ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

|

Updated on: Nov 26, 2020 | 7:04 PM

ವಿವಿ ನೀಡಿದ ದೂರಿನಲ್ಲಿ ಬಿಜೆಪಿ ಮುಖಂಡರು ಅನುಮತಿ ಇಲ್ಲದೆ ಕ್ಯಾಂಪಸ್​ನ ಒಳಗೆ ಪ್ರವೇಶಿಸಿ ಬ್ಯಾರಿಕೇಡ್​ಗಳನ್ನು ತೆಗೆದು ಸಭೆ ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು
ಬ್ಯಾರಿಕೇಡ್ ಏಳದು ಒಯು ಕ್ಯಾಂಸ್​ನ ಒಳಗೆ ಪ್ರವೇಶಿಸುತ್ತಿರುವ ತೇಜಸ್ವಿ ಸೂರ್ಯ
Follow us on

ಹೈದರಾಬಾದ್: ಬಿಜೆಪಿ ಸಂಸದ ಮತ್ತು ಪಕ್ಷದ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಒಸ್ಮಾನಿಯಾ ವಿಶ್ವವಿದ್ಯಾಲಯ ಆವರಣದಲ್ಲಿ ಅತಿಕ್ರಮಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಸೂರ್ಯ ಮತ್ತು ಅವರ ಬೆಂಬಲಿಗರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸೂರ್ಯ ತೆಲಂಗಾಣ ಚಳುವಳಿಯ ಹುತಾತ್ಮರಿಗೆ ಗೌರವ ಸಲ್ಲಿಸಲು ಹಾಕಿದ್ದ ಬ್ಯಾರಿಕೇಡ್​ಗಳನ್ನು ತೆಗೆದು ಕ್ಯಾಂಪಸ್​ನ ಒಳಗೆ ಪ್ರವೇಶಿಸಿದ್ದಾರೆ. ಈ ಕುರಿತು ವಿವಿ ಅಧಿಕಾರಿಗಳು ದೂರು ನೀಡಿದ್ದು, ಈ ಪ್ರಕರಣವನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 447ರ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿವಿ ನೀಡಿದ ದೂರಿನಲ್ಲಿ ಬಿಜೆಪಿ ಮುಖಂಡರು ಅನುಮತಿ ಇಲ್ಲದೆ ಕ್ಯಾಂಪಸ್​ನ ಒಳಗೆ ಪ್ರವೇಶಿಸಿ ಬ್ಯಾರಿಕೇಡ್​ಗಳನ್ನು ತೆಗೆದು ಸಭೆ ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ಸಂಸದರನ್ನು ಪೊಲೀಸರು ತಡೆದಿದ್ದಾರೆ ಎಂದು ಊಹಾಪೋಹಗಳು ಹರಿದಾಡುತ್ತಿವೆ. ಪೊಲೀಸರೊಂದಿಗೆ ಯಾವುದೇ ಘರ್ಷಣೆ ನಡೆದಿಲ್ಲ ಎಂದು ನಗರ ಪೊಲೀಸರು ಸ್ಪಷ್ಟಪಡಿಸಿದ್ದಾರೆ ಮತ್ತು ಕ್ಯಾಂಪಸ್​ನ ಒಳಗೆ ಸಂಸದರು ಶಾಂತಿಯುತ ಸಭೆ ನಡೆಸಿದ್ದರು ಎಂದು ಹೇಳಿದ್ದಾರೆ.

ತೆಲಂಗಾಣ ಪ್ರತ್ಯೇಕ ರಾಜ್ಯದ ಬೇಡಿಕೆ ಸಂದರ್ಭದಲ್ಲಿ ವಿಶ್ವವಿದ್ಯಾಲಯವು ಪ್ರತಿಭಟನೆಯ ಕೇಂದ್ರ ಬಿಂದುವಾಗಿತ್ತು. ಡಿಸೆಂಬರ್ 1ರಂದು ನಡೆಯಲಿರುವ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್ಎಂಸಿ) ಚುನಾವಣೆಯ ಪ್ರಚಾರಕ್ಕಾಗಿ ಸೂರ್ಯ ಅಲ್ಲಿಗೆ ತೆರಳಿದ್ದರು.

Published On - 6:59 pm, Thu, 26 November 20