ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮಾಜಿ ಪ್ರಾಂಶುಪಾಲರ ಪಾಲಿಗ್ರಾಫ್ ಪರೀಕ್ಷೆಗೆ ನ್ಯಾಯಾಲಯದ ಅನುಮತಿ ಕೋರಿದ ಸಿಬಿಐ

ನಾವು ಘೋಷ್ ಅವರ ಉತ್ತರಗಳನ್ನು ಮತ್ತಷ್ಟು ಪರಿಶೀಲಿಸಲು ಬಯಸುತ್ತೇವೆ, ಏಕೆಂದರೆ ನಮ್ಮ ಕೆಲವು ಪ್ರಶ್ನೆಗಳಿಗೆ ಉತ್ತರಗಳಲ್ಲಿ ವ್ಯತ್ಯಾಸಗಳಿವೆ. ಆದ್ದರಿಂದ, ನಾವು ಅವರ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸುವ ಆಯ್ಕೆಯ ಬಗ್ಗೆ ಯೋಚಿಸುತ್ತಿದ್ದೇವೆ" ಎಂದು ಹೆಸರು ಹೇಳಲು ಬಯಸದ ಅಧಿಕಾರಿಯೊಬ್ಬರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮಾಜಿ ಪ್ರಾಂಶುಪಾಲರ ಪಾಲಿಗ್ರಾಫ್ ಪರೀಕ್ಷೆಗೆ ನ್ಯಾಯಾಲಯದ ಅನುಮತಿ ಕೋರಿದ ಸಿಬಿಐ
ಸಿಬಿಐ
Follow us
|

Updated on: Aug 22, 2024 | 7:16 PM

ಕೋಲ್ಕತ್ತಾ ಆಗಸ್ಟ್ 22: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ (RG Kar Medical College and Hospital) ಸಂಬಂಧಿಸಿದಂತೆ, ಪ್ರಸ್ತುತ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ (Sandip Ghosh) ಮತ್ತು ಇತರ ನಾಲ್ವರನ್ನು ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಕೇಂದ್ರೀಯ ತನಿಖಾ ದಳ (CBI) ಕೋಲ್ಕತ್ತಾ ನ್ಯಾಯಾಲಯದ ಅನುಮತಿ ಕೋರಿದೆ. ಕಲ್ಕತ್ತಾ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಕಳೆದ ವಾರ ಕೋಲ್ಕತ್ತಾ ಪೊಲೀಸರಿಂದ ತನಿಖೆಯನ್ನು ವಹಿಸಿಕೊಂಡ ಸಿಬಿಐ, ಘೋಷ್ ಅವರನ್ನು ಹಲವು ಬಾರಿ ವಿಚಾರಣೆ ನಡೆಸಿದೆ. ವಿಚಾರಣೆಯ ಸಮಯದಲ್ಲಿ ಘೋಷ್ ಅವರ ಪ್ರತಿಕ್ರಿಯೆಗಳಲ್ಲಿ ಅಸಮಂಜಸತೆ ಕಂಡುಬಂದ ಕಾರಣ ಸಂಸ್ಥೆಯು ಈಗ ಪಾಲಿಗ್ರಾಫ್ ಪರೀಕ್ಷೆಯನ್ನು ಪರಿಗಣಿಸುತ್ತಿದೆ.

“ನಾವು ಘೋಷ್ ಅವರ ಉತ್ತರಗಳನ್ನು ಮತ್ತಷ್ಟು ಪರಿಶೀಲಿಸಲು ಬಯಸುತ್ತೇವೆ, ಏಕೆಂದರೆ ನಮ್ಮ ಕೆಲವು ಪ್ರಶ್ನೆಗಳಿಗೆ ಉತ್ತರಗಳಲ್ಲಿ ವ್ಯತ್ಯಾಸಗಳಿವೆ. ಆದ್ದರಿಂದ, ನಾವು ಅವರ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸುವ ಆಯ್ಕೆಯ ಬಗ್ಗೆ ಯೋಚಿಸುತ್ತಿದ್ದೇವೆ” ಎಂದು ಹೆಸರು ಹೇಳಲು ಬಯಸದ ಅಧಿಕಾರಿಯೊಬ್ಬರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಆಗಸ್ಟ್ 9 ರಂದು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ವೈದ್ಯೆಯ ಮೃತದೇಹ ಪತ್ತೆಯಾಗಿತ್ತು. ತೀವ್ರ ಗಾಯದ ಗುರುತುಗಳೊಂದಿಗೆ ಶವ ಪತ್ತೆಯಾಗಿದ್ದು, ಆ ಪ್ರಕರಣವನ್ನು ಖಂಡಿಸಿ ವೈದ್ಯರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಿದ್ದಾರೆ.  ವೈದ್ಯೆಯ ಸಾವಿನ ಸುದ್ದಿ ತಿಳಿದ ನಂತರ ಘೋಷ್ ಅವರ ನಿರ್ದಿಷ್ಟ ಪಾತ್ರದ ಬಗ್ಗೆ ಸಿಬಿಐ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಆಕೆಯ ಶವವನ್ನು ನೋಡುವ ಮೊದಲು ಪೋಷಕರನ್ನು ಸುಮಾರು ಮೂರು ಗಂಟೆಗಳ ಕಾಲ ಕಾಯುವಂತೆ ಮಾಡಿದ್ದೇಕೆ ಎಂದು ಸಿಬಿಐ ಪ್ರಶ್ನಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಪಿಟಿಐ ವರದಿಯ ಪ್ರಕಾರ, ಘಟನೆಯ ಸ್ವಲ್ಪ ಸಮಯದ ನಂತರ ಸೆಮಿನಾರ್ ಹಾಲ್‌ನ ಪಕ್ಕದ ಕೊಠಡಿಗಳ ನವೀಕರಣದ ಬಗ್ಗೆಯೂ ಘೋಷ್ ಅವರನ್ನು ಪ್ರಶ್ನಿಸಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್ ನ್ನು ಪಾಲಿಗ್ರಾಫ್ ಪರೀಕ್ಷೆ ನಡೆಸಲು ಸಿಬಿಐ ಈಗಾಗಲೇ ನ್ಯಾಯಾಲಯದ ಅನುಮತಿ ಪಡೆದುಕೊಂಡಿದೆ.

ಇದನ್ನೂ ಓದಿ: ಕೋಲ್ಕತ್ತಾ ವೈದ್ಯರ ಅತ್ಯಾಚಾರ-ಕೊಲೆ ಪ್ರಕರಣ: ಸಾಮಾಜಿಕ ಮಾಧ್ಯಮದಲ್ಲಿನ ವಾದ ಇಲ್ಲಿ ಬೇಡ ಎಂದ ಸಿಜೆಐ

ಕಲ್ಕತ್ತಾ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಫೆಡರಲ್ ಏಜೆನ್ಸಿಯು ಕಳೆದ ವಾರ ಕೋಲ್ಕತ್ತಾ ಪೊಲೀಸರಿಂದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆಯ ತನಿಖೆಯನ್ನು ವಹಿಸಿಕೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು