‘ಜ್ಞಾನೇಶ್ ಕುಮಾರ್​ಗೆ ಪದ್ಮಭೂಷಣ ಪ್ರಶಸ್ತಿ ಕೊಡಬೇಕು’; ಚುನಾವಣಾ ಆಯುಕ್ತರನ್ನು ಸಮರ್ಥಿಸಿಕೊಂಡ ಬಿಜೆಪಿ

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ದೇಶದಾದ್ಯಂತ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಬಿಜೆಪಿ ಚುನಾವಣಾ ಆಯೋಗದ ಮುಖ್ಯಸ್ಥರ ಬೆಂಬಲಕ್ಕೆ ನಿಂತಿದೆ. ಸಿಇಸಿ ಜ್ಞಾನೇಶ್ ಕುಮಾರ್ ಅವರು ‘ಪದ್ಮಭೂಷಣ’ ಪ್ರಶಸ್ತಿಗೆ ಅರ್ಹರು ಎಂದು ಬಿಜೆಪಿ ಹೇಳಿದೆ. ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಈ ಹೇಳಿಕೆ ನೀಡಿದ್ದಾರೆ. "ಕಾಂಗ್ರೆಸ್ ಪಕ್ಷವೇ ರಾಹುಲ್ ಗಾಂಧಿ ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಅವರ ಆಪಾದನೆಗಳೇನೇ ಇದ್ದರೂ ಜ್ಞಾನೇಶ್ ಕುಮಾರ್ ಅವರು ಪದ್ಮಭೂಷಣ ಗೌರವಕ್ಕೆ ಸಂಪೂರ್ಣ ಅರ್ಹರಾಗಿದ್ದಾರೆ" ಎಂದು ತಿರುಗೇಟು ನೀಡಿದ್ದಾರೆ.

‘ಜ್ಞಾನೇಶ್ ಕುಮಾರ್​ಗೆ ಪದ್ಮಭೂಷಣ ಪ್ರಶಸ್ತಿ ಕೊಡಬೇಕು’; ಚುನಾವಣಾ ಆಯುಕ್ತರನ್ನು ಸಮರ್ಥಿಸಿಕೊಂಡ ಬಿಜೆಪಿ
ಸಮಿಕ್ ಭಟ್ಟಾಚಾರ್ಯ
Image Credit source: PTI

Updated on: Sep 25, 2026 | 11:00 PM

ನವದೆಹಲಿ, ಸೆಪ್ಟೆಂಬರ್ 25: ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ನಡೆಸುತ್ತಿರುವ ದೇಶವ್ಯಾಪಿ ಪ್ರತಿಭಟನೆ ಹಾಗೂ ‘ಎಸ್‍ಐಆರ್’ ವಿವಾದಕ್ಕೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತಿರುಗೇಟು ನೀಡಿದೆ. ಸಿಇಸಿ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ಹಾಗೂ ನಿಷ್ಪಕ್ಷಪಾತ ನಿರ್ಧಾರಗಳನ್ನು ಶ್ಲಾಘಿಸಿರುವ ಬಿಜೆಪಿ, “ಅವರು ಪದ್ಮಭೂಷಣ ಪ್ರಶಸ್ತಿಗೆ ಸಂಪೂರ್ಣವಾಗಿ ಅರ್ಹರಾಗಿದ್ದಾರೆ” ಎಂದು ಹೇಳುವ ಮೂಲಕ ವಿಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದೆ.

ಈ ವರ್ಷ ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆಯಲ್ಲಿ ಜ್ಞಾನೇಶ್ ಕುಮಾರ್ ನೇತೃತ್ವದಲ್ಲಿ ಕೈಗೊಳ್ಳಲಾದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಶ್ಲಾಘಿಸಿದ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ, “ಎಸ್‍ಐಆರ್ ಯೋಜನೆಯು ಅಕ್ರಮ ನುಸುಳುಕೋರರ ಹೆಸರುಗಳನ್ನು ತೆಗೆದುಹಾಕಲು ಮತ್ತು ಬೆದರಿಕೆ ರಾಜಕೀಯವನ್ನು ತಡೆಯಲು ಸಹಾಯ ಮಾಡಿದೆ.” ಎಂದಿದ್ದಾರೆ.

ಇದನ್ನೂ ಓದಿ: ಎಸ್​ಐಆರ್ ವಿವಾದ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ, ಎಸ್‌ಐಟಿ ತನಿಖೆಗೆ ಆಗ್ರಹ

“ಬಂಗಾಳದ ಜನತೆ ದೀರ್ಘ ಕಾಲದ ನಂತರ ಯಾವುದೇ ಹಿಂಸಾಚಾರ, ಕೊಲೆ ಅಥವಾ ಬೆದರಿಕೆ ಇಲ್ಲದೆ ಶಾಂತಿಯುತವಾಗಿ ಮತ ಚಲಾಯಿಸಿದ್ದಾರೆ. ಇಂತಹ ಮುಕ್ತ ಚುನಾವಣೆಯನ್ನು ರಾಜ್ಯದ ಜನತೆ ಹಿಂದೆಂದೂ ನೋಡಿರಲಿಲ್ಲ” ಎಂದು ಅವರು ಹೇಳಿದ್ದಾರೆ.


ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಇತ್ತೀಚಿನ ಚುನಾವಣಾ ಪ್ರಕ್ರಿಯೆಗಳ ಕುರಿತು ‘ಎಸ್‍ಐಆರ್’ವಿಚಾರವನ್ನು ಮುನ್ನೆಲೆಗೆ ತಂದು ಕಾಂಗ್ರೆಸ್ ನಾಯಕತ್ವದಲ್ಲಿ ವಿಪಕ್ಷಗಳು ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ಆಯೋಜಿಸಿದ್ದವು. ಇದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ವಿಪಕ್ಷಗಳ ಪ್ರತಿಭಟನೆಯನ್ನು ರಾಜಕೀಯ ಪ್ರೇರಿತ ಎಂದು ಬಣ್ಣಿಸಿರುವ ಬಿಜೆಪಿ ನಾಯಕರು, ಚುನಾವಣಾ ಆಯೋಗವು ಸಾಂವಿಧಾನಿಕ ಚೌಕಟ್ಟಿನಲ್ಲಿ ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ. ಜ್ಞಾನೇಶ್ ಕುಮಾರ್ ಅವರು ಭಾರತದ ಚುನಾವಣಾ ವ್ಯವಸ್ಥೆಯನ್ನು ಬಲಪಡಿಸಲು ಶ್ರಮಿಸುತ್ತಿದ್ದು, ಅವರಿಗೆ ‘ಪದ್ಮಭೂಷಣ’ ಪ್ರಶಸ್ತಿ ಸಿಗಬೇಕು ಎಂದು ಬಿಜೆಪಿ ವಕ್ತಾರ ಸಮಿಕ್ ಭಟ್ಟಾಚಾರ್ಯ ಪ್ರತಿಪಾದಿಸಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us