P Chidambaram: ಕಾಂಗ್ರೆಸ್ ನಾಯಕ ಪಿ ಚಿದಂಬರಂ ನಿವಾಸಗಳ ಮೇಲೆ ಸಿಬಿಐ ದಾಳಿ

ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

P Chidambaram: ಕಾಂಗ್ರೆಸ್ ನಾಯಕ ಪಿ ಚಿದಂಬರಂ ನಿವಾಸಗಳ ಮೇಲೆ ಸಿಬಿಐ ದಾಳಿ
ಕಾಂಗ್ರೆಸ್ ನಾಯಕ ಪಿ.ಚಿದಂಬರಂ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 17, 2022 | 10:01 AM

ದೆಹಲಿ: ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಪಿ.ಚಿದಂಬರಂ ಅವರ ದೆಹಲಿ, ಮುಂಬೈ ಮತ್ತು ಚೆನ್ನೈ ನಿವಾಸಗಳು ಸೇರಿದಂತೆ ಏಳು ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ. ದಾಳಿಯ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್​ಡಿಟಿವಿ ವರದಿ ಮಾಡಿದೆ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

2010-14ರ ಅವಧಿಯಲ್ಲಿ ಕಾರ್ತಿ ಚಿದಂಬರಂ ಭಾಗಿಯಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಹೊಸದಾಗಿ ಪ್ರಕರಣ ದಾಖಲಿಸಿಕೊಂಡಿದೆ. ಚೀನಾದ 250 ನೌಕರರಿಗೆ ಕಾನೂನುಬಾಹಿರವಾಗಿ ವೀಸಾ ಕಲ್ಪಿಸಲು ಸಹಕರಿಸಿದ ಆರೋಪದ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ.

ಐಎನ್​ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆಗಸ್ಟ್​ 21, 2019ರಲ್ಲಿ ಪಿ.ಚಿದಂಬರಂ ಅವರನ್ನು ಸಿಬಿಐ ಬಂಧಿಸಿತ್ತು. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಅಕ್ಟೋಬರ್ 16, 2019ರಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಚಿದಂಬರಂ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು. ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ 6 ದಿನಗಳ ನಂತರ ಸುಪ್ರೀಂಕೋರ್ಟ್​ನಲ್ಲಿ ಜಾಮೀನು ಸಿಕ್ಕಿತ್ತು. ಆದರೆ ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ಸಿಗದ ಕಾರಣ ತಿಹಾರ್ ಜೈಲಿನಲ್ಲಿ ಕೆಲ ಸಮಯ ಇರಬೇಕಾಯಿತು. ಸುಮಾರು 100 ದಿನಗಳ ನಂತರ, ಅಂದರೆ ಡಿಸೆಂಬರ್ 4, 2019ರಂದು ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ದೊರೆತು, ಜೈಲಿನಿಂದ ಬಿಡುಗಡೆಯಾದರು. ಐಎನ್​ಎಕ್ಸ್​ ಮೀಡಿಯಾ ಪ್ರಕರಣದಲ್ಲಿ ಇಡಿ ಸಲ್ಲಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸಲು ಸಾಕಷ್ಟು ಪುರಾವೆಗಳಿವೆ ಎಂದು ಇತ್ತೀಚೆಗಷ್ಟೇ ವಿಶೇಷ ನ್ಯಾಯಾಲಯವೊಂದು ಅಭಿಪ್ರಾಯಪಟ್ಟಿತ್ತು.

ಈ ಸುದ್ದಿಯನ್ನು ಹಿಂದಿಯಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:09 am, Tue, 17 May 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್