ಸಿಬಿಎಸ್​ಇ, ಐಸಿಎಸ್​ಇ ಆಡಳಿತ ಮಂಡಳಿಗಳಿಗೆ ಮೌಲ್ಯಮಾಪನ ಸೂತ್ರ ಅಂತಿಮಗೊಳಿಸಲು ಸುಪ್ರೀಂಕೋರ್ಟ್ ಸೂಚನೆ

12ನೇ ತರಗತಿಗೆ ಎರಡೂ ಶೈಕ್ಷಣಿಕ ಮಂಡಳಿಗಳು ಪರೀಕ್ಷೆ ರದ್ದುಪಡಿಸಿವೆ. ಆದರೆ ಮೌಲ್ಯಮಾಪನದ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಸಾಕಷ್ಟು ಪ್ರಶ್ನೆಗಳಿವೆ. ಈ ಗೊಂದಲವನ್ನು ಪರಿಹರಿಸಬೇಕು ಎಂದು ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ.

ಸಿಬಿಎಸ್​ಇ, ಐಸಿಎಸ್​ಇ ಆಡಳಿತ ಮಂಡಳಿಗಳಿಗೆ ಮೌಲ್ಯಮಾಪನ ಸೂತ್ರ ಅಂತಿಮಗೊಳಿಸಲು ಸುಪ್ರೀಂಕೋರ್ಟ್ ಸೂಚನೆ
ಸುಪ್ರೀಂಕೋರ್ಟ್​
Follow us
| Updated By: guruganesh bhat

Updated on:Jun 21, 2021 | 3:12 PM

ದೆಹಲಿ: ಮೌಲ್ಯಮಾಪನ ಸೂತ್ರದ ಬಗ್ಗೆ ಇರುವ ಗೊಂದಲ ಕುರಿತು ಸಿಬಿಎಸ್​ಇ ಮತ್ತು ಐಸಿಎಸ್​ಇ ಮಂಡಳಿಗಳು ಸೋಮವಾರ (ಜೂನ್ 21) ಪ್ರತಿಕ್ರಿಯಿಸಬೇಕು ಎಂದು ಸುಪ್ರೀಂಕೋರ್ಟ್​ ಇಂದು ಸೂಚಿಸಿದೆ. 12ನೇ ತರಗತಿಗೆ ಎರಡೂ ಶೈಕ್ಷಣಿಕ ಮಂಡಳಿಗಳು ಪರೀಕ್ಷೆ ರದ್ದುಪಡಿಸಿವೆ. ಆದರೆ ಮೌಲ್ಯಮಾಪನದ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಸಾಕಷ್ಟು ಪ್ರಶ್ನೆಗಳಿವೆ. ಈ ಗೊಂದಲವನ್ನು ಪರಿಹರಿಸಬೇಕು ಎಂದು ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ.

ಪರೀಕ್ಷೆ ರದ್ದುಪಡಿಸುವ ಸಿಬಿಎಸ್​ಇ ಮತ್ತು ಐಸಿಎಸ್​ಇ ಕ್ರಮದ ಬಗ್ಗೆ ಪೋಷಕರ ಸಂಘಟನೆ ಮತ್ತು ಕೆಲ ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಮುಂದಿಟ್ಟಿದ್ದರು. ಪರೀಕ್ಷೆ ರದ್ದಾದ 12ನೇ ತರಗತಿಯ ಮೌಲ್ಯಮಾಪನ ಹೇಗೆ ನಡೆಯುತ್ತದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಎರಡೂ ಶಿಕ್ಷಣ ಮಂಡಳಿಗಳು ಜಾರಿಮಾಡಿರುವ ಕೆಲ ನಿಯಮಗಳು ಸಾರ್ವತ್ರಿಕವಾಗಿ ಅನ್ವಯವಾಗಲಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯುಂಟು ಮಾಡಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.

ನ್ಯಾಯಮೂರ್ತಿಗಳಾದ ಎ.ಎಂ.ಖಾನ್​ವಿಲ್​ಕರ್ ಮತ್ತು ದಿನೇಶ್ ಮಹೇಶ್ವರಿ ಅವರಿದ್ದ ನ್ಯಾಯಪೀಠವು ಪೋಷಕರು ಮತ್ತು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯಿಸಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

ಉತ್ತರ ಪ್ರದೇಶ ಪೋಷಕರ ಒಕ್ಕೂಟದ ಪರವಾಗಿ ವಾದ ಮಂಡಿಸಿದ ವಕೀಲ ವಿಕಾಸ್ ಸಿಂಗ್, ಲಿಖಿತ ಪರೀಕ್ಷೆಯನ್ನು ಒಂದು ಆಯ್ಕೆಯಾಗಿ ಸಿಬಿಎಸ್​ಇ ಪರಿಗಣಿಸಿದೆ. ಆಂತರಿಕ ಮೌಲ್ಯಮಾಪನದಲ್ಲಿ ಉತ್ತಮ ಸಾಧನೆ ಮಾಡದ ವಿದ್ಯಾರ್ಥಿಗಳು ಎಂದಿನಂತೆ ಪರೀಕ್ಷೆ ಬರೆಯಲು ಬಯಸುತ್ತಾರೆ. ಇದು ಅಂಥವರಿಗೆ ಅನುಕೂಲ ಕಲ್ಪಿಸುತ್ತದೆ ಎಂದು ಹೇಳಿದರು.

ಯಾವುದೇ ನಿರ್ಧಾರವನ್ನು ಅಂತಿಮಗೊಳಿಸುವ ಮೊದಲೇ ಈ ಆಯ್ಕೆಯನ್ನು ವಿದ್ಯಾರ್ಥಿ ಮತ್ತು ಶಾಲೆಗಳಿಗೆ ಕೊಡಬೇಕು. ಯಾವುದೇ ಶಾಲೆ ಅಥವಾ ವಿದ್ಯಾರ್ಥಿಗೆ ಆಂತರಿಕ ಮೌಲ್ಯಮಾಪನ ಅಥವಾ ಮಾಮೂಲಿ ಪರೀಕ್ಷೆಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರಬೇಕು. ಯಾವುದೇ ವಿದ್ಯಾರ್ಥಿ ಅಥವಾ ಶಾಲೆ ಆಂತರಿಕ ಮೌಲ್ಯಮಾಪನ ಬೇಡ ಎಂದು ತೀರ್ಮಾನಿಸಿದರೆ ಅಂಥವರಿಗಾಗಿ ಸಾಮಾನ್ಯ ಪರೀಕ್ಷೆ ನಡೆಸಲು ಜುಲೈ ಅಥವಾ ಬೇರೆ ಯಾವುದೇ ತಿಂಗಳಲ್ಲಿ ದಿನಾಂಕ ನಿಗದಿಪಡಿಸಬೇಕು ಎಂದು ಕೋರಿದರು.

ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಯಾವುದಾದರೂ ಒಂದು ರೀತಿಯ ಆಶಾಕಿರಣ ಇರಬೇಕು. ಮೌಲ್ಯಮಾಪನ ಮತ್ತು ಪರೀಕ್ಷೆ ಆಯ್ಕೆಗಳ ಬಗ್ಗೆ ಯಾವುದೇ ಗೊಂದಲಗಳು ಇರಬಾರದು. ಪರೀಕ್ಷೆ ರದ್ದುಪಡಿಸುವ ನಿರ್ಧಾರವನ್ನು ಉನ್ನತ ಹಂತದಲ್ಲಿ ತೆಗೆದುಕೊಳ್ಳಲಾಗಿದೆ. ನ್ಯಾಯಪೀಠವೂ ಈ ನಿರ್ಧಾರವನ್ನು ತಾತ್ವಿಕವಾಗಿ ಒಪ್ಪಿಕೊಳ್ಳುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿತು.

(CBSE ICSE should address concerns over Class 12 evaluation formula directs Supreme Court)

ಇದನ್ನೂ ಓದಿ: ಸಿಬಿಎಸ್​ಇ 12ನೇ ತರಗತಿ ಫಲಿತಾಂಶವು 30:30:40 ಮಾದರಿಯಲ್ಲಿರಲಿದೆ; ಸುಪ್ರೀಂಗೆ ಮಾಹಿತಿ ನೀಡಿರುವ ಬೋರ್ಡ್​

ಇದನ್ನೂ ಓದಿ: ICSE Board Results 2021: 6 ವರ್ಷದ ಅಂಕ ಆಧರಿಸಿ 12ನೇ ತರಗತಿ ಫಲಿತಾಂಶ; ತಾತ್ವಿಕ ಒಪ್ಪಿಗೆ ನೀಡಿದ ಸುಪ್ರೀಂಕೋರ್ಟ್

Published On - 2:50 pm, Mon, 21 June 21

ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?