CBSE Board Exams 2021: ಈ ವರ್ಷದ ಸಿಬಿಎಸ್​ಇ ಪರೀಕ್ಷೆ ದಿನಾಂಕ ಮುಂದೂಡಲ್ಪಡುವ ಸಂಭವ

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ಬಳಿ ಈ ಮುನ್ನ ಕೈಗೊಳ್ಳಲಾಗಿದ್ದ ನಿರ್ಣಯವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದರು.

CBSE Board Exams 2021: ಈ ವರ್ಷದ ಸಿಬಿಎಸ್​ಇ ಪರೀಕ್ಷೆ ದಿನಾಂಕ ಮುಂದೂಡಲ್ಪಡುವ ಸಂಭವ
ಸಾಂದರ್ಭಿಕ ಚಿತ್ರ
Follow us
guruganesh bhat
| Updated By: Skanda

Updated on: Apr 14, 2021 | 6:09 AM

CBSE Board Exams 2021 | ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ವೈರಾಣುವಿನ ಉಪಟಳದಿಂದ ಸಿಬಿಎಸ್​ಇ ಬೋರ್ಡ್​ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವುದಾಗಿ ಘೋಷಿಸಿದ್ದ ತನ್ನ ನಿರ್ಧಾರವನ್ನು ಮರು ಪರಿಶೀಲಿಸಲು ತೀರ್ಮಾನಿಸಿದೆ. ಈ ಮುನ್ನ ಮೇ 4ರಂದು ಪರೀಕ್ಷೆ ನಡೆಸುವುದಾಗಿ ಸಿಬಿಎಸ್​ಇ ಮಂಡಳಿ ಘೋಷಿಸಿತ್ತು. ಕೇಂದ್ರ ಶಿಕ್ಷಣ ಇಲಾಖೆ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಕ್ಸಾಮಿನೇಶನ್ ಈ ಕುರಿತು ಚರ್ಚೆ ನಡೆಸಿದ್ದು, ಕೊವಿಡ್ 19ರ ಹೆಚ್ಚಳದಿಂದ ಸಿಬಿಎಸ್​ಇ ತರಗತಿಗಳಲ್ಲಿ ಬದಲಾವಣೆ ಆಗಲಿದೆ ಎಂದು ತಿಳಿಸಿದೆ. ಆದರೆ ಪರೀಕ್ಷೆಗಳು ಯಾವಾಗ ನಡೆಯಲಿವೆ ಎಂದು ಇದುವರೆಗೂ ಯಾವುದೇ ಮಾಹಿತಿ ನೀಡಿಲ್ಲ.

ಕೊರೊನಾ ಸೋಂಕಿನ ಹೆಚ್ಚಳದಿಂದ ಸಿಬಿಎಸ್​ಇ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಕೋರಿ 2 ಲಕ್ಷಕ್ಕೂ ಹೆಚ್ಚು ಪಿಟಿಷನ್ ಸಲ್ಲಿಸಲಾಗಿತ್ತು. #cancelboardexam2021 ಎಂಬ ಹ್ಯಾಷ್​ಟ್ಯಾಗ್​ನಡಿ ಪರೀಕ್ಷೆ ರದ್ದುಗೊಳಿಸಲು ಟ್ವಿಟರ್​ನಲ್ಲಿ ಆಗ್ರಹಿಸಲಾಗಿತ್ತು. ಈ ಹ್ಯಾಷ್​ಟ್ಯಾಗ್​ನಡಿ ಕಳೆದ ರವಿವಾರ ಒಂದೇ ದಿನ 5 ಲಕ್ಷಕ್ಕೂ ಹೆಚ್ಚು ಟ್ವೀಟ್​ಗಳನ್ನು ಮಾಡಲಾಗಿತ್ತು.

ಈ ಮುನ್ನ ಬಿಡುಗಡೆಯಾಗಿದ್ದ ವೇಳಾಪಟ್ಟಿಯ ಪ್ರಕಾರ ಮೇ 4ರಿಂದ ಜೂನ್​ 10ರವರೆಗೆ ಎರಡು ತರಗತಿಗಳಿಗೆ ಪರೀಕ್ಷೆ ನಡೆಯಲಿದೆ ಎನ್ನಲಾಗಿತ್ತು. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಮೊದಲ ಪರೀಕ್ಷೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಎರಡನೇ ಪರೀಕ್ಷೆ ನಡೆಯಲಿದೆ ಎನ್ನಲಾಗಿತ್ತು. ಆದರೆ ಈ ವೇಳಾಪಟ್ಟಿಯನ್ನು ಮತ್ತೊಮ್ಮೆ ಪರಿಶೀಲಿಸುವುದಾಗಿ ಸಿಬಿಎಸ್​ಇ ಬೋರ್ಡ್ ತಿಳಿಸಿದೆ.

ಸಿಬಿಎಸ್​ಇ ವಿದ್ಯಾರ್ಥಿಗಳ ಆಗ್ರಹಕ್ಕೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿಯವರ ಬೆಂಬಲವೂ ದೊರಕಿತ್ತು. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ಬಳಿ ಈ ಮುನ್ನ ಕೈಗೊಳ್ಳಲಾಗಿದ್ದ ನಿರ್ಣಯವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದರು.

ಇದನ್ನೂ ಓದಿ: Karnataka Exam 2021 News: ಎಲ್ಲವೂ ಸರಿಹೋದ ತಕ್ಷಣ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ; ಡಾ.ಅಶ್ವತ್ಥ ನಾರಾಯಣ

ಮದುವೆಯಾದ ಮರುದಿನವೇ ಹೆಂಡತಿಗೆ ಕನ್ಯತ್ವ ಪರೀಕ್ಷೆ; ಫೇಲ್ ಆದವಳಿಗೆ ಗಂಡ ಮಾಡಿದ್ದೇನು?

(CBSE 2021 exam date likely to postpone as surge of Covid Cases in India)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ