Delhi liquor policy scam: ದೆಹಲಿ ಅಬಕಾರಿ ನೀತಿ ಹಗರಣ: ಮೊದಲ ಬಾರಿ ಸಿಬಿಐ ಆರೋಪಪಟ್ಟಿಯಲ್ಲಿ ಮನೀಶ್ ಸಿಸೋಡಿಯಾ ಹೆಸರು

ಈ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಎರಡನೇ ಆರೋಪಪಟ್ಟಿಯಾಗಿದೆ ಇದು. ಕಳೆದ ವರ್ಷ ನವೆಂಬರ್ 25 ರಂದು ಸಿಬಿಐ ಮೊದಲ ಆರೋಪಪಟ್ಟಿ ಸಲ್ಲಿಸಿತ್ತು.

Delhi liquor policy scam: ದೆಹಲಿ ಅಬಕಾರಿ ನೀತಿ ಹಗರಣ: ಮೊದಲ ಬಾರಿ ಸಿಬಿಐ ಆರೋಪಪಟ್ಟಿಯಲ್ಲಿ ಮನೀಶ್ ಸಿಸೋಡಿಯಾ ಹೆಸರು
ಮನೀಶ್ ಸಿಸೋಡಿಯಾ
Follow us
ರಶ್ಮಿ ಕಲ್ಲಕಟ್ಟ
|

Updated on:Apr 25, 2023 | 6:01 PM

ದೆಹಲಿ: ಅಬಕಾರಿ ನೀತಿ ಹಗರ(Delhi liquor policy scam) ಆರೋಪದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಮತ್ತು ಇತರ ಮೂವರ ವಿರುದ್ದ ಸಿಬಿಐ (CBI) ಮಂಗಳವಾರ ಆರೋಪಪಟ್ಟಿ ದಾಖಲಿಸಿದೆ. ಹೈದರಾಬಾದ್ ಮೂಲದ ಸಿಎ ಬುಚ್ಚಿ ಬಾಬು ಗೋರಂಟ್ಲಾ, ಅರ್ಜುನ್ ಪಾಂಡೆ ಮತ್ತು ಅಮನದೀಪ್ ಸಿಂಗ್ ಧಲ್ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) 120 ಬಿ, 201 ಮತ್ತು 420 ಮತ್ತು . ಭ್ರಷ್ಟಾಚಾರ ತಡೆ ಕಾಯಿದೆ ಸೆಕ್ಷನ್ 7, 7 ಎ, 8 ಮತ್ತು 13 ರ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ದೊಡ್ಡ ಪಿತೂರಿ ಮತ್ತು ಇತರ ಆರೋಪಿಗಳ ಪಾತ್ರವನ್ನು ಪರಿಶೀಲಿಸಲು ತನಿಖೆ ನಡೆಯುತ್ತಿದೆ ಎಂದು ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ತನಿಖಾ ಸಂಸ್ಥೆ ತಿಳಿಸಿದೆ.

ಬೆಳಗ್ಗೆ ಮಲ್ಟಿಪಲ್ ಸ್ಕ್ಲೆರೋಸಿಸ್​​ನಿಂದ ಬಳಲುತ್ತಿರುವ ಸಿಸೋಡಿಯಾ ಅವರ ಪತ್ನಿ ಸೀಮಾ ಸಿಸೋಡಿಯಾ ಅವರ ಆರೋಗ್ಯ ಹದಗೆಟ್ಟ ನಂತರ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊದಲ ಬಾರಿ ಸಿಬಿಐ ಆರೋಪಪಟ್ಟಿಯಲ್ಲಿ ಮನೀಶ್ ಸಿಸೋಡಿಯಾ ಹೆಸರು ಬಂದಿದ್ದು ಈ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಎರಡನೇ ಆರೋಪಪಟ್ಟಿಯಾಗಿದೆ ಇದು. ಕಳೆದ ವರ್ಷ ನವೆಂಬರ್ 25 ರಂದು ಸಿಬಿಐ ಮೊದಲ ಆರೋಪಪಟ್ಟಿ ಸಲ್ಲಿಸಿತ್ತು.

ಕಳೆದ ವಾರ ಕಳೆದ ವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಸುಮಾರು ಒಂಬತ್ತು ಗಂಟೆಗಳ ಕಾಲ ಪ್ರಕರಣದ ಸಾಕ್ಷಿಯಾಗಿ ವಿಚಾರಣೆ ನಡೆಸಿತ್ತು. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯೂ ಆಗಿರುವ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನೂ ಈ ಪ್ರಕರಣದಲ್ಲಿ  ವಿಚಾರಣೆಗೊಳಪಡಿಸಲಾಗಿದೆ.

ಇದನ್ನೂ ಓದಿ:Operation Kaveri: ಆಪರೇಷನ್ ಕಾವೇರಿ; ಸುಡಾನ್​​ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಆರಂಭ

ಮದ್ಯದ ನೀತಿ ಪ್ರಕರಣವನ್ನು ತಿರುಚಿದ್ದು ಎಂ ಕೇಜ್ರಿವಾಲ್, ಕೇಂದ್ರವು ಎಎಪಿ ರಾಷ್ಟ್ರೀಯ ಪಕ್ಷವಾಗಿರುವುದರಿಂದ ಅದನ್ನು ಗುರಿಯಾಗಿಸುತ್ತಿದೆ ಎಂದಿದ್ದಾರೆ.  ನಮ್ಮ ಹಾಗೂ ನಮ್ಮ ಒಳ್ಳೆಯ, ಅಭಿವೃದ್ಧಿ ಕೆಲಸಗಳಿಗೆ ಹಾನಿ ಮಾಡಲು ಇಷ್ಟೆಲ್ಲ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಿಸೋಡಿಯಾ ಆರೋಪವನ್ನು ನಿರಾಕರಿಸಿದ್ದು ತಮ್ಮ ವಿರುದ್ಧ ಕೇಂದ್ರೀಯ ಏಜೆನ್ಸಿ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ತಮ್ಮ ಜಾಮೀನು ಅರ್ಜಿಯಲ್ಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಫೆಬ್ರವರಿ 26 ರಂದು ಆಮ್ ಆದ್ಮಿ ಪಕ್ಷದ ನಾಯಕ ಸಿಸೋಡಿಯಾ ಅವರನ್ನು  ಬಂಧಿಸಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Tue, 25 April 23

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ