AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನಲ್ಲಿ ಮತ್ತೆ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು; ರೈಲಿನ ಮುಂಭಾಗ ಜಖಂ, ಪ್ರಯಾಣಿಕರು ಸೇಫ್

ರೈಲ್ವೆ ಹಳಿ ಮೇಲೆ ನಿಂತಿದ್ದ ಹಸುವಿಗೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಗುಜರಾತ್​ನ ಅಟಲ್​ ಸ್ಟೇಷನ್​ಗೆ ತೆರಳುವಾಗ ಈ ಘಟನೆ ನಡೆದಿದೆ.

ಗುಜರಾತ್​​ನಲ್ಲಿ ಮತ್ತೆ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು; ರೈಲಿನ ಮುಂಭಾಗ ಜಖಂ, ಪ್ರಯಾಣಿಕರು ಸೇಫ್
ಗುಜರಾತ್​​ನಲ್ಲಿ ಮತ್ತೆ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು
TV9 Web
| Edited By: |

Updated on:Oct 29, 2022 | 1:31 PM

Share

ಮುಂಬೈ: ಇತ್ತೀಚೆಗಷ್ಟೇ ಎಮ್ಮೆಗಳು ಡಿಕ್ಕಿ ಹೊಡೆದಿದ್ದರಿಂದ ಒಂದು ವಂದೇ ಭಾರತ್ ಎಕ್ಸ್​ಪ್ರೆಸ್ (Vande Bharat Express) ರೈಲಿನ ಮುಂಭಾಗ ಜಖಂ ಆಗಿತ್ತು. ಇದೀಗ ಮತ್ತೊಮ್ಮೆ ಅದೇ ರೀತಿಯ ಘಟನೆಯೊಂದು ನಡೆದಿದೆ. ಹಸುವಿಗೆ ಮುಂಬೈನಿಂದ ಅಹಮದಾಬಾದ್​ಗೆ ತೆರಳುತ್ತಿದ್ದ ವಂದೇ ಭಾರತ್​ ರೈಲು ಡಿಕ್ಕಿ ಹೊಡೆದಿದ್ದರಿಂದ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ.

ಗುಜರಾತ್​ನ ಅಟಲ್​ ಸ್ಟೇಷನ್​ಗೆ ತೆರಳುವಾಗ ಈ ಘಟನೆ ನಡೆದಿದೆ. ರೈಲ್ವೆ ಹಳಿ ಮೇಲೆ ನಿಂತಿದ್ದ ಹಸುವಿಗೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಈ ಘಟನೆ ನಡೆದ ನಂತರ ಕೆಲಕಾಲ ರೈಲನ್ನು ನಿಲ್ಲಿಸಲಾಯಿತು.

ಅತಿ ವೇಗದಲ್ಲಿ ಬರುತ್ತಿದ್ದ ವಂದೇ ಭಾರತ್ ರೈಲಿಗೆ ಹಸು ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಇಂದು ವಂದೇ ಭಾರತ್ ರೈಲು ಗುಜರಾತ್‌ನ ವಲ್ಸಾದ್‌ನಿಂದ ಹಾದು ಹೋಗುತ್ತಿದ್ದಾಗ ಹಸುವೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಆದರೆ, ಇದರಿಂದ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಈ ಘಟನೆಯ ಬಳಿಕ ರೈಲು ಕೆಲಕಾಲ ಅದೇ ಸ್ಥಳದಲ್ಲಿ ನಿಂತಿತ್ತು. ಸ್ವಲ್ಪ ಸಮಯದ ನಂತರ ರೈಲನ್ನು ಮುಂದಕ್ಕೆ ಕಳುಹಿಸಲಾಯಿತು.

ಇದನ್ನೂ ಓದಿ: Vande Bharat Express: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎಮ್ಮೆಗಳ ಹಿಂಡಿಗೆ ಡಿಕ್ಕಿ, ಇಂಜಿನ್‌ನ ಮುಂಭಾಗಕ್ಕೆ ಹಾನಿ

ಗುಜರಾತ್‌ನಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲು 1 ತಿಂಗಳಲ್ಲಿ ಮೂರನೇ ಬಾರಿಗೆ ಪ್ರಾಣಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಇದಕ್ಕೂ ಮೊದಲು ಈ ಹೈಸ್ಪೀಡ್ ರೈಲು ಅಕ್ಟೋಬರ್ 6ರಂದು ಗಾಂಧಿನಗರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಆನಂದ್ ನಿಲ್ದಾಣದಲ್ಲಿ ಹಸುವಿಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗದ ಭಾಗವು ಹಾನಿಗೊಳಗಾಗಿತ್ತು. ಆನಂದ್‌ನಲ್ಲಿ ಹಸುವಿಗೆ ಡಿಕ್ಕಿ ಹೊಡೆಯುವ ಎರಡು ದಿನಗಳ ಹಿಂದೆ, ಈ ರೈಲು ಅಹಮದಾಬಾದ್ ಬಳಿಯ ವತ್ವಾದಲ್ಲಿ 4 ಎಮ್ಮೆಗಳಿಗೆ ಡಿಕ್ಕಿ ಹೊಡೆದಿತ್ತು. ಆಗಲೂ ರೈಲಿನ ಮುಂಭಾಗಕ್ಕೆ ಹಾನಿಯಾಗಿತ್ತು.

ಬಳಿಕ ಎಮ್ಮೆಗಳ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಗುಜರಾತ್‌ನಲ್ಲಿ ಹಸುಗಳು ಮತ್ತು ಎಮ್ಮೆಗಳನ್ನು ಸಾಕುತ್ತಿರುವವರಿಗೆ ವಂದೇ ಭಾರತ್ ಎಕ್ಸ್​ಪ್ರೆಸ್​​ನ ವೇಳಾಪಟ್ಟಿಯ ಬಗ್ಗೆ ತಿಳಿದಿಲ್ಲ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಇದೇ ಕಾರಣಕ್ಕೆ ಹಸು-ಎಮ್ಮೆಗಳ ಹಿಂಡು ಹಳಿಗಳ ಮೇಲೆ ಬಂದಿವೆ. ಈಗ ಅವರಲ್ಲಿ ಜಾಗೃತಿ ಮೂಡಿಸಲು ಅಭಿಯಾನ ಆರಂಭಿಸಲಾಗುವುದು ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Sat, 29 October 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ