ದೆಹಲಿ ಅಬಕಾರಿ ನೀತಿ ಹಗರಣದ ಸೂತ್ರಧಾರ ಅರವಿಂದ್ ಕೇಜ್ರಿವಾಲ್: ಸಿಬಿಐ

ಅರವಿಂದ್ ಕೇಜ್ರಿವಾಲ್ ಅವರ ವಕೀಲ ಅಭಿಷೇಕ್ ಮನು ಸಿಂಘ್ವಿ, ಅವರು ಪೊಲೀಸ್ ರಿಮಾಂಡ್‌ನಲ್ಲಿರುವಾಗ ಹೊರತುಪಡಿಸಿ, ಬಂಧನದ ನಂತರ ಏಜೆನ್ಸಿ ಮುಖ್ಯಮಂತ್ರಿಯನ್ನು ವಿಚಾರಣೆ ನಡೆಸಿಲ್ಲ ಎಂದು ಹೇಳಿದ್ದಾರೆ.  ಕೇಜ್ರಿವಾಲ್ ವಿರುದ್ಧ ಏಜೆನ್ಸಿ ಬಳಿ ಯಾವುದೇ ನೇರ ಸಾಕ್ಷ್ಯಗಳಿಲ್ಲ. ಅವರ ಮನೆಯಿಂದ ಏನನ್ನೂ ವಶಪಡಿಸಿಕೊಂಡಿಲ್ಲ ಎಂದಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದ ಸೂತ್ರಧಾರ ಅರವಿಂದ್ ಕೇಜ್ರಿವಾಲ್: ಸಿಬಿಐ
ಅರವಿಂದ್ ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on: Jul 29, 2024 | 5:03 PM

ದೆಹಲಿ ಜುಲೈ 29: ಕೇಂದ್ರೀಯ ತನಿಖಾ ದಳ (CBI) ಸೋಮವಾರ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ದೆಹಲಿಯ ಅಬಕಾರಿ ನೀತಿ ಪ್ರಕರಣದ (Excise Policy Case) “ಸೂತ್ರಧಾರ” ಎಂದು ಕರೆದಿದೆ. ಸಿಬಿಐ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿಪಿ ಸಿಂಗ್ ಅವರು ದೆಹಲಿ ಹೈಕೋರ್ಟ್‌ನಲ್ಲಿ, ದೆಹಲಿ ಮುಖ್ಯಮಂತ್ರಿಯ ವಿರುದ್ಧ ಸಾಕ್ಷ್ಯಗಳು ಲಭಿಸಿದಾಗ ಸಂಸ್ಥೆ ಅವರನ್ನು ಬಂಧಿಸಿತು ಎಂದಿದ್ದಾರೆ.  ನಿಯಮಿತ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ತನಿಖಾ ಸಂಸ್ಥೆಗೆ ಸಾಕ್ಷ್ಯ ಸಿಕ್ಕಿದೆ ಎಂದು ಡಿಪಿ ಸಿಂಗ್ ಹೇಳಿದ್ದಾರೆ. ಎಎಪಿ ಕಾರ್ಯಕರ್ತರು ಸೇರಿದಂತೆ ಅನೇಕ ಜನರು ಮುಂದೆ ಬರಲು ಪ್ರಾರಂಭಿಸಿದರು. ಎಎಪಿ ಮುಖ್ಯಸ್ಥರನ್ನು ಬಂಧಿಸದೆ ಸಂಸ್ಥೆಯು ತನ್ನ ತನಿಖೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ನೇರವಾಗಿ ಭಾಗಿಯಾಗಿರುವ ಬಗ್ಗೆ ಸಿಬಿಐ ಬಳಿ ಸಾಕ್ಷ್ಯಗಳಿವೆ ಎಂದು ವಕೀಲರು ಹೇಳಿದ್ದಾರೆ.

ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರವೂ ಸಿಎಂ ನೇರವಾಗಿ ಅಥವಾ ಪರೋಕ್ಷವಾಗಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು  ಸಿಬಿಐ ಹೇಳಿದೆ.

ಅರವಿಂದ್ ಕೇಜ್ರಿವಾಲ್ ಅವರ ವಕೀಲ ಅಭಿಷೇಕ್ ಮನು ಸಿಂಘ್ವಿ, ಅವರು ಪೊಲೀಸ್ ರಿಮಾಂಡ್‌ನಲ್ಲಿರುವಾಗ ಹೊರತುಪಡಿಸಿ, ಬಂಧನದ ನಂತರ ಏಜೆನ್ಸಿ ಮುಖ್ಯಮಂತ್ರಿಯನ್ನು ವಿಚಾರಣೆ ನಡೆಸಿಲ್ಲ ಎಂದು ಹೇಳಿದ್ದಾರೆ.  ಕೇಜ್ರಿವಾಲ್ ವಿರುದ್ಧ ಏಜೆನ್ಸಿ ಬಳಿ ಯಾವುದೇ ನೇರ ಸಾಕ್ಷ್ಯಗಳಿಲ್ಲ. ಅವರ ಮನೆಯಿಂದ ಏನನ್ನೂ ವಶಪಡಿಸಿಕೊಂಡಿಲ್ಲ ಎಂದಿದ್ದಾರೆ.

ಅಬಕಾರಿ ನೀತಿಯ ರಚನೆ ಅಥವಾ ಅನುಷ್ಠಾನದಲ್ಲಿ ಕೇಜ್ರಿವಾಲ್ ಮಾತ್ರ ಭಾಗಿಯಾಗಿಲ್ಲ. ಆದರೆ ಇದು ಎಲ್-ಜಿ ಮತ್ತು ಒಂಬತ್ತು ಸಚಿವಾಲಯಗಳು ಸೇರಿದಂತೆ ಕನಿಷ್ಠ 50 ಅಧಿಕಾರಿಗಳನ್ನು ಒಳಗೊಂಡ ಸಾಂಸ್ಥಿಕ ನಿರ್ಧಾರವಾಗಿದೆ ಎಂದು ಸಿಂಘ್ವಿ ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು, ಕುಪ್ವಾರ ಉಗ್ರ ದಾಳಿಯ ಹಿಂದೆ ಪಾಕ್ ಸೇನೆಯ SSG ಕಮಾಂಡೋ ಕೈವಾಡ

ಇಂದು ಯಾವುದೇ ನೇರ ಪುರಾವೆಗಳಿಲ್ಲ. ಯಾವುದನ್ನೂ ವಶ ಪಡಿಸಿಕೊಂಡಿಲ್ಲ. ಇದು (ಪ್ರಕರಣ) ಕೇಳಿದ ಮಾತುಗಳನ್ನು ಆಧರಿಸಿದೆ ಎಂದ ಸಿಂಘ್ವಿ, ಸಿಬಿಐ ಎಲ್‌ಜಿಯನ್ನೂ ಆರೋಪಿಯನ್ನಾಗಿ ಮಾಡಬೇಕು ಎಂದರು.  ಸಲ್ಲಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸಿಂಗ್, ಎಲ್-ಜಿ ಯಾವುದೇ ಪಾತ್ರವನ್ನು ವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಸಿಬಿಐ ಇಂದು ಕೇಜ್ರಿವಾಲ್ ಮತ್ತು ಇತರರ ವಿರುದ್ಧ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’