ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ: ನಡೆಯಲಿಲ್ಲ ಮೇಕೆದಾಟು ಯೋಜನೆಯ ಚರ್ಚೆ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 14ನೇ ಸಭೆ ಸೋಮವಾರ ನಡೆಯಿತು. ಸಭೆಯ ಅಜೆಂಡಾದಲ್ಲಿ ಮೇಕೆದಾಟು ಜಲಾಶಯದ ವಿಚಾರವಿತ್ತಾದರೂ ಚರ್ಚೆ ನಡೆಯಲಿಲ್ಲ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ: ನಡೆಯಲಿಲ್ಲ ಮೇಕೆದಾಟು ಯೋಜನೆಯ ಚರ್ಚೆ
ಕಾವೇರಿ ನೀರು (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 27, 2021 | 8:03 PM

ದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 14ನೇ ಸಭೆ ಸೋಮವಾರ ನಡೆಯಿತು. ಸಭೆಯ ಅಜೆಂಡಾದಲ್ಲಿ ಮೇಕೆದಾಟು ಜಲಾಶಯದ ವಿಚಾರವಿತ್ತಾದರೂ ಚರ್ಚೆ ನಡೆಯಲಿಲ್ಲ. ಈ ವಿಚಾರದ ಬಗ್ಗೆ ಮುಂದಿನ ಸಬೆಗಳಲ್ಲಿ ಚರ್ಚೆ ನಡೆಸುವುದಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದರ್ ಹೇಳಿದರು.

ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಡ್ಯಾಂ ವಿಚಾರವಾಗಿ ಇಂದು ಚರ್ಚೆ ನಡೆಸಿಲ್ಲ. ನಾಲ್ಕು ರಾಜ್ಯಗಳ ಅಭಿಪ್ರಾಯ ಮತ್ತು ಆದ್ಯತೆ ಆಧರಿಸಿ ಚರ್ಚೆ ಮಾಡಬೇಕು. ಇದಕ್ಕೆ ಮೂರು ರಾಜ್ಯಗಳು ವಿರೋಧಿಸುತ್ತಿವೆ. ಅವರ ವಿರೋಧದ ನಡುವೆ ಚರ್ಚೆ ಮಾಡಲು ಸಾಧ್ಯವಿಲ್ಲ. ರಾಜ್ಯಗಳು ಒಪ್ಪಿದರೆ ಮಾತ್ರ ಸಭೆಯಲ್ಲಿ ಈ ವಿಚಾರ ಚರ್ಚಿಸಲು ಸಾಧ್ಯ. ಯೋಜನೆ ಬಗ್ಗೆ ಹಲವು ಆಯಾಮಗಳಲ್ಲಿ ಚರ್ಚಿಸಬೇಕು ಎಂದು ತಿಳಿಸಿದರು.

ಅಂತರರಾಜ್ಯ ಜಲಾನಯನ ಪ್ರದೇಶಗಳ ವ್ಯಾಪ್ತಿಯಲ್ಲಿ ಯೋಜನೆ ರೂಪಿಸುತ್ತಿರುವ ಹಿನ್ನೆಲೆಯಲ್ಲಿ ವಿಸ್ತೃತ ಚರ್ಚೆ ಅನಿವಾರ್ಯ. ನಾವು ನೀರು ಹಂಚಿಕೆಯ ಬಗ್ಗೆ ಮಾತ್ರ ಚರ್ಚೆ ಮಾಡುತ್ತೇವೆ. ಬಾಕಿ ವಿಚಾರಗಳ ಬಗ್ಗೆ ಸುಪ್ರೀಂಕೋರ್ಟ್ ನಿರ್ಧರಿಸಲಿದೆ. ಇಂದಿನ ಸಭೆಯಲ್ಲಿ ನೀರು ಬಿಡುಗಡೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಕರ್ನಾಟಕದಿಂದ ನೀರು ಬಿಡುಗಡೆ ಕುರಿತು ತಮಿಳುನಾಡು, ಪುದುಚೇರಿ ಮನವಿ ಸಲ್ಲಿಸಿವೆ ಎಂದು ಹೇಳಿದರು.

ಜೂನ್ ಮತ್ತು ಸೆಪ್ಟೆಂಬರ್‌ವರೆಗಿನ ಬಾಕಿ ನೀರು ಬಿಡುಗಡೆಗೆ ಈ ರಾಜ್ಯಗಳಿಂದ ಮನವಿ ಬಂದಿದೆ. ಅಕ್ಟೋಬರ್ 7ಕ್ಕೆ ಸಭೆ ನಡೆಸಿ ನೀರು ಬಿಡುಗಡೆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ದೆಹಲಿಯಲ್ಲಿ ಸಭೆ ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದರ್ ಮಾಹಿತಿ ನೀಡಿದರು.

(Cauvery Water Management Authority Meeting no Discussion on Mekedatu Project)

ಇದನ್ನೂ ಓದಿ: ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸೂಚನೆ, ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆದಿಲ್ಲ

ಇದನ್ನೂ ಓದಿ: ಕಾವೇರಿಯ ಮತ್ತಷ್ಟು ನೀರು ಬಳಕೆಗೆ ತಮಿಳುನಾಡು ಯೋಜನೆ: ಸುಪ್ರೀಂಕೋರ್ಟ್​ಗೆ ಕರ್ನಾಟಕ ತಕರಾರು ಅರ್ಜಿ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ