕರೊಬ್ಬರ ಮಗನೆಂದು ಹೇಳಲಾಗುತ್ತಿರುವ ಒಬ್ಬ ಯುವಕ ಕಾರೊಂದರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವಿಡಿಯೊವನ್ನು ಬಿಡುಗಡೆ ಮಾಡಿದ ಮೂರು ದಿನಗಳ ಬಳಿಕ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.

ಶಾಸಕರ ಕೃತ್ಯವನ್ನು ವ್ಯಾಪಕವಾಗಿ ಖಂಡಿಸಲಾಗುತ್ತಿದೆ. ಆದರೆ ತಾನು ಸಂತ್ರಸ್ತೆಯ ಹೆಸರು ಮತ್ತು ಗರುತನ್ನು ಬಯಲು ಮಾಡಿಲ್ಲ ಎಂದು ಶಾಸಕರು ಹೇಳುತ್ತಿದ್ದಾರೆ. ಎಮ್ ಐ ಎಮ್ ಶಾಸಕನ ಮಗ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳಲ್ಲಿ ಒಬ್ಬನಾಗಿರುವನೆಂದು ಸಾಬೀತು ಮಾಡುವುದಕ್ಕೋಸ್ಕರ ತಾನು ವಿಡಿಯೋವನ್ನು ಬಿಡುಗಡೆ ಮಾಡಿರುವುದಾಗಿ ಅವರು ಹೇಳಿದ್ದಾರೆ.

ಶಾಸಕನ ಮಗನಿಗೆ ಕ್ಲೀನ್ ಚಿಟ್ ನೀಡಿ ಪೊಲೀಸರು ತನಿಖೆಯನ್ನು ಹಳಿ ತಪ್ಪಿಸುತ್ತಿರುವ ಕಾರಣ ಹಾಗೆ ಮಾಡಿರುವುದಾಗಿ ಮಾಧ್ಯಮಗಳಿಗೆ ಹೇಳಿದ ರಘುನಂದನ್ ಅವರು ತಾನು ಪ್ರಕರಣ ಎದುರಿಸಲು ಸಿದ್ಧ ಎಂದರು.

ವಕೀಲರೂ ಅಗಿರುವ ಬಿಜೆಪಿ ಶಾಸಕರು, ಸೂಕ್ತ ಸಮಯದಲ್ಲಿ ತನ್ನಲ್ಲಿರುವ ಎಲ್ಲ ಸಾಕ್ಷ್ಯಗಳನ್ನು ಕೋರ್ಟಿನ ಮುಂದೆ ಹಾಜರುಪಡಿಸುವುದಾಗಿ ತಿಳಿಸಿದರು. ಸುದ್ದಿಗೋಷ್ಟಿಯೊಂದರಲ್ಲಿ ರಘುನಂದನ್ ಬಿಡುಗಡೆ ಮಾಡಿರುವ ವಿಡಿಯೋ ಕ್ಲಿಪ್ಪಿಂಗ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸದರಿ ವಿಡಿಯೋವನ್ನು ಅಪ್ ಲೋಡ್ ಮಾಡಿದ ಒಂದಿಬ್ಬರು ಯೂಟ್ಯೂಬರ್ ಗಳನ್ನು ಸಹ ಪೊಲೀಸರು ಬಂಧಿಸಿದ್ದಾರೆ.

ಮೇ 28 ರಂದು ಪಬ್ ಒಂದರಲ್ಲಿ ಆಯೋಜಿಸಲಾಗಿದ್ದ ಪಾರ್ಟಿಯಲ್ಲ್ಲಿ ಭಾಗವಹಿಸಿದ್ದ 17-ವರ್ಷ-ವಯಸ್ಸಿನ ಬಾಲಕಿಯೊಬ್ಬಳನ್ನು ಮನೆಗೆ ಡ್ರಾಪ್ ಮಾಡುವುದಾಗಿ ಹೇಳಿ ಐವರು ದುರುಳರು ಕಾರಲ್ಲೇ ಸರದಿಯ ಮೇಲೆ ಅತ್ಯಾಚಾರ ನಡೆಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಾಪರಾಧಿಗಳು ಸೇರಿದಂತೆ ನಾಲ್ವರನ್ನು ಪೊಲೀಸ್ ಬಂಧಿಸಿದ್ದು ಐದನೇಯವನು ತಲೆಮರೆಸಿಕೊಂಡಿದ್ದಾನೆ. ಬಾಪಾಪರಾಧಿಗಳಲ್ಲಿ ಒಬ್ಬನು ತೆಲಂಗಾಣದಲ್ಲಿ ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) ಪಕ್ಷದ ನಾಯಕರೊಬ್ಬರ ಮಗನಾಗಿದ್ದಾನೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ