AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಿಗದಿ, ಮುಂದಿನ ಅವಧಿಗೆ ನೀರು ಹರಿಸುವ ಬಗ್ಗೆ ಚರ್ಚೆ

ಸೋಮವಾರ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಿಗದಿಯಾಗಿದೆ. ಸೋಮವಾರ ಮಧ್ಯಾಹ್ನ 2 ಗಂಟೆಗೆ ಸಭೆ ನಡೆಸಿ ಮುಂದಿನ ಅವಧಿಗೆ ನೀರು ಹರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ಸಮಿತಿ ಮುಂದಾಗಿದೆ. ಕರ್ನಾಟಕ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್​ ನೀರು ಹರಿಸುತ್ತಿದೆ. ಅಕ್ಟೋಬರ್ ಅಂತ್ಯದವರೆಗೆ ನೀರು ಹರಿಸಲು CWRC ಆದೇಶಿಸಿದೆ.

ಸೋಮವಾರ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಿಗದಿ, ಮುಂದಿನ ಅವಧಿಗೆ ನೀರು ಹರಿಸುವ ಬಗ್ಗೆ ಚರ್ಚೆ
ಕೆಆರ್​ಎಸ್​ ಡ್ಯಾಂ
ಹರೀಶ್ ಜಿ.ಆರ್​.
| Edited By: ಆಯೇಷಾ ಬಾನು|

Updated on:Oct 28, 2023 | 10:59 AM

Share

ದೆಹಲಿ, ಅ.28: ಕಾವೇರಿ ನದಿ ನೀರು ಹಂಚಿಕೆ ಸಂಕಷ್ಟ (Cauvery Water Dispute) ವಿಚಾರ ಸಂಬಂಧ ಸೋಮವಾರ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಿಗದಿಯಾಗಿದೆ. ಸೋಮವಾರ ಮಧ್ಯಾಹ್ನ 2 ಗಂಟೆಗೆ ಸಭೆ ನಡೆಸಿ ಮುಂದಿನ ಅವಧಿಗೆ ನೀರು ಹರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ಸಮಿತಿ ಮುಂದಾಗಿದೆ. ಕರ್ನಾಟಕ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್​ ನೀರು ಹರಿಸುತ್ತಿದೆ. ಅಕ್ಟೋಬರ್ ಅಂತ್ಯದವರೆಗೆ ನೀರು ಹರಿಸಲು CWRC ಆದೇಶಿಸಿದೆ.

ಕೆಲ ದಿನಗಳ ಹಿಂದಷ್ಟೇ ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕ ಸಂಪುಟ ಸಮಿತಿಗೆ ಸೂಚನೆ ನೀಡಿತ್ತು. ಇದರ ನಡುವೆ ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದ ರಾಜ್ಯ ಸಂಪುಟ ಸಮಿತಿ ಕೇಂದ್ರ ಕೃಷಿ, ಗೃಹ ಕಾರ್ಯದರ್ಶಿ ಭೇಟಿಯಾಗಿ ಮಾತುಕತೆ ನಡೆಸಿತ್ತು. ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತ್ತು. ಆದರೆ ಕೇಂದ್ರ ಬರ ಪರಿಹಾರ ನೀಡಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯನವರು ನಿನ್ನೆ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದರು.

ಇದನ್ನೂ ಓದಿ: ಕಾವೇರಿ ನದಿ ನೀರು ಹಂಚಿಕೆ: ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸಲು ರಾಜ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ಇನ್ನು ಈ ವರ್ಷ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಜನ-ಜಾನುವಾರುಗಳು ಹನಿ ನೀರಿಗೂ ಪರದಾಡುವಂತಹ ಸ್ಥಿತಿ ಕೆಲವೆಡೆ ಇದೆ. ಡ್ಯಾಂಗಳು ಬತ್ತಿ ಹೋಗಿವೆ. ಹೀಗಾಗಿ ಕಾವೇರಿ ನದಿ ನೀರು ಹಂಚಿಕೆ ವಿವಾದ ಹೆಚ್ಚಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಬಿಡುವ ಕುರಿತು ನೀಡಿರುವ ಆದೇಶಗಳಿಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದಾದ್ಯಂತ ರೈತರು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗಳನ್ನು ನಡೆಸುತ್ತಿವೆ. ಸದ್ಯ ಈಗ ಸೋಮವಾರ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಿಗದಿಯಾಗಿದ್ದು ಸಮಿತಿ ಮತ್ತೆ ಯಾವ ನಿರ್ಧಾರ ತೆಗೆದುಕೊಳ್ಳೊತ್ತೋ ಎಂಬ ಆತಂಕ ಎದುರಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:48 am, Sat, 28 October 23

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್