AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಹರು ಕುರ್ಚಿಯಲ್ಲಿ ಕುಳಿತು ಸಿಇಸಿ ‘ಅಣಕು ಮಹಾಭಿಯೋಗ’ ನಡೆಸಿದ ಮೀರಾ ಕುಮಾರ್

ವಿಪಕ್ಷ 'ಇಂಡಿ' ಬಣವು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ 'ಅಣಕು ಮಹಾಭಿಯೋಗ' ನಡೆಸಿತು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮ ಆರೋಪದ ಮೇಲೆ ಈ ಸಾಂಕೇತಿಕ ಪ್ರಕ್ರಿಯೆ ನಡೆಯಿತು. ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ನೆಹರೂ ಅವರ ಐತಿಹಾಸಿಕ ಕುರ್ಚಿಯಲ್ಲಿ ಕುಳಿತು ಸಭೆಯ ಅಧ್ಯಕ್ಷತೆ ವಹಿಸಿದ್ದು, ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ನೆಹರು ಕುರ್ಚಿಯಲ್ಲಿ ಕುಳಿತು ಸಿಇಸಿ 'ಅಣಕು ಮಹಾಭಿಯೋಗ' ನಡೆಸಿದ ಮೀರಾ ಕುಮಾರ್
ಮೀರಾ ಕುಮಾರ್
ನಯನಾ ರಾಜೀವ್
|

Updated on: Nov 01, 2026 | 8:26 AM

Share

ನವದೆಹಲಿ, ನವೆಂಬರ್ 1: ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತಗಳ ಅಳಿಸುವಿಕೆ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ವಿಪಕ್ಷಗಳ ‘ಇಂಡಿ’ ಬಣವು ಶನಿವಾರ ದೆಹಲಿಯಲ್ಲಿ ಸಾಂಕೇತಿಕವಾಗಿ “ಸಾರ್ವಜನಿಕ ಮಹಾಭಿಯೋಗ” ಪ್ರಕ್ರಿಯೆ ನಡೆಸಿತು. ಈ ಅಣಕು ಸಂಸತ್ತಿನ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಐತಿಹಾಸಿಕ ಕುರ್ಚಿಯಲ್ಲಿ ಆಸೀನರಾಗಿದ್ದು ರಾಜಕೀಯ ವಲಯದಲ್ಲಿ ತೀವ್ರ ಗಮನ ಸೆಳೆದಿದೆ.

ನೆಹರು ಕುರ್ಚಿಯ ಐತಿಹಾಸಿಕ ಮಹತ್ವ ಹಾಗೂ ಪವನ್ ಖೇರಾ ಹೇಳಿಕೆ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರು ಈ ಕುರ್ಚಿಯ ಮಹತ್ವದ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ವಿವರಣೆ ಹಂಚಿಕೊಂಡಿದ್ದಾರೆ.

ನೆಹರು ಅವರ ಅಧಿಕೃತ ಆಸನ: “ಸಿಇಸಿ ವಿರುದ್ಧ ಸಾರ್ವಜನಿಕ ಮಹಾಭಿಯೋಗ ಪ್ರಕ್ರಿಯೆಯ ಅಧ್ಯಕ್ಷತೆ ವಹಿಸಿದ್ದಾಗ ಮೀರಾ ಕುಮಾರ್ ಕುಳಿತಿದ್ದ ಕುರ್ಚಿಯು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ತಮ್ಮ ಪ್ರಧಾನಿ ಅಧಿಕಾರಾವಧಿಯುದ್ದಕ್ಕೂ ಬಳಸುತ್ತಿದ್ದ ಅಧಿಕೃತ ಆಸನವಾಗಿದೆ.”

ಐತಿಹಾಸಿಕ ನಿರ್ಧಾರಗಳ ಸಾಕ್ಷಿ: “ಭಾರತದ ಇತಿಹಾಸದಲ್ಲೇ ಅತ್ಯಂತ ಪರಿಣಾಮಕಾರಿ ನಿರ್ಧಾರಗಳನ್ನು ಕೈಗೊಂಡ ಪರಂಪರೆಯ ಭಾರವನ್ನು ಆ ಕುರ್ಚಿ ಹೊಂದಿದೆ. ಇಂದು ಅದೇ ಆಸನದಲ್ಲಿ ಕುಳಿತು ನೆಹರೂ ಅವರ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಸ್ಮರಿಸುತ್ತಾ, ಜ್ಞಾನೇಶ್ ಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಮುಂದುವರಿಯಲು ಸಂಪೂರ್ಣ ಅನರ್ಹರು ಎಂದು ಘೋಷಿಸಲಾಗಿದೆ. ಭಾರತದ ಜನರು ಜ್ಞಾನೇಶ್ ಕುಮಾರ್ ಅವರನ್ನು ತಿರಸ್ಕರಿಸಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿಯುವುದು ಕೇವಲ ಸಮಯದ ವಿಚಾರವಷ್ಟೇ ಎಂದು ಖೇರಾ ಹೇಳಿದ್ದಾರೆ.

ಮತ್ತಷ್ಟು ಓದಿ: ಎಸ್​ಐಆರ್ ಗಡುವು ವಿಸ್ತರಣೆ: ದೆಹಲಿ ಸೇರಿ 6 ರಾಜ್ಯಗಳಿಗೆ ಚುನಾವಣಾ ಆಯೋಗದಿಂದ ಹೊಸ ಡೆಡ್‌ಲೈನ್

ಖರ್ಗೆ ನಿವಾಸದಲ್ಲಿ ಅಣಕು ಸಂಸತ್ ಕಲಾಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧಿಕೃತ ನಿವಾಸದ ವಿಶಾಲ ಹುಲ್ಲುಹಾಸಿನ ಮೇಲೆ ನಿಜವಾದ ಸಂಸತ್ತಿನ ಅಧಿವೇಶನದ ಮಾದರಿಯಲ್ಲೇ ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ಮೀರಾ ಕುಮಾರ್ ಸಭಾಧ್ಯಕ್ಷತೆಯಲ್ಲಿ ನಡೆದ ಈ ಅಧಿವೇಶನದಲ್ಲಿ ವಿರೋಧ ಪಕ್ಷದ ಸಂಸದರು, ನಾಯಕರು ಹಾಗೂ ನಾಗರಿಕ ಸಮಾಜದ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಜಂಟಿಯಾಗಿ ಸಾಂಕೇತಿಕ ದೋಷಾರೋಪಣೆ ನಿರ್ಣಯವನ್ನು ಅಂಗೀಕರಿಸಿದರು.

ದೇಶದ್ರೋಹ ವಿಚಾರಣೆಗೆ ಆಗ್ರಹ: ಚುನಾವಣಾ ಅಕ್ರಮಗಳ ಮೂಲಕ ಜನರ ಪವಿತ್ರ ಮತಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿದ ನಾಯಕರು, ಮುಖ್ಯ ಚುನಾವಣಾ ಆಯುಕ್ತರನ್ನು ನ್ಯಾಯಾಲಯದಲ್ಲಿ ದೇಶದ್ರೋಹದ ವಿಚಾರಣೆಗೆ ಒಳಪಡಿಸಿ ಜೈಲಿಗೆ ಕಳುಹಿಸಬೇಕೆಂದು ಪಟ್ಟುಹಿಡಿದರು.

ಪ್ರಮುಖ ನಾಯಕರ ವಾಗ್ದಾಳಿ ಮಲ್ಲಿಕಾರ್ಜುನ ಖರ್ಗೆ: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನೇರ ಆದೇಶದಂತೆ ಭಾರತೀಯ ಚುನಾವಣಾ ಆಯೋಗವು ಕಾರ್ಯನಿರ್ವಹಿಸುತ್ತಿದೆ. ಇದರಿಂದಾಗಿ ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನದ ಮೂಲಕ ಪ್ರತಿಯೊಬ್ಬ ಭಾರತೀಯನಿಗೂ ನೀಡಿದ ಮತದಾನದ ಪವಿತ್ರ ಹಕ್ಕು ಇಂದು ಗಂಭೀರ ಅಪಾಯದಲ್ಲಿದೆ.

ರಾಹುಲ್ ಗಾಂಧಿ: ಭಾರತೀಯ ಜನರ ಮತಗಳನ್ನು ನಾಶಪಡಿಸಲು ಹಾಗೂ ಪ್ರಜಾಪ್ರಭುತ್ವವನ್ನು ಹಳಿ ತಪ್ಪಿಸಲು ಸಂಚು ರೂಪಿಸಿದವರ ವಿರುದ್ಧ ಸಿಇಸಿ ಕುಮಾರ್ ಅವರಿಗೆ ನಡೆಸಲಾದ ಈ ಸಾರ್ವಜನಿಕ ದೋಷಾರೋಪಣೆಯು ಒಂದು ಶಕ್ತಿಶಾಲಿ ‘ರಾಜಕೀಯ ಅಸ್ತ್ರ’ವಾಗಿದೆ. ನಾವು ಜನರ ಹಕ್ಕನ್ನು ಯಾರೂ ಕಸಿದುಕೊಳ್ಳಲು ಬಿಡುವುದಿಲ್ಲ. ಎಂದಿದ್ದಾರೆ.

ಚುನಾವಣಾ ಅಕ್ರಮಗಳ ಮೂಲಕ ಜನರ ಪವಿತ್ರ ಮತಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿದ ನಾಯಕರು, ಮುಖ್ಯ ಚುನಾವಣಾ ಆಯುಕ್ತರನ್ನು ನ್ಯಾಯಾಲಯದಲ್ಲಿ ದೇಶದ್ರೋಹದ ವಿಚಾರಣೆಗೆ ವಿಚಾರಣೆಗೆ ಒಳಪಡಿಸಿ ಜೈಲಿಗೆ ಕಳುಹಿಸವೇಕೆಂದು ಪಟ್ಟು ಹಿಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು