AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಜಾಮೀನು ಪ್ರಶ್ನಿಸಿ ಸುಪ್ರೀಂನಲ್ಲಿ ಸಿಬಿಐ ಅರ್ಜಿ

ಇಂದು (ಆ.18) ಕೇಂದ್ರೀಯ ತನಿಖಾ ದಳವು ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್‌ ಅವರಿಗೆ ನೀಡಲಾದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಜಾಮೀನು ಪ್ರಶ್ನಿಸಿ ಸುಪ್ರೀಂನಲ್ಲಿ ಸಿಬಿಐ ಅರ್ಜಿ
ಲಾಲು ಪ್ರಸಾದ್ ಯಾದವ್‌
ಅಕ್ಷಯ್​ ಪಲ್ಲಮಜಲು​​
|

Updated on:Aug 18, 2023 | 1:28 PM

Share

ದೆಹಲಿ, ಆ.18: ಕೇಂದ್ರದ ಮಾಜಿ ಸಚಿವ ಲಾಲು ಪ್ರಸಾದ್ ಯಾದವ್‌ಗೆ (Lalu Prasad Yadav) ಹೊಸ ಸಂಕಷ್ಟ ಎದುರಿಯಾಗಿದೆ. ಇಂದು (ಆ.18) ಕೇಂದ್ರೀಯ ತನಿಖಾ ದಳವು ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್‌ ಅವರಿಗೆ ನೀಡಲಾದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಆಗಸ್ಟ್ 25 ರಂದು ಅರ್ಜಿಯ ವಿಚಾರಣೆ ನಡೆಸಲಿದೆ. ರಾಷ್ಟ್ರೀಯ ಜನತಾ ದಳದ (RJD) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್​​ಗೆ ಜಾರ್ಖಂಡ್ ಹೈಕೋರ್ಟ್ ನಾಲ್ಕು ಪ್ರಕರಣಗಳಲ್ಲಿ ಜಾಮೀನು ನೀಡಿತ್ತು. ಆದರೆ ಈ ಆದೇಶಗಳನ್ನು ಸಿಬಿಐ ಪ್ರಶ್ನಿಸಿದೆ. ಈ ಪ್ರಕರಣಗಳಲ್ಲಿ ಅಪರಾಧಿಯಾಗಿದ್ದು, ಅವರ ಮೇಲ್ಮನವಿಗಳು ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ ಎಂದು ಹೇಳಿದೆ.

950 ಕೋಟಿ ರೂ. ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದಾದ್ಯಂತ ಅನೇಕ ಸರ್ಕಾರಿ ಖಜಾನೆಗಳಿಂದ ಪಶುಗಳ ಮೇವಿನ ಹಣವನ್ನು ದುರುಪಯೋಗಪಡಿಸಿಕೊಂಡಿದೆ. ಇದಕ್ಕೆ ಅನುಕೂಲ ಮಾಡಿಕೊಡಲು ಪಶು ಸಂಗೋಪನಾ ಇಲಾಖೆಯಿಂದ ನಕಲಿ ಬಿಲ್ ನೀಡಲಾಗಿತ್ತು ಎನ್ನಲಾಗಿದೆ. 1996ರಲ್ಲಿ ಲಾಲು ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದಾಗ ಚೈಬಾಸಾ ಡೆಪ್ಯುಟಿ ಕಮಿಷನರ್ ಅಮಿತ್ ಖರೆ ಅವರು ಈ ಅಕ್ರಮವನ್ನು ಪತ್ತೆ ಮಾಡಿದ್ದರು.

ಇದನ್ನೂ ಓದಿ: ಆರ್​​ಜೆಡಿ ನಾಯಕರನ್ನು ಭೇಟಿ ಮಾಡಿ ಲಾಲು ಪ್ರಸಾದ್ ಯಾದವ್​​ ತಯಾರಿಸಿದ ಮಟನ್ ಊಟ ಸವಿದ ರಾಹುಲ್ ಗಾಂಧಿ

ಕಳೆದ ತಿಂಗಳು, ಉದ್ಯೋಗಕ್ಕಾಗಿ ಭೂ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ, ಅವರ ಪತ್ನಿ ರಾಬ್ರಿ ದೇವಿ ಮತ್ತು ಅವರ ಪುತ್ರ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು. 2004 ರಿಂದ 2009 ರವರೆಗೆ ಲಾಲು ಯಾದವ್ ರೈಲ್ವೆ ಸಚಿವರಾಗಿದ್ದಾಗ ಯಾದವ್ ಕುಟುಂಬಕ್ಕೆ ರೈಲ್ವೆ ಭೂಮಿಗಳನ್ನು (ಸರ್ಕಾರಿ ಭೂಮಿಯನ್ನು) ಉಡುಗೊರೆಯಾಗಿ ಅಥವಾ ಅಗ್ಗದ ದರದಲ್ಲಿ ಮಾರಾಟ ಮಾಡಿದ್ದಕ್ಕಾಗಿ ಕೆಲವರಿಗೆ ಭಾರತೀಯ ರೈಲ್ವೆಯಲ್ಲಿ ಉದ್ಯೋಗ ನೀಡಲಾಗಿದೆ ಎಂದು ತನಿಖಾ ಸಂಸ್ಥೆಗಳು ಆರೋಪಿಸಿವೆ.

ಇನ್ನು ಲಾಲು ಮತ್ತು ತೇಜಸ್ವಿ ಯಾದವ್ ಅವರು ಪ್ರತಿಪಕ್ಷಗಳ ಒಕ್ಕೂಟವನ್ನು ರಚಿಸುವ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಜೂನ್ 23 ರಂದು ಪಾಟ್ನಾದಲ್ಲಿ ನಡೆದ 16 ವಿರೋಧ ಪಕ್ಷಗಳ ಮೊದಲ ಮೆಗಾ ಸಭೆಯನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಜುಲೈ 17-18 ರಂದು ಬೆಂಗಳೂರಿನಲ್ಲಿ ನಡೆದ ಎರಡನೇ ಸಭೆಯಲ್ಲೂ ಭಾಗಹಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Fri, 18 August 23

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ