ಮನೆಯಲ್ಲಿ ಹಣ ಪತ್ತೆ ಪ್ರಕರಣ; ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ಹೈಕೋರ್ಟ್ ಆದೇಶ

|

Updated on: Mar 24, 2025 | 3:48 PM

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಕ್ರಮ ಹಣ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಯಶವಂತ್ ವರ್ಮಾ ಯಾವುದೇ ನ್ಯಾಯಾಂಗ ಕರ್ತವ್ಯಗಳನ್ನು ನಿರ್ವಹಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಬೆಂಕಿ ಅವಘಡ ಉಂಟಾದ ನಂತರ ಅವರ ರೂಂಗಳಲ್ಲಿ ಭಾರೀ ಪ್ರಮಾಣದ ಹಣ ಇರುವುದು ಪತ್ತೆಯಾಗಿತ್ತು. ಈ ಬಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ದೂರು ನೀಡಿದ್ದರು.

ಮನೆಯಲ್ಲಿ ಹಣ ಪತ್ತೆ ಪ್ರಕರಣ; ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ಹೈಕೋರ್ಟ್ ಆದೇಶ
Justice Yashwant Verma
Follow us on

ನವದೆಹಲಿ, ಮಾರ್ಚ್ 24: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ನಿವಾಸದಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ. ನ್ಯಾ. ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯಗಳನ್ನು ನಿರ್ವಹಿಸದಂತೆ ಆದೇಶ ಹೊರಡಿಸಿರುವ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನ್ಯಾಯಾಂಗ ಕೆಲಸವನ್ನು ಹಿಂತೆಗೆದುಕೊಂಡಿದೆ. ದೆಹಲಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದ ಆವರಣದಲ್ಲಿರುವ ಔಟ್‌ಹೌಸ್‌ನಲ್ಲಿ ಲೆಕ್ಕವಿಲ್ಲದ ಭಾರೀ ಪ್ರಮಾಣದ ಹಣ ಪತ್ತೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ನ್ಯಾಯಾಂಗ ಕೆಲಸವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಈಗಾಗಲೇ ಸುಪ್ರೀಂ ಕೋರ್ಟ್ ಯಶವಂತ್ ವರ್ಮಾ ಅವರ ವಿರುದ್ಧ ತನಿಖೆಗೆ ಆದೇಶಿಸಿದೆ.

ಇದೀಗ ದೆಹಲಿ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಕುರಿತು ನೋಟಿಸ್ ಪ್ರಕಟಿಸಲಾಗಿದೆ. “ಇತ್ತೀಚಿನ ಘಟನೆಗಳ ಹಿನ್ನೆಲೆಯಲ್ಲಿ, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನ್ಯಾಯಾಂಗ ಕೆಲಸವನ್ನು ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಹಿಂಪಡೆಯಲಾಗಿದೆ” ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಯಾವುದೇ ನ್ಯಾಯಾಂಗ ಕೆಲಸವನ್ನು ನಿಯೋಜಿಸದಂತೆ ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ ಸೂಚಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ.

ಇದನ್ನೂ ಓದಿ: ದೆಹಲಿ ನ್ಯಾಯಮೂರ್ತಿ ವರ್ಗಾವಣೆಗೂ ನಗದು ತನಿಖೆಗೂ ಸಂಬಂಧವಿಲ್ಲ; ಸುಪ್ರೀಂ ಕೋರ್ಟ್

ಇದನ್ನೂ ಓದಿ
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ತನಿಖೆಯನ್ನು ಆಂತರಿಕ ಕಾರ್ಯವಿಧಾನದ ಭಾಗವಾಗಿ ನಡೆಸಲು ಭಾರತದ ಮುಖ್ಯ ನ್ಯಾಯಮೂರ್ತಿ 3 ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯ ಸದಸ್ಯರೆಂದರೆ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಜಿಎಸ್ ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಅನು ಶಿವರಾಮನ್.

ಇದನ್ನೂ ಓದಿ: Honey-Trap : ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಕರ್ನಾಟಕದ ಹನಿಟ್ರ್ಯಾಪ್ ಪ್ರಕರಣ

ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ಮೂವರು ಸದಸ್ಯರ ಸಮಿತಿಯನ್ನು ರಚಿಸಿದ ನಂತರ, ಹಣವು ತಮಗೆ ಅಥವಾ ಅವರ ಕುಟುಂಬದ ಸದಸ್ಯರಿಗೆ ಸೇರಿಲ್ಲ ಎಂದು ಅವರು ಹೇಳಿದ್ದಾರೆ. ತಮ್ಮ ಮನೆಯಲ್ಲಿ ಸುಟ್ಟ ಹಣದ ರಾಶಿ ಪತ್ತೆಯಾದ ಬಳಿಕ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು “ಮುಂದಿನ ಆದೇಶದವರೆಗೆ ತಕ್ಷಣ ಜಾರಿಗೆ ಬರುವಂತೆ” ಸಕ್ರಿಯ ಕರ್ತವ್ಯದಿಂದ ತೆಗೆದುಹಾಕಲಾಗಿದೆ ಎಂದು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ತಿಳಿಸಿದ್ದಾರೆ.

ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ