CBSE Class 10 Exam Cancelled: ಸಿಬಿಎಸ್ಇ 10 ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲು ನಿರ್ದಿಷ್ಟ ಮಾನದಂಡ ರೂಪಿಸಲಿದೆ ಬೋರ್ಡ್
CBSE Board Exams 2021: ಈ ಮಾನದಂಡದ ಅನುಸರಿಸಲು ಆಕ್ಷೇಪ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಅನುಕೂಲಕರ ಪರಿಸ್ಥಿತಿ ಸಿದ್ಧವಾದಾಗ ಪರೀಕ್ಷೆ ನಡೆಯಲಿದೆ.
CBSE 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗುವುದು ಮತ್ತು CBSE 12 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹಾಗಾದರೆ CBSE 10 ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಯಾವ ಆಧಾರದ ಮೇಲೆ ತೇರ್ಗಡೆ ಮಾಡಲಾಗುವುದು ಎಂದು ಕೇಂದ್ರ ಶಿಕ್ಷಣ ಇಲಾಖೆ ಮತ್ತು ಸಿಬಿಎಸ್ಇ ಬೋರ್ಡ್ ತಿಳಿಸಲಿದೆ. 10ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲು ಮಾನದಂಡವೊಂದನ್ನು ಸಿಬಿಎಸ್ಇ ಬೋರ್ಡ್ ರೂಪಿಸಿದೆ. ಈ ಮಾನದಂಡದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಈ ಮಾನದಂಡ ಅನುಸರಿಸಲು ಆಕ್ಷೇಪ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಅನುಕೂಲಕರ ಪರಿಸ್ಥಿತಿ ಸಿದ್ಧವಾದಾಗ ಪರೀಕ್ಷೆ ನಡೆಯಲಿದೆ. ಆಗಲೂ ಸಹ ಪರೀಕ್ಷೆ ಬರೆಯುವ ಅವಕಾಶ ವಿದ್ಯಾರ್ಥಿಗಳಿಗೆ ದೊರೆಯಲಿದೆ.
ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಕಷ್ಟವಿದೆ, ಹಾಗಂತ ಆನ್ಲೈನ್ ಪರೀಕ್ಷೆ ನಡೆಸಿದರೂ ದೇಶದ ಎಲ್ಲಾ ಭಾಗಗಳ ಮಕ್ಕಳಿಗೂ ಒಂದೇ ತೆರನಾಗಿ ತಂತ್ರಜ್ಞಾನ ಸೌಲಭ್ಯ ಸಿಗುತ್ತಿದೆ ಎಂದು ಹೇಳಲಾಗುವುದಿಲ್ಲ. ಹೀಗಾಗಿ ಪರೀಕ್ಷೆಗಳನ್ನು ರದ್ದುಪಡಿಸಬೇಕು ಅಥವಾ ಮುಂದೂಡಬೇಕು ಎಂಬ ಕೂಗು ಕೇಳಿಬಂದಿತ್ತು. ಇದೀಗ ಶಿಕ್ಷಣ ಇಲಾಖೆಯ ಜತೆ ನಡೆದ ಸಭೆಯ ಬಳಿಕ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದ್ದು ಅತಿ ಶೀಘ್ರದಲ್ಲಿ ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದು ಹಾಗೂ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ತಿಳಿಸಿದೆ.
ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯಿಂದಾಗಿ ಶೈಕ್ಷಣಿಕ ವಲಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದಾಗಿ ಸಿಬಿಎಸ್ಇ ಬೋರ್ಡ್ನ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹಾಗೂ ಶಿಕ್ಷಣ ಇಲಾಖೆಯ ಪ್ರಮುಖರು ಸಭೆ ನಡೆಸಿದ್ದಾರೆ. ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಲಾಗಿದೆ. ಈ ಸಂದರ್ಭ ವಿದ್ಯಾರ್ಥಿಗಳ ಹಿತರಕ್ಷಣೆ ಮುಖ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾಗಿ ತಿಳಿದುಬಂದಿದೆ.
ಇದನ್ನೂ ಓದಿ: Yuvarathnaa Collections: ಸಾಲುಸಾಲು ತೊಂದರೆ ಎದುರಿಸಿದರೂ ಯುವರತ್ನಗೆ ಒಳ್ಳೆಯ ಕಲೆಕ್ಷನ್; ಸಿನಿಮಾದ ಒಟ್ಟು ಗಳಿಕೆ ಎಷ್ಟು?
ಇಂಥ ಲಕ್ಷಣಗಳಿದ್ದರೆ ಕೊರೊನಾ ಬಂದಿರುವ ಸಾಧ್ಯತೆಯಿದೆ, ಒಮ್ಮೆ ಟೆಸ್ಟ್ ಮಾಡಿಸಿ
(CBSE Class 10 exams cancelled students will be promoted using this method )