Shocking News: ಪತ್ನಿ ಮಲಗುವ ಕೋಣೆ, ಬಾತ್​​ ರೂಮ್​​ನಲ್ಲಿ ಸಿಸಿಟಿವಿ ಕ್ಯಾಮೆರಾ ಅವಳಡಿಕೆ, ಪತಿ ಯಾಕೆ ಹೀಗೆ ಮಾಡಿದ?

ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತಿಯ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ನನ್ನ ಪತಿಗೆ ನನ್ನ ಮೇಲೆ ಅನುಮಾನ ಪಡುತ್ತಿದ್ದಾನೆ. ಅವರು ನಾನು ಮಲಗುವ ಕೋಣೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಶೌಚಾಲಯ ಮತ್ತು ಸ್ನಾನಗೃಹವನ್ನು ಸಹ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

Shocking News: ಪತ್ನಿ ಮಲಗುವ ಕೋಣೆ, ಬಾತ್​​ ರೂಮ್​​ನಲ್ಲಿ ಸಿಸಿಟಿವಿ ಕ್ಯಾಮೆರಾ ಅವಳಡಿಕೆ, ಪತಿ ಯಾಕೆ ಹೀಗೆ ಮಾಡಿದ?
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: May 13, 2023 | 7:28 AM

ಭೋಪಾಲ್: ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತಿಯ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ನನ್ನ ಪತಿಗೆ ನನ್ನ ಮೇಲೆ ಅನುಮಾನ ಪಡುತ್ತಿದ್ದಾನೆ. ಅವರು ನಾನು ಮಲಗುವ ಕೋಣೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಶೌಚಾಲಯ ಮತ್ತು ಸ್ನಾನಗೃಹವನ್ನು ಸಹ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆಯ ಈ ಆರೋಪ ಕೇಳಿ ಪೊಲೀಸರೂ ಕೂಡ ಅಚ್ಚರಿಗೊಂಡಿದ್ದಾರೆ. ಮಹಿಳೆ ಪೊಲೀಸ್​​ ಕಚೇರಿಗೆ ದೂರು ನೀಡಿದ್ದು. ಈ ಪ್ರಕರಣದಲ್ಲಿ ಪತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಪೊಲೀಸರು ಕೂಡ ಈ ದೂರನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಭಿಸಿದ್ದಾರೆ. ಸೀತಾರಾಮ್ ಕಾಲೋನಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ರಾಜೇಶ್ (ಹೆಸರು ಬದಲಿಸಲಾಗಿದೆ) ಅವರು ಮುಕರ್ವ ಗ್ರಾಮದಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರು 16 ವರ್ಷಗಳ ಹಿಂದೆ 2007ರಲ್ಲಿ ಮೀನಾ ಶರ್ಮಾ (ಹೆಸರು ಬದಲಾಯಿಸಲಾಗಿದೆ) ಅವರನ್ನು ವಿವಾಹವಾಗಿದ್ದರು. ಆದರೆ ಮದುವೆಯಾದ ಕೆಲವು ವರ್ಷಗಳ ನಂತರ ಇಬ್ಬರ ನಡುವೆ ಜಗಳ ಶುರುವಾಗಿದೆ.

ಶಾಲಾ ಶಿಕ್ಷಕರೊಂದಿಗೆ ರಾಜೇಶ್ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಮೀನಾ ಶಂಕೆ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಇಬ್ಬರ ನಡುವೆ ನಿರಂತರ ವಾಗ್ವಾದ ನಡೆದಿದೆ. ನಂತರ ಇಬ್ಬರೂ ವಿಚ್ಛೇದನಕ್ಕೆ ಮುಂದಾಗಿದ್ದರು. ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ಹೀಗಾಗಿ ಗಂಡ ಹೆಂಡತಿ ಇಬ್ಬರೂ ಒಂದೇ ಮನೆಯಲ್ಲಿದ್ದು ಬೇರೆ ಬೇರೆ ಕೋಣೆಗಳಲ್ಲಿ ವಾಸವಾಗಿದ್ದಾರೆ.

ಇದನ್ನೂ ಓದಿ: Shocking News : ಸರ್ಕಾರದ ಪ್ರಯೋಜನ ಪಡೆಯಲು 9 ತಿಂಗಳ ಕಾಲ ಬಾಣಂತಿ ಎಂದು ಸುಳ್ಳು ಹೇಳಿದ ಮಹಿಳೆ

ನಾನು ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಬೇಕೆಂದು ನನ್ನ ಪತಿ ಬಯಸುತ್ತಾನೆ. ಏಕೆಂದರೆ ಅವರಿಗೆ ಬೇರೆ ಮದುವೆಯಾಗಬೇಕು ಎಂಬ ಕಾರಣಕ್ಕೆ ಎಂದು ಮೀನಾ ಆರೋಪಿಸಿದ್ದಾರೆ. ಇದರ ಜತೆಗೆ ಮನೆ ಬಿಟ್ಟು ಹೋಗುವಂತೆ ಕಿರುಕುಳ ನೀಡಲಾರಂಭಿಸಿದ್ದಾರೆ. ಅದಕ್ಕಾಗಿಯೇ ನನ್ನ ಮಲಗುವ ಕೋಣೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾ ಮನೆಯ ಎಲ್ಲಾ ಚಲನವಲನಗಳನ್ನು ರೆಕಾರ್ಡ್ ಮಾಡುತ್ತಿದೆ. ಮನೆಯಲ್ಲಿ ಇರಲು ಕಷ್ಟವಾಗುತ್ತಿದೆ. ಸಿಸಿಟಿವಿ ಕ್ಯಾಮೆರಾಗಳಲ್ಲಿ ಅವನು ಏನನ್ನು ನೋಡುತ್ತಿದ್ದರೆ? ಅದರ ಹಿಂದಿರುವ ಉದ್ದೇಶವೇನು? ಆತನ ಶೋಷಣೆಯಿಂದ ನನ್ನ ಖಾಸಗಿತನಕ್ಕೆ ತೊಂದರೆಯಾಗಿದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಅಲ್ಲದೇ ಪತಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಈ ಮಹಿಳೆ ದೂರು ನೀಡಿದ್ದಾರೆ. ಮಹಿಳೆಯ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಚುನಾವಣಾ ವಿಧಾನಸಭಾ ಚುನಾವಣೆ ಫಲಿತಾಂಶ ನೇರಪ್ರಸಾರ 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್