NSE co-location scam case: NSE ಕೋ ಲೋಕೇಷನ್ ಹಗರಣ; ಮುಂಬೈ, ಕೋಲ್ಕತಾ ಸೇರಿ 10 ಸ್ಥಳಗಳಲ್ಲಿ ಸಿಬಿಐ ಶೋಧ

| Updated By: shivaprasad.hs

Updated on: May 21, 2022 | 12:09 PM

NSE co-location scam case | CBI Searches: NSE ಕೋ ಲೋಕೇಷನ್ ಹಗರಣದಲ್ಲಿ (NSE co-location scam case) ಬ್ರೋಕರ್, ಟ್ರೇಡರ್​ಗಳ ಮೇಲೆ ಸಿಬಿಐ (CBI Raid) ದಾಳಿ ನಡೆಸಿದೆ.

NSE co-location scam case: NSE ಕೋ ಲೋಕೇಷನ್ ಹಗರಣ; ಮುಂಬೈ, ಕೋಲ್ಕತಾ ಸೇರಿ 10 ಸ್ಥಳಗಳಲ್ಲಿ ಸಿಬಿಐ ಶೋಧ
ಪ್ರಾತಿನಿಧಿಕ ಚಿತ್ರ
Follow us on

ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ ಕೋ ಲೋಕೇಷನ್ ಹಗರಣದಲ್ಲಿ (NSE co-location scam case) ಬ್ರೋಕರ್, ಟ್ರೇಡರ್​ಗಳ ಮೇಲೆ ಸಿಬಿಐ (CBI Raid) ದಾಳಿ ನಡೆಸಿದೆ. ಮುಂಬೈ, ಗಾಂಧಿನಗರ, ಗುರುಗ್ರಾಮ, ಕೋಲ್ಕತಾ ಸೇರಿದಂತೆ ಹತ್ತು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ನಡೆಸುತ್ತಿದೆ ಎಂದು ಎಎನ್​ಐ ವರದಿ ಮಾಡಿದೆ. ಈ ಪ್ರಕರಣದಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ಸಿಇಒ ಮತ್ತು ಎಂಡಿ ಚಿತ್ರಾ ರಾಮಕೃಷ್ಣ ಮತ್ತು ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ವಿರುದ್ಧ ಕೇಂದ್ರೀಯ ಸಂಸ್ಥೆ ಚಾರ್ಜ್‌ಶೀಟ್ ಸಲ್ಲಿಸಿದೆ. ಎನ್​ಎಸ್​ಇ ಅಧಿಕಾರಿಗಳು ಕೆಲವು ಬ್ರೋಕರ್​ಗಳಿಗೆ ತಮ್ಮ ಅಧಿಕಾರಾವಧಿಯಲ್ಲಿ ಪ್ರಾಶಸ್ತ್ಯವನ್ನು ನೀಡಿದ್ದರು. ಅದರಿಂದ ಮಾಡಲಾಗಿರುವ ಅಕ್ರಮ ಲಾಭದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.

ಎಎನ್​ಐ ಟ್ವೀಟ್ ಇಲ್ಲಿದೆ:

ಇದನ್ನೂ ಓದಿ
Rahul Gandhi: ‘ಮಾತುಗಳನ್ನು ಕೇಳಿಸಿಕೊಳ್ಳುವ ಮನೋಭಾವ ಪ್ರಧಾನಿಯವರಿಗಿಲ್ಲ’; ಲಂಡನ್​ನಲ್ಲಿ ರಾಹುಲ್ ಗಾಂಧಿ ವಾಗ್ದಾಳಿ 
Ram Nath Kovind: ವಿಶ್ವಸಂಸ್ಥೆ ಭದ್ರತಾ ಮಂಡಳಿಯ ತುರ್ತು ಸುಧಾರಣೆಗೆ ಕರೆ ನೀಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್
PM Modi: ವಿದೇಶ ಪ್ರವಾಸಕ್ಕೆ ತೆರಳುವಾಗ ರಾತ್ರಿ ಪ್ರಯಾಣಕ್ಕೆ ಆದ್ಯತೆ ನೀಡುವ ಪ್ರಧಾನಿ ಮೋದಿ; ಕಾರಣವೇನು? 

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಮಾರ್ಚ್‌ನಲ್ಲಿ ಬಂಧಿಸಿತ್ತು. ಎನ್‌ಎಸ್‌ಇ ಕೋ-ಲೋಕೇಷನ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಡಿಗೆ ಗ್ರೂಪ್ ಆಪರೇಟಿಂಗ್ ಆಫೀಸರ್ ಮತ್ತು ಸಲಹೆಗಾರರಾಗಿದ್ದ ಆನಂದ್ ಸುಬ್ರಮಣಿಯನ್ ಅವರನ್ನು ಫೆಬ್ರವರಿ ತಿಂಗಳಲ್ಲಿ ಬಂಧಿಸಲಾಗಿತ್ತು.

ಇತ್ತೀಚೆಗೆ (ಮೇ.18) (NSE) ಚಿತ್ರಾ ರಾಮಕೃಷ್ಣ ಅವರು ಕೋ-ಲೋಕೇಷನ್ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ತಲ್ವಂತ್ ಸಿಂಗ್ ಅವರ ಪೀಠವು ಈ ಪ್ರಕರಣದ ವಿಚಾರಣೆಗೆ ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: NSE Case: ಎನ್​ಎಸ್​ಇ ಪ್ರಕರಣದಲ್ಲಿ ಜಾಮೀನಿಗಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದ ಚಿತ್ರಾ ರಾಮಕೃಷ್ಣ ಅಹವಾಲು ಆಲಿಸಲು ನಿರಾಕರಣೆ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Sat, 21 May 22