ಡಿಸಿಎಂ ಡಿಕೆ ಶಿವಕುಮಾರ್ ಹೂಡಿಕೆ ವಿವರ ಕೇಳಿ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್

ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ನೀಡಿದೆ. ಹಾಗೂ ಜೈಹಿಂದ್ ಚಾನಲ್​ನ ವ್ಯವಸ್ಥಾಪಕ ನಿರ್ದೇಶಕರಿಗೆ 2024ರ ಜನವರಿ 11ರಂದು ತನಿಖಾಧಿಕಾರಿ ಕೋರಿದ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನ್ನ ಮುಂದೆ ಹಾಜರಾಗುವಂತೆ ಸೂಚಿಸಿದೆ.

ಡಿಸಿಎಂ ಡಿಕೆ ಶಿವಕುಮಾರ್ ಹೂಡಿಕೆ ವಿವರ ಕೇಳಿ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್
ಡಿಕೆ ಶಿವಕುಮಾರ್
Follow us
|

Updated on:Jan 01, 2024 | 10:24 AM

ದೆಹಲಿ, ಜ.01: ಕಾಂಗ್ರೆಸ್ ನಾಯಕ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಅವರು ಕೇರಳ ಮೂಲದ ಜೈಹಿಂದ್ ಖಾಸಗಿ ವಾಹಿನಿಯಲ್ಲಿ (Jaihind Channel) ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ (CBI) ನೋಟಿಸ್ ಜಾರಿಮಾಡಿದೆ. ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐನ ಬೆಂಗಳೂರು ಘಟಕವು ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ 2024ರ ಜನವರಿ 11ರಂದು ತನಿಖಾಧಿಕಾರಿ ಕೋರಿದ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನ್ನ ಮುಂದೆ ಹಾಜರಾಗುವಂತೆ ತಿಳಿಸಿದೆ. ಇದಲ್ಲದೆ ಸಿಆರ್​ಪಿಸಿ 91ರಡಿ ಡಿಸಿಎಂ ಡಿಕೆಶಿ ಸೇರಿದಂತೆ 30ಕ್ಕೂ ಹೆಚ್ಚು ಜನರಿಗೆ ನೋಟಿಸ್​ ನೀಡಲಾಗಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್​​​ಗೆ ಸಿಬಿಐ ನೋಟಿಸ್​​

ಕೇರಳ ಮೂಲದ ಚಾನಲ್ ನಲ್ಲಿ ಹೂಡಿಕೆ ಬಗ್ಗೆ ಮಾಹಿತಿ ನೀಡುವಂತೆ ಹಾಗೂ ಹೂಡಿಕೆಗೆ ಹಾಕಲಾದ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ ಸಿಸಿಬಿ ಡಿಸಿಎಂ ಡಿಕೆ ಶಿವಕುಮಾರ್​​​ಗೆ ಹಾಗೂ ಪತ್ನಿ ಉಷಾ ಶಿವಕುಮಾರ್​ ಸೇರಿದಂತೆ ಬಂಡವಾಳ ಹೂಡಿರುವ 30ಕ್ಕೂ ಹೆಚ್ಚು ಜನರಿಗೆ ನೋಟಿಸ್​ ನೀಡಿದೆ.

CrPC ಸೆಕ್ಷನ್ 91 ರ ಅಡಿಯಲ್ಲಿ ಹೊರಡಿಸಲಾದ ತನ್ನ ನೋಟಿಸ್‌ನಲ್ಲಿ, ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವುಗಳನ್ನು ಮಾಡಿದ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಜೈ ಹಿಂದ್ ಚಾನಲ್‌ಗೆ ಹೇಳಿದೆ. ಹಿಡುವಳಿಗಳ ಹೇಳಿಕೆ, ಅವರ ಲೆಡ್ಜರ್ ಖಾತೆಗಳು, ಒಪ್ಪಂದದ ಟಿಪ್ಪಣಿಗಳು ಮತ್ತು ಇತರ ವಿವರಗಳ ಜೊತೆಗೆ ಎಲ್ಲಾ ಷೇರು ವಹಿವಾಟುಗಳ ವಿವರ ನೀಡುವಂತೆ ಸಿಬಿಐ ಸೂಚಿಸಿದೆ.

ಇದನ್ನೂ ಓದಿ: ನಿಗಮ ಮಂಡಳಿ: ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ; ಸಂಕ್ರಾಂತಿಯೊಳಗೆ ನೇಮಕ- ಡಿಕೆ ಶಿವಕುಮಾರ್​

ಜೈಹಿಂದ್ ಚಾನಲ್​ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್. ಶಿಜು ಅವರು ಸಿಬಿಐ ನೋಟಿಸ್ ಸ್ವೀಕರಿಸಿದ್ದು, ಸಂಸ್ಥೆ ಕೋರಿರುವ ಎಲ್ಲಾ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ಎಲ್ಲಾ ದಾಖಲೆಗಳು ತಮ್ಮ ಬಳಿ ಇವೆ ಮತ್ತು ಯಾವುದೇ ಅಕ್ರಮ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ಕೇರಳದ ಕಾಂಗ್ರೆಸ್ ನಾಯಕರೂ ಆಗಿರುವ ಶಿಜು, ಯಾವುದೇ ಗುರುತಿಸಲಾದ ಅಕ್ರಮ ಇಲ್ಲದ ಕಾರಣ ಹಿಂದಿನ ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರವು ಪ್ರಕರಣವನ್ನು ತನಿಖೆ ಮಾಡಿ ಮುಚ್ಚಿದೆ. ಸಿಬಿಐನ ಈ ಕ್ರಮವು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ರಾಜಕೀಯ ಸೇಡಿನ ಸ್ಪಷ್ಟ ಪ್ರಕರಣವಾಗಿದೆ ಎಂದು ಆರೋಪಿಸಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಅವರು, ಈ ಪ್ರಕರಣವನ್ನು ಮತ್ತೆ ಕೆದಕಿರುವುದು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ಡಿಕೆ ಶಿವಕುಮಾರ್ ಅವರಿಗೆ ಕಿರುಕುಳ ಮಾಡುವ ಪ್ರಯತ್ನವಾಗಿದೆ ಎಂದು ಹೇಳಿದರು. ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿದ್ದು, 2013 ಮತ್ತು 2018 ರ ನಡುವೆ ಅವರು 74 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಗಳಿಸಿದ್ದಾರೆ ಎಂದು ಆರೋಪಿಸಿದ್ದರು, ಅದು ಅವರ ಆದಾಯಕ್ಕೆ ಅನುಗುಣವಾಗಿಲ್ಲ ಎಂದು ಆರೋಪಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:49 am, Mon, 1 January 24

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ