Sameer Wankhede: ಶಾರುಖ್ ಪುತ್ರ ಆರ್ಯನ್ನ್ನು ಬಂಧಿಸಿದ್ದ ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ಭ್ರಷ್ಟಾಚಾರ ಪ್ರಕರಣ ದಾಖಲು
ಎರಡು ವರ್ಷಗಳ ಹಿಂದೆ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಅವರನ್ನು ಬಂಧಿಸಿದ್ದ ಮಾದಕ ದ್ರವ್ಯ ನಿಗ್ರಹ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ.
ದೆಹಲಿ: ಎರಡು ವರ್ಷಗಳ ಹಿಂದೆ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಅವರನ್ನು ಬಂಧಿಸಿದ್ದ ಮಾದಕ ದ್ರವ್ಯ ನಿಗ್ರಹ ಅಧಿಕಾರಿ ಸಮೀರ್ ವಾಂಖೆಡೆ (Sameer Wankhede) ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ. ಪ್ರಧಾನ ತನಿಖಾ ಸಂಸ್ಥೆಯು ವಾಂಖೆಡೆ ಮನೆ ಮತ್ತು ಇತರ ಪ್ರದೇಶದಲ್ಲಿ ಶೋಧ ನಡೆಸುತ್ತಿದೆ.
ವಾಂಖೆಡೆ ಅವರು ಮತ್ತು ಅಧಿಕಾರಿಗಳು 2021ರಲ್ಲಿ ನಗರದ ಕರಾವಳಿಯಲ್ಲಿ ಕ್ರೂಸ್ ಹಡಗಿನ ಮೇಲೆ ದಾಳಿ ಮಾಡಿದಾಗ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಥವಾ NCB ಯ ಮುಂಬೈ ವಲಯ ಮುಖ್ಯಸ್ಥರಾಗಿದ್ದರು.
ನಾಲ್ಕು ವಾರಗಳ ಕಾಲ ಜೈಲಿನಲ್ಲಿ ಕಳೆದಿದ್ದ ಆರ್ಯನ್ ಖಾನ್ ಅವರನ್ನು ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 2022ರ ಮೇ ತಿಂಗಳಲ್ಲಿ ಡ್ರಗ್ಸ್ ವಿರೋಧಿ ಸಂಸ್ಥೆ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ