ಶ್ರೀನಗರ: ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಖ್ಯಾತ ಸಿಬಿಐ ವಕೀಲ

ಜಮ್ಮು-ಶ್ರೀನಗರ ಹೆದ್ದಾರಿಯ ಬನಿಹಾಲ್ ಬಳಿ ಭೀಕರ ಅಪಘಾತದಲ್ಲಿ 35 ವರ್ಷದ ಸಿಬಿಐ ವಕೀಲ ಶೇಖ್ ಆದಿಲ್ ನಬಿ ಸಾವನ್ನಪ್ಪಿದ್ದಾರೆ. ಹಿಂದಿನಿಂದ ವೇಗವಾಗಿ ಬಂದ ಕಾರು ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇತ್ತೀಚೆಗೆ ಸಿಬಿಐನಲ್ಲಿ ಪ್ರಾಸಿಕ್ಯೂಟಿಂಗ್ ಅಧಿಕಾರಿಯಾಗಿ ನೇಮಕಗೊಂಡಿದ್ದ ಆದಿಲ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸಿಲ್ಲ. ಅಪಘಾತಕ್ಕೆ ಕಾರಣನಾದ ಚಾಲಕನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.

ಶ್ರೀನಗರ: ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಖ್ಯಾತ ಸಿಬಿಐ ವಕೀಲ
ವಿಡಿಯೋ

Updated on: Dec 27, 2025 | 1:24 PM

ಬನಿಹಾಲ್, ಡಿ.27: ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ವಕೀಲರೊಬ್ಬರ (CBI lawyer death) ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ಸಿಬಿಐ ವಕೀಲರೊಬ್ಬರು ಸಾವನ್ನಪ್ಪಿದ್ದಾರೆ. ಬನಿಹಾಲ್ ಬಳಿ ವಕೀಲರ ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ನು ಸಾವನ್ನಪ್ಪಿರುವ ವಕೀಲರನ್ನು ಶೇಖ್ ಆದಿಲ್ ನಬಿ ಎಂದು ಹೇಳಲಾಗಿದೆ. ಇವರು ಇತ್ತೀಚಿಗೆ ಕೇಂದ್ರ ತನಿಖಾ ದಳದಲ್ಲಿ ಪ್ರಾಸಿಕ್ಯೂಟಿಂಗ್ ಅಧಿಕಾರಿಯಾಗಿ ನೇಮಿಸಲಾಯಿತು.

ಇನ್ನು ಅಪಘಾತದಲ್ಲಿ ಆದಿಲ್ ಗಂಭೀರ ಗಾಯಗೊಂಡಿದ್ದರು, ಅವರನ್ನು ತಕ್ಷಣ ಬನಿಹಾಲ್‌ನ ಉಪ-ಜಿಲ್ಲಾ ಆಸ್ಪತ್ರೆಗೆ (SDH) ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಚಿಕಿತ್ಸೆ ಫಲಿಸದ ಕಾರಣ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಸುಮಾರು ಎರಡು ತಿಂಗಳ ಹಿಂದೆ ಚಂಡೀಗಢದ ಸಿಬಿಐನಲ್ಲಿ ನೇಮಕಗೊಂಡಿದ್ದ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಆದಿಲ್ ಶೇಖ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಹೊಸ ವರ್ಷಾಚರಣೆ: ಆಪರೇಷನ್ ಆಘಾಟ್ 3.0 ಅಡಿಯಲ್ಲಿ 500ಕ್ಕೂ ಹೆಚ್ಚು ಜನರ ಬಂಧನ

ಇಲ್ಲಿದೆ ನೋಡಿ ಎಕ್ಸ್​​​ ವಿಡಿಯೋ:

ಡಿಕ್ಕಿ ಹೊಡೆದ ಮಹೀಂದ್ರಾ ಸ್ಕಾರ್ಪಿಯೋ ಚಾಲಕ ಮೊಹಮ್ಮದ್ ಶಫಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆದಿಲ್ ಅವರು ಇತ್ತೀಚೆಗೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಚಂಡೀಗಢದ ಉನ್ನತ ತನಿಖಾ ಸಂಸ್ಥೆಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕಗೊಂಡಿದ್ದರು. ಇದೀಗ ಈ ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ