ಸುಶಾಂತ್ ಸಾವು ಪ್ರಕರಣ ಸಿಬಿಐಗೆ ವರ್ಗಾವಣೆ

| Updated By: ಸಾಧು ಶ್ರೀನಾಥ್​

Updated on: Aug 06, 2020 | 2:04 PM

ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಬಿಹಾರ ಸರಕಾರ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಿತ್ತು. ಆದರೆ ಮಹಾರಾಷ್ಟ್ರ ಸರ್ಕಾರ ಅದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಸರ್ವೋಚ್ಛ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದ ಇದುವರೆಗಿನ ತನಿಖಾ ವರದಿಯನ್ನು ಸಲ್ಲಿಸುವಂತೆ ಮಹಾರಾಷ್ರ ಪೊಲೀಸ್ಗೆ ಸೂಚಿಸಿತು. ನ್ಯಾಯಮೂರ್ತಿ ಹೃಷಿಕೇಶ್ ರಾಯ್ ನೇತೃತ್ವದ ಸುಪ್ರೀಮ್ ಕೋರ್ಟ್ ಪೀಠವು, ಸದರಿ ಪ್ರಕರಣವನ್ನು ಪಾಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ಕೋರಿರುವ ನಟಿ […]

ಸುಶಾಂತ್ ಸಾವು ಪ್ರಕರಣ ಸಿಬಿಐಗೆ ವರ್ಗಾವಣೆ
Follow us on

ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿದೆ.
ಬಿಹಾರ ಸರಕಾರ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಿತ್ತು. ಆದರೆ ಮಹಾರಾಷ್ಟ್ರ ಸರ್ಕಾರ ಅದಕ್ಕೆ ವಿರೋಧ ವ್ಯಕ್ತಪಡಿಸಿತ್ತು.
ಸರ್ವೋಚ್ಛ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದ ಇದುವರೆಗಿನ ತನಿಖಾ ವರದಿಯನ್ನು ಸಲ್ಲಿಸುವಂತೆ ಮಹಾರಾಷ್ರ ಪೊಲೀಸ್ಗೆ ಸೂಚಿಸಿತು. ನ್ಯಾಯಮೂರ್ತಿ ಹೃಷಿಕೇಶ್ ರಾಯ್ ನೇತೃತ್ವದ ಸುಪ್ರೀಮ್ ಕೋರ್ಟ್ ಪೀಠವು, ಸದರಿ ಪ್ರಕರಣವನ್ನು ಪಾಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ಕೋರಿರುವ ನಟಿ ರಿಯಾ ಚಕ್ರವರ್ತಿ ಮನವಿಗೆ ಉತ್ತರ ಸಲ್ಲಿಸಲು ಬಿಹಾರ, ಮಹಾರಾಷ್ಟ್ರ ಸರಕಾರಗಳು ಹಾಗೂ ಸುಶಾಂತ್ನ ತಂದೆಗೆ ನಿರ್ದೇಶನ ನೀಡಿತು.
ಇದಕ್ಕೂ ಮುನ್ನ, ಕೇಂದ್ರ ಸರಕಾರದ ಪರವಾಗಿ ಕೋರ್ಟ್ನಲ್ಲಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ,ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ ಅವರ ಕೋರಿಕೆ ಮೇರೆಗೆ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.