‘ಪ್ರಶ್ನೆಗಾಗಿ ನಗದು’ ಪ್ರಕರಣ: ಮಹುವಾ ಮೊಯಿತ್ರಾ ಸಲ್ಲಿಸಿದ ಅರ್ಜಿ ವಿಚಾರಣೆ ಜ.3ಕ್ಕೆ ಮುಂದೂಡಿದ ಸುಪ್ರೀಂ

ಲೋಕಸಭೆಯಿಂದ ಉಚ್ಚಾಟನೆಗೊಂಡ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಗೊಂಡಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 3, 2024ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.

'ಪ್ರಶ್ನೆಗಾಗಿ ನಗದು' ಪ್ರಕರಣ: ಮಹುವಾ ಮೊಯಿತ್ರಾ ಸಲ್ಲಿಸಿದ ಅರ್ಜಿ ವಿಚಾರಣೆ ಜ.3ಕ್ಕೆ ಮುಂದೂಡಿದ ಸುಪ್ರೀಂ
ಮಹುವಾ ಮೊಯಿತ್ರಾ
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 15, 2023 | 2:09 PM

ಹೊಸದಿಲ್ಲಿ. ಡಿ.15: ಲೋಕಸಭೆಯಿಂದ ಉಚ್ಚಾಟನೆಗೊಂಡ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಗೊಂಡಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 3, 2024ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ. ‘ಪ್ರಶ್ನೆಗಾಗಿ ನಗದು’ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಲಾಗಿತ್ತು.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿ ಎನ್ ಭಟ್ಟಿ ಅವರ ಪೀಠವು ಶುಕ್ರವಾರ ಬೆಳಿಗ್ಗೆ ಈ ಪ್ರಕರಣವನ್ನು ಕೈಗೆತ್ತಿಗೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಅಧ್ಯಾಯನ ನಡೆಸಬೇಕಿದೆ ಹಾಗೂ ಪರಿಶೀಲಿಸಲು ಸಮಯ ಬೇಕಾಗುತ್ತದೆ ಎಂದು ಹೇಳಿದರು. ಇನ್ನು ಕೋರ್ಟ್​​​ನಲ್ಲಿ ಮೊಯಿತ್ರಾ ಪರ ಹಿರಿಯ ವಕೀಲ ಎ ಎಂ ಸಿಂಘ್ವಿ, ವಾದ ಮಂಡಿಸಲು ಮುಂದಾಗಿದ್ದಾರೆ. ವೇಳೆ ಪೀಠವು ಚಳಿಗಾಲದ ರಜೆಯ ನಂತರ ನ್ಯಾಯಾಲಯದಲ್ಲಿ ಈ ಬಗ್ಗೆ ಅರ್ಜಿಯನ್ನು ತೆಗೆದುಕೊಳ್ಳಾಗುವುದು ಎಂದು ವಿಚಾರಣೆಯನ್ನು ಮುಂದೂಡಿತು.

ಮೊಯಿತ್ರಾ ಅವರು ಲೋಕಸಭೆಯಿಂದ ಹೊರ ಹಾಕಿದ ನಂತರ ಈ ಅರ್ಜಿಯನ್ನು ಸುಪ್ರೀಂಗೆ ಸಲ್ಲಿಸಿದ್ದಾರೆ. ಲೋಕಸಭೆ ತೆಗೆದುಕೊಂಡ ನಿರ್ಧಾರ ತುಂಬಾ ಅನ್ಯಾಯವಾಗಿದೆ ನ್ಯಾಯದ ತತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ತನ್ನ ಸಂಸದೀಯ ಪೋರ್ಟಲ್‌ನ ಲಾಗಿನ್ ರುಜುವಾತುಗಳನ್ನು ಉದ್ಯಮಿ ದರ್ಶನ್ ಹಿರಾನಂದನಿ ಅವರೊಂದಿಗೆ ಹಂಚಿಕೊಳ್ಳುವ ಮೂಲಕ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದಿದ್ದಕ್ಕಾಗಿ ಲೋಕಸಭೆಯ ನೈತಿಕ ಸಮಿತಿಯು ಅವರನ್ನು ತಪ್ಪಿತಸ್ಥರೆಂದು ಹೇಳಿದೆ. ನಂತರ ಅವರನ್ನು ಸಂಸತ್ತಿನಿಂದ ಹೊರಹಾಕಲಾಗಿದೆ.

ಇದನ್ನೂ ಓದಿ: ಲೋಕಸಭೆಯಿಂದ ಮಹುವಾ ಮೊಯಿತ್ರಾ ಉಚ್ಛಾಟನೆ;ವಿಪಕ್ಷ ನಾಯಕರು ಏನಂದ್ರು?

ಉದ್ಯಮಿ ಹೀರಾನಂದಾನಿ ಅವರ ಆದೇಶದ ಮೇರೆಗೆ ಅದಾನಿ ಸಮೂಹದ ಕಂಪನಿಗಳ ಕುರಿತು ಸಂಸತ್ತಿನಲ್ಲಿ ಹಲವಾರು ಪ್ರಶ್ನೆಗಳನ್ನು ಮೊಯಿತ್ರಾ ಎತ್ತಿದ್ದಾರೆ ಎಂದು ಹೇಳಿದ್ದಾರೆ. ಡಿಸೆಂಬರ್ 8ರಂದು ಲೋಕಸಭೆಯು ಮೊಯಿತ್ರಾ ಅವರನ್ನು ಸಂಸದೀಯ ಸ್ಥಾನದಿಂದ ಅನರ್ಹಗೊಳಿಸಲು ಶಿಫಾರಸ್ಸು ಮಾಡುವ ನೈತಿಕ ಸಮಿತಿಯ ದೃಷ್ಟಿಯಿಂದ ಅವರನ್ನು ಸಂಸತ್ತಿನಿಂದ ಹೊರಹಾಕುವ ನಿರ್ಣಯವನ್ನು ಅಂಗೀಕರಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:12 pm, Fri, 15 December 23

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ