AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ದೆಹಲಿಯಲ್ಲಿ ನಗದು ವ್ಯಾನ್ ದರೋಡೆ; ಭದ್ರತಾ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ

4.50ರ ಕ್ಯಾಶ್ ವ್ಯಾನ್ ಕಿಯೋಸ್ಕ್‌ಗೆ ಹಣ ಹಾಕಲು ಎಟಿಎಂಗೆ ಬಂದಾಗ ಈ ಘಟನೆ ಸಂಭವಿಸಿದೆ. ಆಗ ಹಿಂಬದಿಯಿಂದ ಬಂದ ವ್ಯಕ್ತಿಯೊಬ್ಬ ಕ್ಯಾಶ್ ವ್ಯಾನ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣದೊಂದಿಗೆ ಪರಾರಿಯಾಗಿದ್ದಾನೆ.

ಉತ್ತರ ದೆಹಲಿಯಲ್ಲಿ ನಗದು ವ್ಯಾನ್ ದರೋಡೆ; ಭದ್ರತಾ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jan 10, 2023 | 8:08 PM

Share

ಉತ್ತರ ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ ದರೋಡೆ (robbery) ಯತ್ನದ ವೇಳೆ ಅಪರಿಚಿತ ವ್ಯಕ್ತಿಯೊಬ್ಬರು ಗುಂಡು ಹಾರಿಸಿದ ಕಾರಣ ಭದ್ರತಾ ಸಿಬ್ಬಂದಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಜಗತ್‌ಪುರ ಮೇಲ್ಸೇತುವೆ ಬಳಿಯಿರುವ ಐಸಿಐಸಿಐ ಬ್ಯಾಂಕ್ ಎಟಿಎಂ ಕಿಯೋಸ್ಕ್‌ನಲ್ಲಿ ಈ ಘಟನೆ ನಡೆದಿದ್ದು, ಸಂಜೆ 5 ಗಂಟೆ ಸುಮಾರಿಗೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಜೈ ಸಿಂಗ್ (55) ಎಂದು ಗುರುತಿಸಲಾಗಿದೆ.ಸಂಜೆ 4.50ರ ಕ್ಯಾಶ್ ವ್ಯಾನ್ ಕಿಯೋಸ್ಕ್‌ಗೆ ಹಣ ಹಾಕಲು ಎಟಿಎಂಗೆ ಬಂದಾಗ ಈ ಘಟನೆ ಸಂಭವಿಸಿದೆ. ಆಗ ಹಿಂಬದಿಯಿಂದ ಬಂದ ವ್ಯಕ್ತಿಯೊಬ್ಬ ಕ್ಯಾಶ್ ವ್ಯಾನ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣದೊಂದಿಗೆ ಪರಾರಿಯಾಗಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ತಿಳಿಸಿದ್ದಾರೆ.

ಆರೋಪಿಗಳು ಅಂದಾಜು 8 ಲಕ್ಷ ರೂ.ಗಳನ್ನು ತೆಗೆದುಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಚುನಾವಣೆ ನಮ್ಮ ಹಕ್ಕು ಆದರೆ ಅದಕ್ಕಾಗಿ ಬೇಡುವುದಿಲ್ಲ: ಒಮರ್ ಅಬ್ದುಲ್ಲಾ

ಗಾಯಗೊಂಡ ಸಿಬ್ಬಂದಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಆರೋಪಿಗಳನ್ನು ಗುರುತಿಸಲು ಮತ್ತು ಘಟನೆಗಳ ಅನುಕ್ರಮವನ್ನು ಕಂಡುಹಿಡಿಯಲು ಅನೇಕ ತಂಡಗಳನ್ನು ರಚಿಸಲಾಗಿದೆ ಮತ್ತು ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳಿಂದ ದೃಶ್ಯಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್