ಉತ್ತರ ದೆಹಲಿಯಲ್ಲಿ ನಗದು ವ್ಯಾನ್ ದರೋಡೆ; ಭದ್ರತಾ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ

| Updated By: ರಶ್ಮಿ ಕಲ್ಲಕಟ್ಟ

Updated on: Jan 10, 2023 | 8:08 PM

4.50ರ ಕ್ಯಾಶ್ ವ್ಯಾನ್ ಕಿಯೋಸ್ಕ್‌ಗೆ ಹಣ ಹಾಕಲು ಎಟಿಎಂಗೆ ಬಂದಾಗ ಈ ಘಟನೆ ಸಂಭವಿಸಿದೆ. ಆಗ ಹಿಂಬದಿಯಿಂದ ಬಂದ ವ್ಯಕ್ತಿಯೊಬ್ಬ ಕ್ಯಾಶ್ ವ್ಯಾನ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣದೊಂದಿಗೆ ಪರಾರಿಯಾಗಿದ್ದಾನೆ.

ಉತ್ತರ ದೆಹಲಿಯಲ್ಲಿ ನಗದು ವ್ಯಾನ್ ದರೋಡೆ; ಭದ್ರತಾ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ
ಪ್ರಾತಿನಿಧಿಕ ಚಿತ್ರ
Follow us on

ಉತ್ತರ ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ ದರೋಡೆ (robbery) ಯತ್ನದ ವೇಳೆ ಅಪರಿಚಿತ ವ್ಯಕ್ತಿಯೊಬ್ಬರು ಗುಂಡು ಹಾರಿಸಿದ ಕಾರಣ ಭದ್ರತಾ ಸಿಬ್ಬಂದಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಜಗತ್‌ಪುರ ಮೇಲ್ಸೇತುವೆ ಬಳಿಯಿರುವ ಐಸಿಐಸಿಐ ಬ್ಯಾಂಕ್ ಎಟಿಎಂ ಕಿಯೋಸ್ಕ್‌ನಲ್ಲಿ ಈ ಘಟನೆ ನಡೆದಿದ್ದು, ಸಂಜೆ 5 ಗಂಟೆ ಸುಮಾರಿಗೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಜೈ ಸಿಂಗ್ (55) ಎಂದು ಗುರುತಿಸಲಾಗಿದೆ.ಸಂಜೆ 4.50ರ ಕ್ಯಾಶ್ ವ್ಯಾನ್ ಕಿಯೋಸ್ಕ್‌ಗೆ ಹಣ ಹಾಕಲು ಎಟಿಎಂಗೆ ಬಂದಾಗ ಈ ಘಟನೆ ಸಂಭವಿಸಿದೆ. ಆಗ ಹಿಂಬದಿಯಿಂದ ಬಂದ ವ್ಯಕ್ತಿಯೊಬ್ಬ ಕ್ಯಾಶ್ ವ್ಯಾನ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣದೊಂದಿಗೆ ಪರಾರಿಯಾಗಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ತಿಳಿಸಿದ್ದಾರೆ.

ಆರೋಪಿಗಳು ಅಂದಾಜು 8 ಲಕ್ಷ ರೂ.ಗಳನ್ನು ತೆಗೆದುಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಚುನಾವಣೆ ನಮ್ಮ ಹಕ್ಕು ಆದರೆ ಅದಕ್ಕಾಗಿ ಬೇಡುವುದಿಲ್ಲ: ಒಮರ್ ಅಬ್ದುಲ್ಲಾ

ಗಾಯಗೊಂಡ ಸಿಬ್ಬಂದಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.
ಆರೋಪಿಗಳನ್ನು ಗುರುತಿಸಲು ಮತ್ತು ಘಟನೆಗಳ ಅನುಕ್ರಮವನ್ನು ಕಂಡುಹಿಡಿಯಲು ಅನೇಕ ತಂಡಗಳನ್ನು ರಚಿಸಲಾಗಿದೆ ಮತ್ತು ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳಿಂದ ದೃಶ್ಯಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ