ಪ್ರಶ್ನೆಗಾಗಿ ನಗದು ಪ್ರಕರಣ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆಗೆ ನೈತಿಕ ಸಮಿತಿ ಶಿಫಾರಸು

ಸಮಿತಿಯು ತನ್ನ 500 ಪುಟಗಳ ಕರಡು ವರದಿಯಲ್ಲಿ, ಪ್ರಶ್ನೆಗಾಗಿ ನಗದು ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರದಿಂದ ಕಾನೂನುಬದ್ಧ, ಸಂಪೂರ್ಣ, ಸಾಂಸ್ಥಿಕ ಮತ್ತು ಸಮಯ ಬದ್ಧ ತನಿಖೆಯಾಗಬೇಕು ಎಂದು ಲೋಕಸಭೆಯ ನೈತಿಕ ಸಮಿತಿ ಶಿಫಾರಸು ಮಾಡಿದೆ.

ಪ್ರಶ್ನೆಗಾಗಿ ನಗದು ಪ್ರಕರಣ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆಗೆ ನೈತಿಕ ಸಮಿತಿ ಶಿಫಾರಸು
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
Follow us
Ganapathi Sharma
|

Updated on: Nov 08, 2023 | 9:56 PM

ನವದೆಹಲಿ, ನವೆಂಬರ್ 8: ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದ (Cash for Query Case) ಆರೋಪಕ್ಕೆ ಸಂಬಂಧಿಸಿದಂತೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರನ್ನು ಸಂಸದ ಸ್ಥಾನದಿಂದ ಉಚ್ಚಾಟಿಸುವಂತೆ ಲೋಕಸಭೆಯ ನೈತಿಕ ಸಮಿತಿ ಶಿಫಾರಸು ಮಾಡಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದಷ್ಟೇ ಲೋಕಸಭೆಯ ನೈತಿಕ ಸಮಿತಿಯ ಮುಂದೆ ಮೊಯಿತ್ರಾ ವಿಚಾರಣೆಗೆ ಹಾಜರಾಗಿದ್ದರು. ಉದ್ಯಮಿ ದರ್ಶನ್ ಹಿರಾನಂದನಿ ಅವರೊಂದಿಗೆ ಸಂಸತ್ತಿನ ಲಾಗಿನ್ ವಿವರಗಳನ್ನು ಹಂಚಿಕೊಳ್ಳುವಾಗ ತಾನು ಯಾವುದೇ ಸಂಸದೀಯ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಸಮಿತಿಗೆ ಮೊಯಿತ್ರಾ ಸಮಿತಿಗೆ ತಿಳಿಸಿದ್ದರು.

ಸಮಿತಿಯು ತನ್ನ 500 ಪುಟಗಳ ಕರಡು ವರದಿಯಲ್ಲಿ, ಪ್ರಶ್ನೆಗಾಗಿ ನಗದು ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರದಿಂದ ಕಾನೂನುಬದ್ಧ, ಸಂಪೂರ್ಣ, ಸಾಂಸ್ಥಿಕ ಮತ್ತು ಸಮಯ ಬದ್ಧ ತನಿಖೆಯಾಗಬೇಕು ಎಂದು ಶಿಫಾರಸು ಮಾಡಿದೆ. ಉದ್ಯಮಿಯೊಂದಿಗೆ ಲೋಕಸಭೆಯ ಲಾಗ್-ಇನ್ ಕ್ರೆಡೆನ್ಷಿಯಲ್ಸ್ ಹಂಚಿಕೊಂಡ ಗಂಭೀರ ಅಪರಾಧಕ್ಕೆ ಕಠಿಣ ಶಿಕ್ಷೆಯಾಗಬೇಕು ಎಂದು ಸಮಿತಿ ಹೇಳಿದೆ ಎನ್ನಲಾಗಿದೆ.

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಅದಾನಿ ಗ್ರೂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಎತ್ತಲು ಹೀರಾನಂದನಿಯಿಂದ ಲಂಚ ಪಡೆದ ಆರೋಪದಲ್ಲಿ ವಿವಾದಕ್ಕೆ ಸಿಲುಕಿದ್ದಾರೆ. ಈ ಆರೋಪವನ್ನು ಅವರು ನಿರಾಕರಿಸಿದ್ದಾರೆ. ಕಳೆದ ತಿಂಗಳು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದ ನಂತರ ವಿವಾದ ಪ್ರಾರಂಭವಾಯಿತು. ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಹಣಕಾಸಿನ ಅನುಕೂಲಗಳು ಮತ್ತು ಉಡುಗೊರೆಗಳ ರೂಪದಲ್ಲಿ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸ ದುಬೆ ಆರೋಪಿಸಿದ್ದರು.

ಇದನ್ನೂ ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆಗೆ ಆದೇಶ

ನಂತರ ಸಂಸತ್ತಿನ ಲಾಗಿನ್ ಮತ್ತು ಪಾಸ್‌ವರ್ಡ್ ವಿವರಗಳನ್ನು ಸ್ನೇಹಿತ ಮತ್ತು ಉದ್ಯಮಿ ದರ್ಶನ್ ಹಿರಾನಂದನಿಗೆ ನೀಡಿದ್ದಾಗಿ ಮೊಯಿತ್ರಾ ಒಪ್ಪಿಕೊಂಡಿದ್ದರು. ಇದಾದ ಬಳಿಕ ವಿವಾದ ತೀವ್ರ ಸ್ವರೂಪ ಪಡೆದಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ