ರಾಜಸ್ಥಾನದ ಯೋಜನಾ ಭವನದ ನೆಲಮಾಳಿಗೆಯಲ್ಲಿ ₹ 2.31 ಕೋಟಿ ನಗದು,1 ಕೆಜಿ ಚಿನ್ನ ಪತ್ತೆ

ಒಂದು ಅಲ್ಮೇರಾದಿಂದ ಫೈಲ್‌ಗಳು ಮತ್ತು ಟ್ರಾಲಿ ಸೂಟ್‌ಕೇಸ್‌ನಲ್ಲಿ ನಗದು ಮತ್ತು ಚಿನ್ನ ತುಂಬಿರುವುದು ಪತ್ತೆಯಾಗಿದ್ದು, ನೌಕರರು ಅಶೋಕ್ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದು ಶ್ರೀವಾಸ್ತವ ಹೇಳಿದ್ದಾರೆ. ನಗದು ಮೊತ್ತ ₹ 2.31 ಕೋಟಿ ಮತ್ತು ಚಿನ್ನದ ತೂಕ 1 ಕೆ.ಜಿ ಇದೆ ಎಂದಿದ್ದಾರೆ ಅವರು.

ರಾಜಸ್ಥಾನದ ಯೋಜನಾ ಭವನದ ನೆಲಮಾಳಿಗೆಯಲ್ಲಿ ₹ 2.31 ಕೋಟಿ ನಗದು,1 ಕೆಜಿ ಚಿನ್ನ ಪತ್ತೆ
ಯೋಜನಾ ಭವನ
Follow us
ರಶ್ಮಿ ಕಲ್ಲಕಟ್ಟ
|

Updated on: May 20, 2023 | 5:09 PM

ಜೈಪುರ: ಜೈಪುರದ (Jaipur) ಯೋಜನಾ ಭವನದ (Yojana Bhawan) ನೆಲಮಾಳಿಗೆಯಲ್ಲಿ ಬೀಗ ಹಾಕಲಾಗಿದ್ದ ಅಲ್ಮೇರಾದಿಂದ ₹ 2.31 ಕೋಟಿಗೂ ಹೆಚ್ಚು ನಗದು ಮತ್ತು ಒಂದು ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ನೆಲಮಾಳಿಗೆಗೆ ಪ್ರವೇಶ ಹೊಂದಿರುವ ಯೋಜನಾ ಭವನದ ಏಳು ಉದ್ಯೋಗಿಗಳನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಲ್ಮೇರಾದಲ್ಲಿ ಇರಿಸಲಾಗಿದ್ದ ಟ್ರಾಲಿ ಸೂಟ್‌ಕೇಸ್‌ನಲ್ಲಿ ₹ 2,000 ಮತ್ತು ₹ 500 ಮುಖಬೆಲೆಯ ನೋಟುಗಳಿದ್ದವು, ಆರ್‌ಬಿಐ ₹ 2,000 ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಂಡ ದಿನದಂದು ಇದು ಪತ್ತೆಯಾಗಿದೆ ಪೊಲೀಸರು ತಿಳಿಸಿದ್ದಾರೆ. ನಗದು,ಚಿನ್ನ ವಶಪಡಿಸಿಕೊಂಡ ನಂತರ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ವಿಷಯದ ಬಗ್ಗೆ ವಿವರಿಸಲಾಗಿದೆ.

ಮುಖ್ಯ ಕಾರ್ಯದರ್ಶಿ ಉಷಾ ಶರ್ಮಾ, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಉಮೇಶ್ ಮಿಶ್ರಾ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ದಿನೇಶ್ ಎಂಎನ್ ಮತ್ತು ಜೈಪುರ ಕಮಿಷನರ್ ಆನಂದ ಶ್ರೀವಾಸ್ತವ ಅವರು ಶುಕ್ರವಾರ ತಡರಾತ್ರಿ ಸಚಿವಾಲಯದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಒಂದು ಅಲ್ಮೇರಾದಿಂದ ಫೈಲ್‌ಗಳು ಮತ್ತು ಟ್ರಾಲಿ ಸೂಟ್‌ಕೇಸ್‌ನಲ್ಲಿ ನಗದು ಮತ್ತು ಚಿನ್ನ ತುಂಬಿರುವುದು ಪತ್ತೆಯಾಗಿದ್ದು, ನೌಕರರು ಅಶೋಕ್ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದು ಶ್ರೀವಾಸ್ತವ ಹೇಳಿದ್ದಾರೆ. ನಗದು ಮೊತ್ತ ₹ 2.31 ಕೋಟಿ ಮತ್ತು ಚಿನ್ನದ ತೂಕ 1 ಕೆ.ಜಿ ಇದೆ ಎಂದಿದ್ದಾರೆ ಅವರು.

ಇ-ಫೈಲಿಂಗ್ ಯೋಜನೆಯಡಿ ಕಡತಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗುತ್ತಿದೆ.ಇಂದು ಬೀಗ ಹಾಕಿದ್ದ ಎರಡು ಕಪಾಟುಗಳ ಕೀಗಳು ಪತ್ತೆಯಾದ ನಂತರ ಅವುಗಳನ್ನು ತೆರೆಯಲಾಗಿದೆ ಎಂದು ಅವರು ಹೇಳಿದರು. ಏಳು ಮಂದಿ ನೌಕರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸಂಪೂರ್ಣ ಪ್ರಕರಣದ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಶ್ರೀವಾಸ್ತವ ಹೇಳಿದರು. ಶೀಘ್ರದಲ್ಲೇ ಸಂಪೂರ್ಣ ವಿಷಯವನ್ನು ಬಹಿರಂಗಪಡಿಸುವುದಾಗಿ ಜೈಪುರ ಪೊಲೀಸ್ ಕಮಿಷನರ್ ಹೇಳಿದ್ದಾರೆ.

ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡ ಬೀರು ಹಲವು ತಿಂಗಳುಗಳಿಂದ ಬೀಗ ಹಾಕಲಾಗಿತ್ತು. ಆಧಾರ್-ಯುಐಡಿ-ಸಂಯೋಜಿತ ಸಿಬ್ಬಂದಿಯಿಂದ ನಗದು ಪತ್ತೆಯಾದ ನೆಲಮಾಳಿಗೆಯನ್ನು ಪ್ರವೇಶಿಸಲಾಯಿತು. ನೆಲಮಾಳಿಗೆಯಲ್ಲಿ ಕಪಾಟಿನಲ್ಲಿ ಪ್ರವೇಶ ಹೊಂದಿರುವವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಯಾರ ಹಣ, ಅದು ಹೇಗೆ ಬಂತು, ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಈ ಬೀರು ಅನ್ನು ಬಹಳ ಸಮಯದಿಂದ ಮುಚ್ಚಲಾಗಿದೆ ಆದರೆ ಎರಡು ಮೂರು ವರ್ಷವೂ ಆಗಿಲ್ಲ ಎಂದು ತೋರುತ್ತದೆ ಎಂದು ಅವರು ಹೇಳಿದರು. ವಿಪಕ್ಷ ಬಿಜೆಪಿಈ ವಿಷಯದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿದೆ.

ಇದನ್ನೂ ಓದಿ: ಜಪಾನ್‌ನಲ್ಲಿ ಭಾಷಾತಜ್ಞ, ಲೇಖಕ ಟೊಮಿಯೊ ಮಿಜೋಕಾಮಿಯನ್ನು ಭೇಟಿ ಮಾಡಿದ ಮೋದಿ; ಯಾರು ಈ ವ್ಯಕ್ತಿ?

ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಜೇಂದ್ರ ರಾಥೋಡ್ ಈ ಬಗ್ಗೆ ಟ್ವೀಟ್ ಮಾಡಿದ್ದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕುಳಿತು ಸರ್ಕಾರವನ್ನು ನಡೆಸುತ್ತಿರುವ ರಾಜಸ್ಥಾನದ ಸಚಿವಾಲಯದಿಂದ ಕೋಟ್ಯಂತರ ರೂಪಾಯಿ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡಿರುವುದು ಗೆಹ್ಲೋಟ್ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಯೋಜನಾ ಭವನಕ್ಕೆ ಇಷ್ಟು ದೊಡ್ಡ ಮೊತ್ತದ ನಗದು ಮತ್ತು ಚಿನ್ನ ಹೇಗೆ ತಲುಪಿತು ಎಂಬುದನ್ನು ಮುಖ್ಯಮಂತ್ರಿಗಳು ಉತ್ತರಿಸಬೇಕು ಎಂದರು.

ಮಾಹಿತಿ ತಂತ್ರಜ್ಞಾನ (ಐಟಿ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ಭ್ರಷ್ಟಾಚಾರ ನಿಗ್ರಹ ಬ್ಯೂರೋ (ಎಸಿಬಿ) ನಂತಹ ಇಲಾಖೆಗಳ ಯಾವುದೇ ಅಧಿಕಾರಿಗಳು ತಮ್ಮ ಕೃತ್ಯಗಳನ್ನು ಮರೆಮಾಚಲು ತರಾತುರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿಲ್ಲ ಎಂದು ಬಿಜೆಪಿ ನಾಯಕ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್