ಪೊಲೀಸ್ ಸಿಬ್ಬಂದಿ ವರ್ಗಾವಣೆ, ಪೋಸ್ಟಿಂಗ್ಗೆ ಸಂಬಂಧಪಟ್ಟ ಮಹಾರಾಷ್ಟ್ರ ಗುಪ್ತಚರ ಇಲಾಖೆಯ ಮಾಹಿತಿ ಸೋರಿಕೆ, ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಸಿಬಿಐ ಮುಖ್ಯಸ್ಥ ಸುಬೋಧ್ ಕುಮಾರ್ ಜೈಸ್ವಾಲ್ರಿಗೆ ಮುಂಬೈ ಸೈಬರ್ ಶಾಖೆ ಪೊಲೀಸರು ಸಮನ್ಸ್ ನೀಡಿದ್ದಾರೆ. ಇ-ಮೇಲ್ ಮೂಲಕ ಸುಬೋಧ್ರಿಗೆ ಸಮನ್ಸ್ ನೀಡಲಾಗಿದ್ದು, ಅಕ್ಟೋಬರ್ 14ರೊಳಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಸುಬೋಧ್ ಕುಮಾರ್ 1985ರ ಬ್ಯಾಚ್ನ ಮಹಾರಾಷ್ಟ್ರ ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಸಿಬಿಐ ಮುಖ್ಯಸ್ಥರಾಗಿ ನೇಮಕವಾಗಿದ್ದು, ಇವರ ಅವಧಿ ಎರಡು ವರ್ಷ. ಸಿಬಿಐ ಮುಖ್ಯಸ್ಥರಾಗಿ ನೇಮಕವಾಗುವುದಕ್ಕೂ ಮೊದಲು ಇವರು ಮುಂಬೈ ಮತ್ತು ಮಹಾರಾಷ್ಟ್ರ ಪೊಲೀಸ್ ಚೀಫ್ ಆಗಿ ಕರ್ತವ್ಯ ನಿರ್ವಹಿಸಿದವರಾಗಿದ್ದಾರೆ. ಪ್ರಸ್ತುತ ಪ್ರಕರಣ ಸುಬೋಧ್ ಕುಮಾರ್ ಅವರು ಮಹಾರಾಷ್ಟ್ರ ಪೊಲೀಸ್ ನಿರ್ದೇಶಕರಾಗಿದ್ದಾಗಿನದು. ಆಗ ಗುಪ್ತಚರ ಇಲಾಖೆ ಮುಖ್ಯಸ್ಥರಾಗಿದ್ದ ಐಪಿಎಸ್ ಅಧಿಕಾರಿ ರಷ್ಮಿ ಶುಕ್ಲಾ, ಮಹಾರಾಷ್ಟ್ರದಲ್ಲಿ ಪೊಲೀಸ್ ವರ್ಗಾವಣೆ, ಪೋಸ್ಟಿಂಗ್ ವೇಳೆ ಭ್ರಷ್ಟಾಚಾರ ನಡೆದಿದೆ ಎಂದು ವರದಿ ಸಿದ್ಧಪಡಿಸಿದ್ದರು. ಅದರ ವಿಚಾರಣೆ ವೇಳೆ, ಹಿರಿಯ ರಾಜಕಾರಣಿಗಳು, ಅಧಿಕಾರಿಗಳ ಫೋನ್ ಕದ್ದಾಲಿಕೆ ನಡೆದಿದೆ. ಗುಪ್ತಚರ ಇಲಾಖೆ ವರದಿಯನ್ನು ಉದ್ದೇಶಪೂರ್ವಕವಾಗಿಯೇ ಸೋರಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಎಫ್ಐಆರ್ ಕೂಡ ದಾಖಲಾಗಿದೆ. ಎಫ್ಐಆರ್ನಲ್ಲಿ ರಷ್ಮಿ ಶುಕ್ಲಾ ಸೇರಿ ಇನ್ಯಾವುದೇ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಲಾಗಿಲ್ಲ. ಆದರೆ ಈಗ ಸಿಬಿಐ ಮುಖ್ಯಸ್ಥರಾಗಿರುವ ಸುಬೋಧ್ ಕುಮಾರ್ರನ್ನು ವಿಚಾರಣೆಗೆ ಕರೆಯಲಾಗಿದೆ.
ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 451 ಜನರಿಗೆ ಕೊರೊನಾ ದೃಢ; 9 ಮಂದಿ ಸಾವು
IPL 2021: ಲೀಗ್ ಸುತ್ತಿನ ಅಂತ್ಯಕ್ಕೆ ಅತಿ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ರೇಸ್ನಲ್ಲಿರುವ ಬ್ಯಾಟರ್ಗಳಿವರು
Published On - 8:24 pm, Sat, 9 October 21