AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣ; ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಸಿಬಿಐನಿಂದ ಕ್ಲೀನ್​ಚಿಟ್

ಸೋಲಾರ್​ ಶಕ್ತಿ ಹಗರಣದ ಆರೋಪಿ ಸರಿತಾ ನಾಯರ್ ಅವರು ಉಮ್ಮನ್​ ಚಾಂಡಿ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದರು.

ಅತ್ಯಾಚಾರ ಪ್ರಕರಣ; ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಸಿಬಿಐನಿಂದ ಕ್ಲೀನ್​ಚಿಟ್
ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ
TV9 Web
| Edited By: |

Updated on: Dec 28, 2022 | 3:31 PM

Share

ತಿರುವನಂತಪುರಂ: ತೀವ್ರ ಸಂಚಲನ ಮೂಡಿಸಿದ್ದ ಸೋಲಾರ್ ಹಗರಣದ (Solar Scam) ಪ್ರಮುಖ ಆರೋಪಿ ಮಹಿಳೆಯೊಬ್ಬರು ಮಾಡಿರುವ ಅತ್ಯಾಚಾರ ಆರೋಪದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ (Oommen Chandy) ಅವರಿಗೆ ಸಿಬಿಐ (CBI) ಕ್ಲೀನ್ ಚಿಟ್ ನೀಡಿದೆ. ಸಿಬಿಐ ಮಂಗಳವಾರ ತಿರುವನಂತಪುರಂನ ನ್ಯಾಯಾಲಯಕ್ಕೆ ಈ ವರದಿಯನ್ನು ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು. ಸೋಲಾರ್​ ಶಕ್ತಿ ಹಗರಣದ ಆರೋಪಿ ಸರಿತಾ ನಾಯರ್ ಅವರು ಉಮ್ಮನ್​ ಚಾಂಡಿ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದರು. 2012ರಲ್ಲಿ ಸೋಲಾರ್ ಫಲಕವನ್ನು ಅಳವಡಿಕೆ ಮಾಡುವ ಬಗ್ಗೆ ಮಾತುಕತೆ ನಡೆಸಲು ಹೋಗಿದ್ದಾಗ ಸಿಎಂ ಆಗಿದ್ದ ಉಮ್ಮನ್ ಚಾಂಡಿ ತಮ್ಮ ಮನೆಯಲ್ಲೇ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸರಿತಾ ಆರೋಪಿಸಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಕೇರಳದ ಕ್ರೈಂ ಬ್ರಾಂಚ್ ವಿಭಾಗದ ಪೊಲೀಸರು ಉಮ್ಮನ್ ಚಾಂಡಿ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದರು.

ಸೋಲಾರ್​ ಹಗರಣದಲ್ಲಿ ಸಿಲುಕಿಕೊಂಡಿದ್ದ ಇನ್ನೋರ್ವ ಆರೋಪಿ ಬಿಜು ರಾಧಾಕೃಷ್ಣನ್​ ಕೂಡ ಮಾಜಿ ಸಿಎಂ ಉಮ್ಮನ್ ಚಾಂಡಿ ಮೇಲೆ ಇದೇ ರೀತಿಯ ಆರೋಪ ಮಾಡಿದ್ದರು. ತಮ್ಮ ಜೊತೆ ಉಮ್ಮನ್ ಚಾಂಡಿ ಲೈಂಗಿಕ ಕ್ರಿಯೆ ನಡೆಸಲು ಬಯಸಿದ್ದರು ಎಂದು ಅವರು ಹೇಳಿಕೆ ನೀಡಿದ್ದರು. ಅದಾದ ಬಳಿಕ ಸರಿತಾ ನಾಯರ್​ ಕೂಡ ಉಮ್ಮನ್​ ಚಾಂಡಿ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದರು.

ಇದನ್ನೂ ಓದಿ: ಸೋಲಾರ್ ಹಗರಣದ ಆರೋಪಿಯ ಲೈಂಗಿಕ ಕಿರುಕುಳ ಪ್ರಕರಣ: ಕೇರಳ ಸಿಎಂ ನಿವಾಸದಲ್ಲಿ ಸಿಬಿಐ ಪರಿಶೀಲನೆ

ಸೋಲಾರ್​ ಫಲಕಗಳನ್ನು ಅಳವಡಿಸುವ ಹಗರಣಕ್ಕೆ ಸಂಬಂಧಿಸಿದಂತೆ ಅಂದು ಸಿಎಂ ಆಗಿದ್ದ ಉಮ್ಮನ್​ ಚಾಂಡಿ ಸರ್ಕಾರಕ್ಕೆ ಸುಮಾರು 2 ಕೋಟಿ ರೂ. ಲಂಚ ನೀಡಿದ್ದಾಗಿ ಸರಿತಾ ಮತ್ತು ಬಿಜು ಒಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಈ ಸೋಲಾರ್ ಹಗರಣದ ಮುಖ್ಯ ಆರೋಪಿಗಳಾದ ಬಿಜು ರಾಧಾಕೃಷ್ಣನ್ ಮತ್ತು ಸರಿತಾ ನಾಯರ್ ಅವರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಉಮ್ಮನ್ ಚಾಂಡಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕ್ಲಿಫ್ ಹೌಸ್‌ನಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ದೂರುದಾರರು ಆರೋಪಿಸಿದ್ದರು. ಕಳೆದ ವರ್ಷ, ಆರೋಪಿ ಮಹಿಳೆಯ ಲೈಂಗಿಕ ಶೋಷಣೆ ಆರೋಪಗಳಿಗೆ ಸಂಬಂಧಿಸಿದಂತೆ ಉಮ್ಮನ್ ಚಾಂಡಿ, ಮಾಜಿ ಕೇಂದ್ರ ಸಚಿವ ಕೆಸಿ ವೇಣುಗೋಪಾಲ್ ಮತ್ತು ಇತರ ರಾಜಕಾರಣಿಗಳ ವಿರುದ್ಧದ ಪ್ರಕರಣಗಳ ತನಿಖೆಯನ್ನು ಸಿಬಿಐ ವಹಿಸಿಕೊಂಡಿತ್ತು.

ಇದನ್ನೂ ಓದಿ: ಸಮ್ಮತಿಯೊಂದಿಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಮೊದಲು ಒಂದು ವರ್ಷ ಕಾಯುವಿಕೆ ಅಸಾಂವಿಧಾನಿಕ: ಕೇರಳ ಹೈಕೋರ್ಟ್

ಯುಡಿಎಫ್ ಸರ್ಕಾರದ ಅವಧಿಯಲ್ಲಿ ನಡೆದ ಬಹುಕೋಟಿ ಸೋಲಾರ್ ಪ್ಯಾನಲ್ ಹಗರಣದ ಆರೋಪಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಕಳೆದ ಕೆಲವು ವರ್ಷಗಳಿಂದ ಉಮ್ಮನ್ ಚಾಂಡಿ ಸೇರಿದಂತೆ ಆರು ಜನರ ವಿರುದ್ಧ ಪ್ರಕರಣಗಳನ್ನು ಕೇರಳ ಪೊಲೀಸರ ಅಪರಾಧ ವಿಭಾಗವು ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. 2012 ರಲ್ಲಿ ಅವರು ಲೈಂಗಿಕವಾಗಿ ಶೋಷಣೆಗೆ ಒಳಗಾಗಿದ್ದರು.

ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು 2021ರ ಆರಂಭದಲ್ಲಿ ಈ ಪ್ರಕರಣಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಇದೀಗ ಉಮ್ಮನ್ ಚಾಂಡಿ ವಿರುದ್ಧದ ಮಹಿಳೆಯ ಆರೋಪಕ್ಕೆ ಯಾವುದೇ ಆಧಾರವಿಲ್ಲ ಎಂದು ಸಿಬಿಐ ಹೇಳಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ