ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸೂಚನೆ, ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆದಿಲ್ಲ

| Updated By: guruganesh bhat

Updated on: Aug 31, 2021 | 3:20 PM

ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ ನೀರನ್ನು ಬಾಕಿ ಉಳಿಸಿಕೊಂಡು 30.6 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸೂಚನೆ ನೀಡಲಾಗಿದೆ.

ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸೂಚನೆ, ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆದಿಲ್ಲ
ಸಾಂದರ್ಭಿಕ ಚಿತ್ರ
Follow us on

ದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು  ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ ಹಲ್ದರ್ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ ನೀರನ್ನು ಬಾಕಿ ಉಳಿಸಿಕೊಂಡು 30.6 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸೂಚನೆ ನೀಡಲಾಗಿದೆ. ಈಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ. ಹಲ್ದರ್, ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಮುಂದಾದೆವು. ಸಭೆಯಲ್ಲಿ ಕೆಲ ರಾಜ್ಯಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದವು. ಹೀಗಾಗಿ, ಮೇಕೆದಾಟು ಯೋಜನೆ ಚರ್ಚೆ ಮುಂದೂಡಲಾಗಿದೆ. ಮೇಕೆದಾಟು ಯೋಜನೆ ಕುರಿತು ಚರ್ಚೆಗೆ ಉಳಿದ ರಾಜ್ಯಗಳ ಅನುಮತಿಯೂ ಬೇಕು. ಅಷ್ಟೇ ಅಲ್ಲದೇ, ಗುಂಡಾರು ಯೋಜನೆಗೆ ಕರ್ನಾಟಕದಿಂದ ವಿರೋಧ ವ್ಯಕ್ತವಾಗುತ್ತಿದೆ. ಗುಂಡಾರು ಯೋಜನೆ ಚರ್ಚೆಯನ್ನು ಸಹ ಮುಂದೂಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಆಗಸ್ಟ್‌ ಅಂತ್ಯಕ್ಕೆ 86 ಟಿಎಂಸಿ ನೀರು ಬಿಡುಗಡೆ ಮಾಡಬೇಕಿತ್ತು. ಆದರೆ 57 ಟಿಎಂಸಿ ನೀರು ಬಿಡುಗಡೆ ಮಾಡಿರುವುದಾಗಿ ಕರ್ನಾಟಕ ಹೇಳಿದೆ. ಹೀಗಾಗಿ ಬಾಕಿ ನೀರನ್ನು ಬಿಡುವಂತೆ ಕರ್ನಾಟಕಕ್ಕೆ ಹೇಳಿದ್ದೇವೆ. ಸೆಪ್ಟೆಂಬರ್ ತಿಂಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಆಗ ಬಾಕಿ ಉಳಿದ ನೀರು ಹರಿಸಲು ಸಾಧ್ಯವಾಗಲಿದೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: 

Cauvery Calling: ಬೆಂಗಳೂರು ಗ್ರಾ. ಸೇರಿ 7 ಜಿಲ್ಲೆಯಲ್ಲಿ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನ; ಮರ ಮಿತ್ರರ ನೇಮಕ

ಮೇಕೆದಾಟು ಡಿಪಿಆರ್ ಬಗ್ಗೆ ಪ್ರಸ್ತಾಪಿಸಲು ಮುಂದಾದ ಕರ್ನಾಟಕ; ಚರ್ಚೆ ಮಾಡಕೂಡದು ಎಂದು ಆಕ್ಷೇಪ ತೆಗೆದ ತಮಿಳುನಾಡು

(Cauvery Water management authority directs release 30.6 tmc water to Tamilnadu)

Published On - 2:41 pm, Tue, 31 August 21