Viral Video: ಜಮ್ಮುವಿನಲ್ಲಿ ಸೈನಿಕರಿದ್ದ ಬಸ್ ಮೇಲೆ ಉಗ್ರರ ದಾಳಿಯ ಶಾಕಿಂಗ್ ವಿಡಿಯೋ ವೈರಲ್

| Updated By: ಸುಷ್ಮಾ ಚಕ್ರೆ

Updated on: Apr 23, 2022 | 11:11 AM

ಸಿಐಎಸ್ಎಫ್ ಸಿಬ್ಬಂದಿ ಬೆಳಗಿನ ಪಾಳಿಯ ಕರ್ತವ್ಯಕ್ಕೆ ಹೋಗುತ್ತಿದ್ದಾಗ ಜಮ್ಮುವಿನ ಚಡ್ಡಾ ಕ್ಯಾಂಪ್ ಬಳಿ ಸುಮಾರು 4.25 ಗಂಟೆಗೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಒಬ್ಬ ಎಎಸ್‌ಐ ಪ್ರಾಣ ಕಳೆದುಕೊಂಡಿದ್ದರು, ಇಬ್ಬರಿಗೆ ಗಾಯಗಳಾಗಿತ್ತು.

Viral Video: ಜಮ್ಮುವಿನಲ್ಲಿ ಸೈನಿಕರಿದ್ದ ಬಸ್ ಮೇಲೆ ಉಗ್ರರ ದಾಳಿಯ ಶಾಕಿಂಗ್ ವಿಡಿಯೋ ವೈರಲ್
ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಸ್ಫೋಟ
Follow us on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (CISF) ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿದ ಬೆನ್ನಲ್ಲೇ ಈ ಘಟನೆಯ ಭಯಾನಕ ದೃಶ್ಯಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಈ ವಿಡಿಯೋದಲ್ಲಿ, 15 ಸಿಐಎಸ್‌ಎಫ್ ಸಿಬ್ಬಂದಿಯನ್ನು ಹೊತ್ತ ಬಸ್ ಜಮ್ಮುವಿನ ಸುಂಜ್ವಾನ್ ಪ್ರದೇಶದಲ್ಲಿ ರಸ್ತೆಯ ಮಧ್ಯದಲ್ಲಿ ನಿಲ್ಲುವುದನ್ನು ಕಾಣಬಹುದು. ಬಸ್ ನಿಂತ ಸ್ವಲ್ಪ ಸಮಯದ ನಂತರ ಆ ಬಸ್ ಮೇಲೆ ಗುಂಡಿನ ದಾಳಿ ನಡೆಸಿ, ಗ್ರೆನೇಡ್‌ನಿಂದ ಸ್ಫೋಟಿಸಲಾಗುತ್ತದೆ.

ವರದಿಗಳ ಪ್ರಕಾರ, ಸಿಐಎಸ್ಎಫ್ ಸಿಬ್ಬಂದಿ ಬೆಳಗಿನ ಪಾಳಿಯ ಕರ್ತವ್ಯಕ್ಕೆ ಹೋಗುತ್ತಿದ್ದಾಗ ಜಮ್ಮುವಿನ ಚಡ್ಡಾ ಕ್ಯಾಂಪ್ ಬಳಿ ಸುಮಾರು 4.25 ಗಂಟೆಗೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಒಬ್ಬ ಎಎಸ್‌ಐ ಪ್ರಾಣ ಕಳೆದುಕೊಂಡಿದ್ದರು, ಇಬ್ಬರಿಗೆ ಗಾಯಗಳಾಗಿತ್ತು. ತಕ್ಷಣವೇ ಆ ಪ್ರದೇಶವನ್ನು ಸುತ್ತುವರೆಯಲಾಗಿದ್ದು, ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

“ಸಿಐಎಸ್ಎಫ್ ದಾಳಿಗೆ ಪರಿಣಾಮಕಾರಿಯಾಗಿ ಪ್ರತಿದಾಳಿ ಮಾಡುವ ಮೂಲಕ ಭಯೋತ್ಪಾದಕ ದಾಳಿಯನ್ನು ತಪ್ಪಿಸಿತು ಮತ್ತು ಭಯೋತ್ಪಾದಕರು ಓಡಿಹೋಗುವಂತೆ ಮಾಡಿದರು. ಇದರಿಂದ ದೊಡ್ಡ ಆಪತ್ತು ತಪ್ಪಿದಂತಾಗಿದೆ. ಈ ದಾಳಿಯಲ್ಲಿ ಸಿಐಎಸ್ಎಫ್ನ ಒಬ್ಬ ಎಎಸ್ಐ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ” ಎಂದು ಸಿಐಎಸ್ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಾಂಬಾ ಜಿಲ್ಲೆಗೆ ಭೇಟಿ ನೀಡುವ ಮುನ್ನ ಈ ದಾಳಿ ನಡೆದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಪ್ರದೇಶಕ್ಕೆ ಭೇಟಿ ನೀಡುವ ಎರಡು ದಿನಗಳ ಮುನ್ನ ಶುಕ್ರವಾರ ಮುಂಜಾನೆ ಜಮ್ಮುವಿನ ಸೇನಾ ನೆಲೆಯ ಬಳಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭೀಕರ ಗುಂಡಿನ ಕಾಳಗ ನಡೆದಿತ್ತು. ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು ಮತ್ತು ಭದ್ರತಾ ಅಧಿಕಾರಿಯೊಬ್ಬರು ಪ್ರಾಣ ಕಳೆದುಕೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಸಾಂಬಾ ಜಿಲ್ಲೆಗೆ ಭೇಟಿ ನೀಡಲಿರುವ ಎರಡು ದಿನಗಳ ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಗಳ ನಡುವೆ ಸುಂಜ್ವಾನ್‌ನಲ್ಲಿ ಎನ್‌ಕೌಂಟರ್ ನಡೆದಿದೆ. ಏಪ್ರಿಲ್ 24ರಂದು ಪ್ರಧಾನಿ ಮೋದಿ ಜಮ್ಮುವಿಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು (ಏಪ್ರಿಲ್ 24) ಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ಮೋದಿ ಅವರು ಜಮ್ಮುವಿನಿಂದ 17 ಕಿಮೀ ದೂರದಲ್ಲಿರುವ ಪಾಲಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿಯವರ ಭೇಟಿಗೂ ಮುನ್ನ ಜಮ್ಮು ಕಾಶ್ಮೀರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಾದ್ಯಂತ ಭಯೋತ್ಪಾದಕರ ದಾಳಿಯನ್ನು ತಡೆಯಲು ಭದ್ರತಾ ಪಡೆಗಳು ಹಗಲಿರುಳು ಗಸ್ತು ನಡೆಸುತ್ತಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಗೂ ಮುನ್ನ ಜಮ್ಮುವಿನಲ್ಲಿ ಎನ್​ಕೌಂಟರ್; ಇಬ್ಬರು ಉಗ್ರರ ಹತ್ಯೆ, ಓರ್ವ ಸೈನಿಕ ಸಾವು

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮರಣ, ಇನ್ನೊಬ್ಬರಿಗೆ ಗಾಯ

Published On - 11:11 am, Sat, 23 April 22