ದೆಹಲಿ: ಅಬಕಾರಿ ನೀತಿ ಹಗರಣ(Delhi liquor policy scam) ಆರೋಪದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಮತ್ತು ಇತರ ಮೂವರ ವಿರುದ್ದ ಸಿಬಿಐ (CBI) ಮಂಗಳವಾರ ಆರೋಪಪಟ್ಟಿ ದಾಖಲಿಸಿದೆ. ಹೈದರಾಬಾದ್ ಮೂಲದ ಸಿಎ ಬುಚ್ಚಿ ಬಾಬು ಗೋರಂಟ್ಲಾ, ಅರ್ಜುನ್ ಪಾಂಡೆ ಮತ್ತು ಅಮನದೀಪ್ ಸಿಂಗ್ ಧಲ್ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) 120 ಬಿ, 201 ಮತ್ತು 420 ಮತ್ತು . ಭ್ರಷ್ಟಾಚಾರ ತಡೆ ಕಾಯಿದೆ ಸೆಕ್ಷನ್ 7, 7 ಎ, 8 ಮತ್ತು 13 ರ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ದೊಡ್ಡ ಪಿತೂರಿ ಮತ್ತು ಇತರ ಆರೋಪಿಗಳ ಪಾತ್ರವನ್ನು ಪರಿಶೀಲಿಸಲು ತನಿಖೆ ನಡೆಯುತ್ತಿದೆ ಎಂದು ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ತನಿಖಾ ಸಂಸ್ಥೆ ತಿಳಿಸಿದೆ.
ಬೆಳಗ್ಗೆ ಮಲ್ಟಿಪಲ್ ಸ್ಕ್ಲೆರೋಸಿಸ್ನಿಂದ ಬಳಲುತ್ತಿರುವ ಸಿಸೋಡಿಯಾ ಅವರ ಪತ್ನಿ ಸೀಮಾ ಸಿಸೋಡಿಯಾ ಅವರ ಆರೋಗ್ಯ ಹದಗೆಟ್ಟ ನಂತರ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊದಲ ಬಾರಿ ಸಿಬಿಐ ಆರೋಪಪಟ್ಟಿಯಲ್ಲಿ ಮನೀಶ್ ಸಿಸೋಡಿಯಾ ಹೆಸರು ಬಂದಿದ್ದು ಈ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಎರಡನೇ ಆರೋಪಪಟ್ಟಿಯಾಗಿದೆ ಇದು. ಕಳೆದ ವರ್ಷ ನವೆಂಬರ್ 25 ರಂದು ಸಿಬಿಐ ಮೊದಲ ಆರೋಪಪಟ್ಟಿ ಸಲ್ಲಿಸಿತ್ತು.
ಕಳೆದ ವಾರ ಕಳೆದ ವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಸುಮಾರು ಒಂಬತ್ತು ಗಂಟೆಗಳ ಕಾಲ ಪ್ರಕರಣದ ಸಾಕ್ಷಿಯಾಗಿ ವಿಚಾರಣೆ ನಡೆಸಿತ್ತು. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯೂ ಆಗಿರುವ ಬಿಆರ್ಎಸ್ ನಾಯಕಿ ಕವಿತಾ ಅವರನ್ನೂ ಈ ಪ್ರಕರಣದಲ್ಲಿ ವಿಚಾರಣೆಗೊಳಪಡಿಸಲಾಗಿದೆ.
ಇದನ್ನೂ ಓದಿ:Operation Kaveri: ಆಪರೇಷನ್ ಕಾವೇರಿ; ಸುಡಾನ್ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಆರಂಭ
ಮದ್ಯದ ನೀತಿ ಪ್ರಕರಣವನ್ನು ತಿರುಚಿದ್ದು ಎಂ ಕೇಜ್ರಿವಾಲ್, ಕೇಂದ್ರವು ಎಎಪಿ ರಾಷ್ಟ್ರೀಯ ಪಕ್ಷವಾಗಿರುವುದರಿಂದ ಅದನ್ನು ಗುರಿಯಾಗಿಸುತ್ತಿದೆ ಎಂದಿದ್ದಾರೆ. ನಮ್ಮ ಹಾಗೂ ನಮ್ಮ ಒಳ್ಳೆಯ, ಅಭಿವೃದ್ಧಿ ಕೆಲಸಗಳಿಗೆ ಹಾನಿ ಮಾಡಲು ಇಷ್ಟೆಲ್ಲ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಿಸೋಡಿಯಾ ಆರೋಪವನ್ನು ನಿರಾಕರಿಸಿದ್ದು ತಮ್ಮ ವಿರುದ್ಧ ಕೇಂದ್ರೀಯ ಏಜೆನ್ಸಿ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ತಮ್ಮ ಜಾಮೀನು ಅರ್ಜಿಯಲ್ಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಫೆಬ್ರವರಿ 26 ರಂದು ಆಮ್ ಆದ್ಮಿ ಪಕ್ಷದ ನಾಯಕ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:40 pm, Tue, 25 April 23