ನ್ಯಾಯಾಧೀಶರು, ನ್ಯಾಯಾಂಗ ವ್ಯವಸ್ಥೆ ವಿರುದ್ಧ ಅವಹೇಳನಕಾರಿ ಪೋಸ್ಟ್; ಸಿಬಿಐನಿಂದ ಮತ್ತಿಬ್ಬರ ಬಂಧನ

ಸಿಬಿಐ ನಡೆಸಿದ ತನಿಖೆಯಲ್ಲಿ ಆರೋಪಿಗಳ ಕೆಲವು ಇತರ ಅಕ್ರಮಗಳೂ ಬಯಲಾಗಿದೆ. ಅದರಲ್ಲಿ ಒಬ್ಬ ಆರೋಪಿಯು ಅಕ್ರಮವಾಗಿ ನಕಲಿ ಪಾಸ್​ಪೋರ್ಟ್ ಬಳಸಿರುವುದು ಕೂಡ ಕಂಡುಬಂದಿದೆ.

ನ್ಯಾಯಾಧೀಶರು, ನ್ಯಾಯಾಂಗ ವ್ಯವಸ್ಥೆ ವಿರುದ್ಧ ಅವಹೇಳನಕಾರಿ ಪೋಸ್ಟ್; ಸಿಬಿಐನಿಂದ ಮತ್ತಿಬ್ಬರ ಬಂಧನ
ಸಿಬಿಐ ಕಚೇರಿ
Follow us
TV9 Web
| Updated By: ganapathi bhat

Updated on: Aug 08, 2021 | 3:11 PM

ದೆಹಲಿ: ನ್ಯಾಯಾಧೀಶರು ಮತ್ತು ನ್ಯಾಯಾಂಗ ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಸಿಬಿಐ ನಡೆಸುತ್ತಿರುವ ತನಿಖೆಗೆ ಸಂಬಂಧಿಸಿ ಶನಿವಾರ (ಆಗಸ್ಟ್ 7) ಮತ್ತೆ ಇಬ್ಬರನ್ನು ಸಿಬಿಐ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಐವರನ್ನು ಈವರೆಗೆ ಬಂಧಿಸಲಾಗಿದೆ. ಬಂಧಿತರನ್ನು ಆಂಧ್ರಪ್ರದೇಶ ಗುಂಟೂರು ನ್ಯಾಯಾಲಯದ ಮುಂದೆ ಇಂದು (ಆಗಸ್ಟ್ 8) ಹಾಜರುಪಡಿಸುವ ಬಗ್ಗೆ ತಿಳಿಸಲಾಗಿದೆ.

ಇದಕ್ಕೂ ಮುನ್ನ ಸಿಬಿಐ ಜುಲೈ 28, 2021 ರಂದು ತನಿಖೆಯ ವೇಳೆ ಇಬ್ಬರನ್ನು ಬಂಧಿಸಿತ್ತು. ಬಳಿಕ, ಅವರಿಬ್ಬರನ್ನೂ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಹಸ್ತಾಂತರಿಸಿತ್ತು. ಅದರಲ್ಲಿ ಒಬ್ಬನನ್ನು ಆಗಸ್ಟ್ 10, 2021ರ ವರೆಗೆ ಪೊಲೀಸ್ ಕಸ್ಟೆಡಿಯಲ್ಲಿ ಇಡುವ ಬಗ್ಗೆ ಆದೇಶ ನೀಡಲಾಗಿದ್ದು, ಮತ್ತೊಬ್ಬನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಪ್ರಕರಣದ ಮೊದಲ ಬಂಧನ ಜುಲೈ 9, 2021ರಂದು ಆಗಿತ್ತು.

ಸಿಬಿಐ ನವೆಂಬರ್ 11, 2020 ರಂದು 16 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು. ಹಾಗೂ 12 ಎಫ್​ಐಆರ್ ಪ್ರಕರಣಗಳನ್ನು ಸಿಐಡಿ ಕೈಯಿಂದ ಪಡೆದುಕೊಂಡಿತ್ತು. ಮೂಲ ಎಫ್​ಐಆರ್​ಗಳನ್ನು ಆಂಧ್ರಪ್ರದೇಶ ಹೈಕೋರ್ಟ್​ನ ರಿಜಿಸ್ಟ್ರಾರ್ ಜನರಲ್ ಅವರ ದೂರಿನ ಅನ್ವಯ ದಾಖಲಿಸಿಕೊಳ್ಳಲಾಗಿತ್ತು. ಐಪಿಸಿ ಸೆಕ್ಷನ್ 153(A), 504, 505 (2) ಮತ್ತು 506 ಮತ್ತು ಐಟಿ ಕಾಯ್ದೆ 2000 ದ ಸೆಕ್ಷನ್ 67 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆರೋಪಿಗಳು ಬೇಕೆಂದೇ ನ್ಯಾಯಾಂಗವನ್ನು ಮತ್ತು ನ್ಯಾಯಾಧೀಶರನ್ನು ಗುರಿಯಾಗಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್​ಗಳನ್ನು ಮಾಡುತ್ತಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್​ನ ಕೆಲವು ತೀರ್ಪುಗಳನ್ನು ಉದ್ದೇಶಿಸಿ ಕೆಟ್ಟದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಆರೋಪದಲ್ಲಿ ಕೆಲವರನ್ನು ಬಂಧಿಸಲಾಗಿದೆ.

ಸಿಬಿಐ ನಡೆಸಿದ ತನಿಖೆಯಲ್ಲಿ ಆರೋಪಿಗಳ ಕೆಲವು ಇತರ ಅಕ್ರಮಗಳೂ ಬಯಲಾಗಿದೆ. ಅದರಲ್ಲಿ ಒಬ್ಬ ಆರೋಪಿಯು ಅಕ್ರಮವಾಗಿ ನಕಲಿ ಪಾಸ್​ಪೋರ್ಟ್ ಬಳಸಿರುವುದು ಕೂಡ ಕಂಡುಬಂದಿದೆ. ಆತ ನಕಲಿ ಹೆಸರು ಮತ್ತು ದಾಖಲಿ ನೀಡಿ, ಅಕ್ರಮವಾಗಿ ಪಾಸ್​ಪೋರ್ಟ್ ಹೊಂದಿದ್ದ ಎಂಬುದು ಬಯಲಾಗಿದೆ. ತನಿಖೆಯನ್ನು ದೊಡ್ಡಮಟ್ಟದಲ್ಲಿ ಕೈಗೊಳ್ಳುವ ಉದ್ದೇಶದಿಂದ ಸಿಬಿಐ, ಕೆಲವು ಸಂಸದರು, ಮಾಜಿ ಶಾಸಕರನ್ನು ಕೂಡ ವಿಚಾರಣೆ ನಡೆಸಿದೆ.

ಪ್ರಕರಣ ದಾಖಲಾದ ಬಳಿಕ, ಈ ಸಂಬಂಧ ಸಾಮಾಜಿಕ ಜಾಲತಾಣದ, ಸಾರ್ವಜನಿಕ ವೇದಿಕೆಯ ಹಲವು ಪೋಸ್ಟ್​ಗಳು ಹಾಗೂ ಖಾತೆಗಳನ್ನು ಕೂಡ ತೆಗೆದುಹಾಕಲಾಗಿದೆ.

ಇದನ್ನೂ ಓದಿ: ತಾಯಿಯ ಮನೆ ಹೆಸರು ಬಳಸಲು ಮಗುವಿಗೆ ಹಕ್ಕಿದೆ, ತಂದೆ ಅದನ್ನು ಆಕ್ಷೇಪಿಸುವಂತಿಲ್ಲ: ದೆಹಲಿ ಹೈಕೋರ್ಟ್​ ಮಹತ್ವದ ತೀರ್ಪು

ಪಾಕ್​ನಲ್ಲಿ ಹಿಂದೂ ದೇಗುಲ ಧ್ವಂಸ ಪ್ರಕರಣ: ಪೊಲೀಸರಿಗೆ ಛೀಮಾರಿ ಹಾಕಿದ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಾಧೀಶ, 20 ಮಂದಿ ಬಂಧನ

(CBI Arrests two more people on derogatory posts on Social Media against Judges Judiciary)

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ