AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಾತಿ ತಾರತಮ್ಯ ಹಿಂದೂ ಸಮಾಜಕ್ಕೆ ಅಂಟಿದ ಕಳಂಕ’; ಆರ್‌ಎಸ್‌ಎಸ್‌ ಕಾರ್ಯದರ್ಶಿ ದತ್ತಾತ್ರೆಯ ಹೊಸಬಾಳೆ ಬೇಸರ

ಜಾತಿ ಆಧಾರಿತ ತಾರತಮ್ಯವು "ಹಿಂದೂ ಸಮಾಜಕ್ಕೆ ಅಂಟಿದ ಕಳಂಕ" ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ನಮ್ಮ ನಡೆ-ನುಡಿ ಮತ್ತು ಆಚರಣೆಯ ಮೂಲಕ ಇಂತಹ ಭೇದಭಾವಗಳನ್ನು ಕೊನೆಗೊಳಿಸಲು ಶ್ರಮಿಸಬೇಕು ಎಂದು ಅವರು ಕರೆ ನೀಡಿದ್ದಾರೆ. ನಾವೆಲ್ಲರೂ ಭಾರತಾಂಬೆ ಮತ್ತು ದೇವರ ಮಕ್ಕಳು ಎಂಬುದನ್ನು ಒತ್ತಿಹೇಳಿದ ಅವರು, ಜನರ ನಡುವೆ ಯಾವುದೇ ರೀತಿಯ ತಾರತಮ್ಯ ಇರಬಾರದು ಎಂದಿದ್ದಾರೆ.

‘ಜಾತಿ ತಾರತಮ್ಯ ಹಿಂದೂ ಸಮಾಜಕ್ಕೆ ಅಂಟಿದ ಕಳಂಕ’; ಆರ್‌ಎಸ್‌ಎಸ್‌ ಕಾರ್ಯದರ್ಶಿ ದತ್ತಾತ್ರೆಯ ಹೊಸಬಾಳೆ ಬೇಸರ
ದತ್ತಾತ್ರೇಯ ಹೊಸಬಾಳೆ
ಸುಷ್ಮಾ ಚಕ್ರೆ
|

Updated on:Sep 20, 2026 | 11:09 PM

Share

ನವದೆಹಲಿ, ಸೆಪ್ಟೆಂಬರ್, 20: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್​ಎಸ್​ಎಸ್​) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಜಾತಿ ಆಧಾರಿತ ತಾರತಮ್ಯವನ್ನು “ಹಿಂದೂ ಸಮಾಜಕ್ಕೆ ಅಂಟಿದ ಕಳಂಕ” ಎಂದು ಟೀಕಿಸಿದ್ದು, ಇಂತಹ ಭೇದಭಾವಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಮಾಜಕ್ಕೆ ಕರೆ ನೀಡಿದ್ದಾರೆ.   ಮಧ್ಯಪ್ರದೇಶದ ಭೋಪಾಲ್‌ನ ಲಾಲ್ ಪರೇಡ್ ಮೈದಾನದಲ್ಲಿ ನಡೆದ ಆರ್‌ಎಸ್‌ಎಸ್ ಶತಮಾನೋತ್ಸವ ವರ್ಷದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಹುಟ್ಟಿನ ಆಧಾರದ ಮೇಲೆ ತಾರತಮ್ಯ ಮಾಡುವುದು ಹಿಂದೂ ಸಂಸ್ಕೃತಿಯ ಭಾಗವಲ್ಲ. ಇಂತಹ ಜಾತಿಯ ಭೇದಭಾವಗಳು ಸಮಾಜವನ್ನು ಒಳಗಿನಿಂದಲೇ ದುರ್ಬಲಗೊಳಿಸುತ್ತವೆ ಎಂದಿದ್ದಾರೆ.

“ನಾವೆಲ್ಲರೂ ಭಾರತಾಂಬೆಯ ಮಕ್ಕಳು. ನಾವೆಲ್ಲರೂ ದೇವರ ಮಕ್ಕಳು. ಆದ್ದರಿಂದ, ಮಾನವರ ನಡುವೆ ಯಾವುದೇ ರೀತಿಯ ತಾರತಮ್ಯ ಇರಬಾರದು” ಎಂದು ಭಾನುವಾರ ಭೋಪಾಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದತ್ತಾತ್ರೇಯ ಹೊಸಬಾಳೆ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ‘ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಭಾವಿಸುವವರು ಹಿಂದೂಗಳೇ ಅಲ್ಲ’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಸಮಾಜ ಒಗ್ಗೂಡಬೇಕಾದರೆ ಜಾತಿ, ಪಂಥ, ಭಾಷೆ, ಪ್ರಾಂತ್ಯ (ಉತ್ತರ ಭಾರತ ಅಥವಾ ದಕ್ಷಿಣ ಭಾರತ) ಎಂಬ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮರೆಯಬೇಕು.  ಪ್ರತಿಯೊಂದು ಬೆರಳಿಗೂ ತನ್ನದೇ ಶಕ್ತಿಯಿರುತ್ತದೆ. ಆದರೆ ನಾಲ್ಕೂ ಬೆರಳುಗಳು ಒಟ್ಟಿಗೆ ಬಂದು ಹೆಬ್ಬೆರಳು ಅವುಗಳ ಮೇಲಿಟ್ಟಾಗ ಮೂಡುವ ‘ಬಿಗಿಮುಷ್ಟಿ’ಯ ಸಂಘಟಿತ ಶಕ್ತಿಯೇ ನೈಜ ಶಕ್ತಿ ಎಂದು ಸಂಘಟನೆಯ ಮಹತ್ವವನ್ನು ಅವರು ವಿವರಿಸಿದರು.

ಹುಟ್ಟಿನ ಆಧಾರದ ಮೇಲಿನ ತಾರತಮ್ಯ ಹಿಂದೂ ಸಂಸ್ಕೃತಿಯ ಭಾಗವಲ್ಲ:

“ಹುಟ್ಟಿನ ಆಧಾರದ ಮೇಲಿನ ತಾರತಮ್ಯ ಹಿಂದೂ ಸಂಸ್ಕೃತಿಯ ಭಾಗವಲ್ಲ” ಎಂದ ಅವರು, ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ನಡೆಯುವ ನಾನಾ ರೀತಿಯ ಕೆಟ್ಟ ವರ್ತನೆಗಳು ಸಮಾಜವನ್ನು ದುರ್ಬಲಗೊಳಿಸುತ್ತವೆ ಮತ್ತು ಒಳಗಿನಿಂದಲೇ ಟೊಳ್ಳು ಮಾಡುತ್ತವೆ ಎಂದಿದ್ದಾರೆ. “ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ನಡೆಯುವ ವಿವಿಧ ರೀತಿಯ ದುಷ್ಟ ವರ್ತನೆಗಳು ಸಮಾಜವನ್ನು ಕ್ಷೀಣಗೊಳಿಸುತ್ತವೆ, ದುರ್ಬಲಗೊಳಿಸುತ್ತವೆ ಮತ್ತು ಟೊಳ್ಳು ಮಾಡುತ್ತವೆ” ಎಂದು ಹೊಸಬಾಳೆ ಹೇಳಿದ್ದಾರೆ.

ಇದನ್ನೂ ಓದಿ: “ಬೇಕಾದರೆ ಆರ್‌ಎಸ್‌ಎಸ್​​​​ನ ನೊಂದಣಿ ಶುಲ್ಕವನ್ನು ನಾನೇ ಕಟ್ಟುತ್ತೇನೆ”: ಸಚಿವ ಪ್ರಿಯಾಂಕ್ ಖರ್ಗೆ

‘ನಾವು ಜಾತಿಯ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ’ ಎಂದು ಜಾತಿ ಆಧಾರಿತ ತಾರತಮ್ಯದ ವಿರುದ್ಧ ಪ್ರತಿಯೊಬ್ಬರೂ ವೈಯಕ್ತಿಕ ಸಂಕಲ್ಪ ಮಾಡುವಂತೆ ಹೊಸಬಾಳೆ ಮನವಿ ಮಾಡಿದ್ದಾರೆ. ಈ ಆಚರಣೆಯನ್ನು ಕೊನೆಗೊಳಿಸಲು ಕೇವಲ ಕಾನೂನುಗಳು ಅಥವಾ ಉಪದೇಶಗಳಿಗಿಂತ ಹೆಚ್ಚಾಗಿ ಜನರ ಸ್ವಂತ ನಡವಳಿಕೆಯನ್ನು ನೆಚ್ಚಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

“ಇದು ಕೇವಲ ಕಾನೂನಿನಿಂದಾಗಲಿ, ಭಗವಂತನ ಅವತಾರದಿಂದಾಗಲಿ ಅಥವಾ ಯಾರೋ ನೀಡುವ ಉಪದೇಶದಿಂದಾಗಲಿ ಬದಲಾಗುವುದಿಲ್ಲ. ಇದು ನಮ್ಮ ಸ್ವಂತ ನಡವಳಿಕೆಯಿಂದಷ್ಟೇ ಸಾಧ್ಯ” ಎಂದು ಹೊಸಬಾಳೆ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 pm, Sun, 20 September 26

Follow Us
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್