CBI Raid: ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ನಿವಾಸದ ಮೇಲೆ ಸಿಬಿಐ ದಾಳಿ

Rabri Devi: ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ.

CBI Raid: ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ನಿವಾಸದ ಮೇಲೆ ಸಿಬಿಐ ದಾಳಿ
ರಾಬ್ಡಿ ದೇವಿ

Updated on: Mar 06, 2023 | 11:44 AM

ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ. ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಪತ್ನಿ ರಾಬ್ಡಿದೇಬಿ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ.

ಲಾಲು ಪ್ರಸಾದ್ ಯಾದವ್ ಪತ್ನಿ ರಾಬ್ಡಿ ದೇವಿ ಮತ್ತು ಮಗಳು ಮಿಸಾ ಅವರಿಗೆ ಸಂಬಂಧಿಸಿದ ಸ್ಥಳಗಳು ಸೇರಿದಂತೆ ಪಾಟ್ನಾ, ಗೋಪಾಲ್‌ಗಂಜ್ ಮತ್ತು ದೆಹಲಿಯ 13 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.

ಅತ್ಯಂತ ಕಡಿಮೆ ಬೆಲೆಗೆ ಭೂಮಿಗೆ ಬದಲಾಗಿ ಕೆಲವು ಅನರ್ಹ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲಾದ ಪ್ರಕರಣ ಇದಾಗಿದ್ದು, ಸಿಬಿಐ ಎಫ್‌ಐಆರ್‌ನಲ್ಲಿ ಲಾಲು ಪ್ರಸಾದ್, ರಾಬ್ಡಿ ದೇವಿ, ಮಿಸಾ ಯಾದವ್, ಹೇಮಾ ಯಾದವ್ ಮತ್ತು ಕೆಲವು ಅಅಭ್ಯರ್ಥಿಗಳನ್ನು ಆರೋಪಿಗಳಾಗಿ ಹೆಸರಿಸಿದೆ.

ಲಾಲು ಪ್ರಸಾದ್ ರೈಲ್ವೆ ಸಚಿವರಾಗಿದ್ದಾಗ ಹಗರಣ ನಡೆದಿತ್ತು. ಭೂಮಿಗೆ ಪ್ರತಿಯಾಗಿ ಅಭ್ಯರ್ಥಿಗಳಿಗೆ ಉದ್ಯೋಗಗಳನ್ನು ನೀಡಲಾಯಿತು. ಬಿಹಾರದ ವಿವಿಧ ಭಾಗಗಳಲ್ಲಿನ ಪ್ರಧಾನ ಆಸ್ತಿಗಳನ್ನು ಯಾದವ್ ಕುಟುಂಬಕ್ಕೆ ಸಂಬಂಧಿಸಿದ ಕಂಪನಿಗಳು ಸ್ವಾಧೀನಪಡಿಸಿಕೊಂಡಿವೆ. ಸಿಬಿಐಗೆ ಕೆಲವು ಅಭ್ಯರ್ಥಿಗಳ ಸಾಕ್ಷ್ಯ ಸಿಕ್ಕಿದೆ.

ಲಾಲು ಪ್ರಸಾದ್ ರೈಲ್ವೆ ಸಚಿವರಾಗಿದ್ದಾಗ, ಕೆಲವು ಜನರಿಗೆ ಉದ್ಯೋಗ ನೀಡಲು ಭೂಮಿಯನ್ನು ತೆಗೆದುಕೊಳ್ಳಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಈಗಾಗಲೇ ಆರೋಪಿಯಾಗಿದ್ದು, ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಲಾಲು ಪ್ರಸಾದ್ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ಮತ್ತು ಒಟ್ಟು 60 ಲಕ್ಷ ರೂ.ದಂಡ ವಿಧಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 11:35 am, Mon, 6 March 23

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us