ಭ್ರಷ್ಟಾಚಾರ ಪ್ರಕರಣ: ಆರ್‌ಜಿ ಕರ್‌ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ 8 ದಿನ ಸಿಬಿಐ ವಶಕ್ಕೆ

ಈಗಷ್ಟೇ ನಾಲ್ವರನ್ನು ಬಂಧಿಸಿದ್ದೇವೆ. ಒಂದು ದೊಡ್ಡ ಸಂಬಂಧವನ್ನು ಬಹಿರಂಗಪಡಿಸಬೇಕಾಗಿದೆ ಆದ್ದರಿಂದ ನಾವು ಅವರ ವಿಚಾರಣೆಗೆ ಕೇಳುತ್ತಿದ್ದೇವೆ. ಸಂಪೂರ್ಣ ಸಂಬಂಧವನ್ನು ಬಹಿರಂಗಪಡಿಸಲು ನಮಗೆ ಅವರ ಕಸ್ಟಡಿ ಅಗತ್ಯವಿದೆ ಎಂದು ಸಿಬಿಐ, ಅಲಿಪೋರ್ ಜಡ್ಜೆಸ್ ನ್ಯಾಯಾಲಯಕ್ಕೆ ತಿಳಿಸಿದೆ.ಸೋಮವಾರ ಸಿಬಿಐ, ಘೋಷ್, ಅವರ ಭದ್ರತಾ ಸಿಬ್ಬಂದಿ ಮತ್ತು ಆಸ್ಪತ್ರೆಗೆ ಸಾಮಗ್ರಿಗಳನ್ನು ಪೂರೈಸುತ್ತಿದ್ದ ಇಬ್ಬರು ಮಾರಾಟಗಾರರನ್ನು ಬಂಧಿಸಿತ್ತು.

ಭ್ರಷ್ಟಾಚಾರ ಪ್ರಕರಣ: ಆರ್‌ಜಿ ಕರ್‌ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ 8 ದಿನ ಸಿಬಿಐ ವಶಕ್ಕೆ
ಸಂದೀಪ್ ಘೋಷ್
Follow us
|

Updated on:Sep 03, 2024 | 5:18 PM

ಕೋಲ್ಕತ್ತಾ ಸೆಪ್ಟೆಂಬರ್ 03: ಕೋಲ್ಕತ್ತಾ ನ್ಯಾಯಾಲಯವು ಮಂಗಳವಾರ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (RG Kar Medical College and Hospital) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ (Sandip Ghosh) ಮತ್ತು ಇತರ ಮೂವರನ್ನು ಸರ್ಕಾರಿ ಸಂಸ್ಥೆಯಲ್ಲಿನ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದಂತೆ ಎಂಟು ದಿನಗಳ ಕಾಲ ಸಿಬಿಐ (CBI) ಕಸ್ಟಡಿಗೆ ಒಪ್ಪಿಸಿದೆ.  ಭ್ರಷ್ಟಾಚಾರ ಪ್ರಕರಣದ ಬಗ್ಗೆ ಕೂಲಂಕುಷವಾಗಿ ತನಿಖೆ ಮಾಡಬೇಕಾಗಿದೆ ಎಂದು ಕೇಂದ್ರೀಯ ತನಿಖಾ ದಳವು ಸಂದೀಪ್ ಘೋಷ್ ಮತ್ತು ಇತರ ಮೂವರನ್ನು 10 ದಿನಗಳ ಕಸ್ಟಡಿಗೆ ಕೋರಿತ್ತು.

ಈಗಷ್ಟೇ ನಾಲ್ವರನ್ನು ಬಂಧಿಸಿದ್ದೇವೆ. ಒಂದು ದೊಡ್ಡ ಸಂಬಂಧವನ್ನು ಬಹಿರಂಗಪಡಿಸಬೇಕಾಗಿದೆ ಆದ್ದರಿಂದ ನಾವು ಅವರ ವಿಚಾರಣೆಗೆ ಕೇಳುತ್ತಿದ್ದೇವೆ. ಸಂಪೂರ್ಣ ಸಂಬಂಧವನ್ನು ಬಹಿರಂಗಪಡಿಸಲು ನಮಗೆ ಅವರ ಕಸ್ಟಡಿ ಅಗತ್ಯವಿದೆ ಎಂದು ಸಿಬಿಐ, ಅಲಿಪೋರ್ ಜಡ್ಜೆಸ್ ನ್ಯಾಯಾಲಯಕ್ಕೆ ತಿಳಿಸಿದೆ.  ಸೋಮವಾರ ಸಿಬಿಐ, ಘೋಷ್, ಅವರ ಭದ್ರತಾ ಸಿಬ್ಬಂದಿ ಮತ್ತು ಆಸ್ಪತ್ರೆಗೆ ಸಾಮಗ್ರಿಗಳನ್ನು ಪೂರೈಸುತ್ತಿದ್ದ ಇಬ್ಬರು ಮಾರಾಟಗಾರರನ್ನು ಬಂಧಿಸಿತ್ತು.

ಮಾಜಿ ಉಪ ಅಧೀಕ್ಷಕ ಡಾ ಅಖ್ತರ್ ಅಲಿಯವರ ಹೊಸ ಆರೋಪಗಳ ನಂತರ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಆರ್ಥಿಕ ದುರುಪಯೋಗದ ತನಿಖೆಯು ವೇಗವನ್ನು ಪಡೆಯಿತು.

ಕಲ್ಕತ್ತಾ ಹೈಕೋರ್ಟ್ ಆಗಸ್ಟ್ 23 ರಂದು ಜಾರಿ ನಿರ್ದೇಶನಾಲಯದಿಂದ (ಇಡಿ) ಹಲವು ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ ಅಲಿ ಅವರ ಅರ್ಜಿಯ ಮೇರೆಗೆ ಆರ್ಥಿಕ ದುರುಪಯೋಗ ಬಗ್ಗೆ ಸರ್ಕಾರ, ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಸಿಬಿಐಗೆ ತನಿಖೆಯನ್ನು ವರ್ಗಾಯಿಸಲು ಆದೇಶಿಸಿತು.

ಹೈಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ, ಅಲಿ ಘೋಷ್ ವಿರುದ್ಧ ವಾರೀಸುದಾರರಿಲ್ಲದ ಶವಗಳ ಅಕ್ರಮ ಮಾರಾಟ, ಬಯೋಮೆಡಿಕಲ್ ತ್ಯಾಜ್ಯದ ಸಾಗಣೆ ಮತ್ತು ಔಷಧಿ ಮತ್ತು ವೈದ್ಯಕೀಯ ಸಲಕರಣೆಗಳ ಪೂರೈಕೆದಾರರಿಂದ ಕಮಿಷನ್‌ಗೆ ಟೆಂಡರ್‌ಗಳನ್ನು ರವಾನಿಸಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Aparajita anti-rape bill: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅಪರಾಜಿತಾ ಅತ್ಯಾಚಾರ ವಿರೋಧಿ ಮಸೂದೆಗೆ ಅಂಗೀಕಾರ

ಸಿಬಿಐ ಈಗಾಗಲೇ ಘೋಷ್ ಅವರ ನಿವಾಸದಲ್ಲಿ ಒಂದು ದಿನದ ಶೋಧ ಕಾರ್ಯಾಚರಣೆಯನ್ನು ನಡೆಸಿದೆ. ಹಣಕಾಸಿನ ಅವ್ಯವಹಾರ ಮತ್ತು ವೈದ್ಯೆಯ ಅತ್ಯಾಚಾರ-ಕೊಲೆ  ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಅವರನ್ನು ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಿದೆ.

ಸಿಬಿಐ ಘೋಷ್ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಿದೆ. ಅದೇ ವೇಳೆ ಐಪಿಸಿಯ ಸೆಕ್ಷನ್ 120 ಬಿ (ಅಪರಾಧದ ಪಿತೂರಿ) , ಇದನ್ನು 420 ಐಪಿಸಿ (ವಂಚನೆ ಮತ್ತು ಅಪ್ರಾಮಾಣಿಕತೆ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ಅಡಿಯಲ್ಲಿಯೂ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯು M/s ಮಾ ತಾರಾ ಟ್ರೇಡರ್ಸ್, M/s Eshan Cafe, ಮತ್ತು M/s Khama Louha ಸೇರಿದಂತೆ ಹಲವಾರು ಘಟಕಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:09 pm, Tue, 3 September 24

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ