ಹೊಸದಿಲ್ಲಿ. ಡಿ.15: ಲೋಕಸಭೆಯಿಂದ ಉಚ್ಚಾಟನೆಗೊಂಡ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಗೊಂಡಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 3, 2024ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ. ‘ಪ್ರಶ್ನೆಗಾಗಿ ನಗದು’ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಲಾಗಿತ್ತು.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿ ಎನ್ ಭಟ್ಟಿ ಅವರ ಪೀಠವು ಶುಕ್ರವಾರ ಬೆಳಿಗ್ಗೆ ಈ ಪ್ರಕರಣವನ್ನು ಕೈಗೆತ್ತಿಗೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಅಧ್ಯಾಯನ ನಡೆಸಬೇಕಿದೆ ಹಾಗೂ ಪರಿಶೀಲಿಸಲು ಸಮಯ ಬೇಕಾಗುತ್ತದೆ ಎಂದು ಹೇಳಿದರು. ಇನ್ನು ಕೋರ್ಟ್ನಲ್ಲಿ ಮೊಯಿತ್ರಾ ಪರ ಹಿರಿಯ ವಕೀಲ ಎ ಎಂ ಸಿಂಘ್ವಿ, ವಾದ ಮಂಡಿಸಲು ಮುಂದಾಗಿದ್ದಾರೆ. ವೇಳೆ ಪೀಠವು ಚಳಿಗಾಲದ ರಜೆಯ ನಂತರ ನ್ಯಾಯಾಲಯದಲ್ಲಿ ಈ ಬಗ್ಗೆ ಅರ್ಜಿಯನ್ನು ತೆಗೆದುಕೊಳ್ಳಾಗುವುದು ಎಂದು ವಿಚಾರಣೆಯನ್ನು ಮುಂದೂಡಿತು.
ಮೊಯಿತ್ರಾ ಅವರು ಲೋಕಸಭೆಯಿಂದ ಹೊರ ಹಾಕಿದ ನಂತರ ಈ ಅರ್ಜಿಯನ್ನು ಸುಪ್ರೀಂಗೆ ಸಲ್ಲಿಸಿದ್ದಾರೆ. ಲೋಕಸಭೆ ತೆಗೆದುಕೊಂಡ ನಿರ್ಧಾರ ತುಂಬಾ ಅನ್ಯಾಯವಾಗಿದೆ ನ್ಯಾಯದ ತತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ತನ್ನ ಸಂಸದೀಯ ಪೋರ್ಟಲ್‌ನ ಲಾಗಿನ್ ರುಜುವಾತುಗಳನ್ನು ಉದ್ಯಮಿ ದರ್ಶನ್ ಹಿರಾನಂದನಿ ಅವರೊಂದಿಗೆ ಹಂಚಿಕೊಳ್ಳುವ ಮೂಲಕ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದಿದ್ದಕ್ಕಾಗಿ ಲೋಕಸಭೆಯ ನೈತಿಕ ಸಮಿತಿಯು ಅವರನ್ನು ತಪ್ಪಿತಸ್ಥರೆಂದು ಹೇಳಿದೆ. ನಂತರ ಅವರನ್ನು ಸಂಸತ್ತಿನಿಂದ ಹೊರಹಾಕಲಾಗಿದೆ.
ಇದನ್ನೂ ಓದಿ: ಲೋಕಸಭೆಯಿಂದ ಮಹುವಾ ಮೊಯಿತ್ರಾ ಉಚ್ಛಾಟನೆ;ವಿಪಕ್ಷ ನಾಯಕರು ಏನಂದ್ರು?
ಉದ್ಯಮಿ ಹೀರಾನಂದಾನಿ ಅವರ ಆದೇಶದ ಮೇರೆಗೆ ಅದಾನಿ ಸಮೂಹದ ಕಂಪನಿಗಳ ಕುರಿತು ಸಂಸತ್ತಿನಲ್ಲಿ ಹಲವಾರು ಪ್ರಶ್ನೆಗಳನ್ನು ಮೊಯಿತ್ರಾ ಎತ್ತಿದ್ದಾರೆ ಎಂದು ಹೇಳಿದ್ದಾರೆ. ಡಿಸೆಂಬರ್ 8ರಂದು ಲೋಕಸಭೆಯು ಮೊಯಿತ್ರಾ ಅವರನ್ನು ಸಂಸದೀಯ ಸ್ಥಾನದಿಂದ ಅನರ್ಹಗೊಳಿಸಲು ಶಿಫಾರಸ್ಸು ಮಾಡುವ ನೈತಿಕ ಸಮಿತಿಯ ದೃಷ್ಟಿಯಿಂದ ಅವರನ್ನು ಸಂಸತ್ತಿನಿಂದ ಹೊರಹಾಕುವ ನಿರ್ಣಯವನ್ನು ಅಂಗೀಕರಿಸಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:12 pm, Fri, 15 December 23