ಅಂತಾರಾಜ್ಯ ನಕಲಿ ಉದ್ಯೋಗ ದಂಧೆ: ಬೆಂಗಳೂರು ಸೇರಿ ದೇಶದ ಹಲವೆಡೆ ಸಿಬಿಐ ದಾಳಿ, ಮೂವರ ಬಂಧನ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಹತಾಶ ಉದ್ಯೋಗಾಕಾಂಕ್ಷಿಗಳನ್ನು ಸಂಪರ್ಕಿಸುವುದು ಈ ಆರೋಪಿಗಳ ತಂತ್ರವಾಗಿದೆ. ನಂತರ ಅವರನ್ನು ವಂಚಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಎರಡು ವರ್ಷಗಳಿಂದ ಆರೋಪಿಗಳು ಕೃತ್ಯ ಎಸಗುತ್ತಿದ್ದು, ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿರುವುದು ಶೋಧದ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತಾರಾಜ್ಯ ನಕಲಿ ಉದ್ಯೋಗ ದಂಧೆ: ಬೆಂಗಳೂರು ಸೇರಿ ದೇಶದ ಹಲವೆಡೆ ಸಿಬಿಐ ದಾಳಿ, ಮೂವರ ಬಂಧನ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Nov 10, 2023 | 10:03 PM

ನವದೆಹಲಿ, ನವೆಂಬರ್ 10: ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಶುಕ್ರವಾರ ದಾಳಿ ನಡೆಸಿರುವ ಸಿಬಿಐ (CBI) ಅಧಿಕಾರಿಗಳು ಅಂತಾರಾಜ್ಯ ನಕಲಿ ಉದ್ಯೋಗ ದಂಧೆಯನ್ನು (Fake Job Racket) ಬಯಲಿಗೆಳೆದಿದ್ದು, ಮೂವರನ್ನು ಬಂಧಿಸಿದ್ದಾರೆ. ಸರಕಾರಿ ನೌಕರಿ ಕೊಡಿಸುವುದಾಗಿ ಕಳೆದ ಎರಡು ವರ್ಷಗಳಿಂದ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ್ದ ಆರೋಪದಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಹಾರದ ಪಾಟ್ನಾ, ಕರ್ನಾಟಕದ ಮಂಗಳೂರು, ಬೆಂಗಳೂರು ಮತ್ತು ಜಾರ್ಖಂಡ್​​ನ ಧನ್‌ಬಾದ್‌ನ ಒಂಬತ್ತು ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಹತಾಶ ಉದ್ಯೋಗಾಕಾಂಕ್ಷಿಗಳನ್ನು ಸಂಪರ್ಕಿಸುವುದು ಈ ಆರೋಪಿಗಳ ತಂತ್ರವಾಗಿದೆ. ನಂತರ ಅವರನ್ನು ವಂಚಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಎರಡು ವರ್ಷಗಳಿಂದ ಆರೋಪಿಗಳು ಕೃತ್ಯ ಎಸಗುತ್ತಿದ್ದು, ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿರುವುದು ಶೋಧದ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ₹ 41 ಕೋಟಿ ಬೆಲೆಯ ಜಮೀನು ₹ 353 ಕೋಟಿಗೆ ಮಾರಾಟ ಮಾಡಿದ ದೆಹಲಿ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ

ಆರೋಪಿಗಳು ಭರವಸೆ ನೀಡಿದ ಸರ್ಕಾರಿ ಉದ್ಯೋಗಗಳಿಗೆ ಆಕಾಂಕ್ಷಿಗಳು 10-15 ಲಕ್ಷ ರೂಪಾಯಿಗಳನ್ನು ನೀಡಬೇಕಾಗಿತ್ತು ಎಂದು ಅವರು ಹೇಳಿದ್ದಾರೆ. ದಂಧೆಯ ಆರೋಪಿಗಳು ಅನೇಕ ನಗರಗಳಲ್ಲಿ ಆಕಾಂಕ್ಷಿಗಳಿಗೆ ನಕಲಿ ತರಬೇತಿ ಶಿಬಿರಗಳನ್ನು ನಡೆಸಿದ್ದರು ಮತ್ತು ಇಬ್ಬರು ಪಾಟ್ನಾ ಮತ್ತು ಮುಂಬೈನ ಸಕಿನಾಕಾದಲ್ಲಿ ಕೃತ್ಯ ಎಸಗಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ