AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ಜಿಲ್ಲಾಧಿಕಾರಿಗಳಿಗೆ ಅಮಿತ್ ಶಾ ಕರೆ ಆರೋಪ, ವದಂತಿ ಹರಡಿ ಅವಮಾನಿಸುವುದು ತಪ್ಪು ಎಂದ ರಾಜೀವ್ ಕುಮಾರ್

150 ಜಿಲ್ಲಾಧಿಕಾರಿಗಳಿಗೆ ಗೃಹ ಸಚಿವ ಅಮಿತ್ ಶಾ ಕರೆ ಮಾಡಿ ಮಾತನಾಡಿದ್ದಾರೆ ಎನ್ನುವ ಕಾಂಗ್ರೆಸ್​ ಮುಖಂಡ ಜೈರಾಮ್ ರಮೇಶ್​ ಆರೋಪಕ್ಕೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್​ ಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

150 ಜಿಲ್ಲಾಧಿಕಾರಿಗಳಿಗೆ ಅಮಿತ್ ಶಾ ಕರೆ ಆರೋಪ, ವದಂತಿ ಹರಡಿ ಅವಮಾನಿಸುವುದು ತಪ್ಪು ಎಂದ ರಾಜೀವ್ ಕುಮಾರ್
ರಾಜೀವ್ ಕುಮಾರ್
ನಯನಾ ರಾಜೀವ್
|

Updated on: Jun 03, 2024 | 3:09 PM

Share

ಗೃಹ ಸಚಿವ ಅಮಿತ್ ಶಾ(Amit Shah)150 ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದ್ದಾರೆ ಎನ್ನುವ ಕಾಂಗ್ರೆಸ್​ ಮುಖಂಡ ಜೈರಾಮ್ ರಮೇಶ್​ ಆರೋಪಕ್ಕೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್​ ಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ‘‘ಯಾರಾದರೂ ಜಿಲ್ಲಾಧಿಕಾರಿಗಳ ಮೇಲೆ ಪ್ರಭಾವ ಬೀರಲು ಸಾಧ್ಯವೇ? ಒಂದೊಮ್ಮೆ ಮಾಡಿದ್ದರೆ ಅವರ ಬಗ್ಗೆ ನಮಗೆ ತಿಳಿಸಿ ನಾವು ಶಿಕ್ಷಿಸುತ್ತೇವೆ. ಆದರೆ ವದಂತಿ ಹರಡಿ ಒಬ್ಬರನ್ನು ಅವಮಾನಿಸುವುದು ಸರಿಯಲ್ಲ’’ ಎಂದು ರಾಜೀವ್​ ಕುಮಾರ್ ಹೇಳಿದ್ದಾರೆ.

ದೇಶದ 150 ಜಿಲ್ಲಾಧಿಕಾರಿಗಳೊಂದಿಗೆ ಅಮಿತ್ ಶಾ ಈಗಾಗಲೇ ಮಾತನಾಡಿದ್ದಾರೆ, ಇದು ಬಿಜೆಪಿಯ ಹತಾಶೆಯನ್ನು ತೋರಿಸುತ್ತದೆ ಎಂದು ಜೈರಾಮ್ ರಮೇಶ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದರು. ಅಧಿಕಾರದಿಂದ ಕೆಳಗಿಳಿಯಲಿರುವ ಅಮಿತ್ ಶಾ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆ ಒಡ್ಡುತ್ತಿರುವುದು ನಾಚಿಕೆಗೇಡಿನ ವಿಷಯ, ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೇ, ಸಂವಿಧಾನವನ್ನು ಎತ್ತಿಹಿಡಿಯಬೇಕು ಎಂದು ಅವರು ಬರೆದಿದ್ದರು.

ಜನರ ಆಶಯ ಈಡೇರುವುದು ಸ್ಪಷ್ಟ, ಜೂನ್ 4 ರಂದು ಪ್ರಧಾನಿ ಮೋದಿ, ಶಾ ಮತ್ತು ಬಿಜೆಪಿ ನಿರ್ಗಮನ ಹಾಗೂ ಇಂಡಿಯಾ ಒಕ್ಕೂಟದ ಗೆಲುವು ಖಚಿತ ಎಂದು ಹೇಳಿದ್ದರು. ಜೈರಾಮ್ ರಮೇಶ್ ಅವರಿಗೆ ಪತ್ರ ಬರೆದಿರುವ ಚುನಾವಣಾ ಆಯೋಗ, ಭಾನುವಾರ ಸಂಜೆ 7 ಗಂಟೆಯೊಳಗೆ ತಮ್ಮ ಆರೋಪಗಳ ಕುರಿತಾದ ಸಮಗ್ರ ವಿವರಗಳನ್ನು ಹಂಚಿಕೊಳ್ಳುವಂತೆ ಕೇಳಿದೆ.

ಮತ್ತಷ್ಟು ಓದಿ: ಕೇಜ್ರಿವಾಲ್ ಜೈಲಿಗೆ ಹೋದ ನಂತರ ಉತ್ತರಾಧಿಕಾರಿಯನ್ನು ಘೋಷಿಸಬೇಕು: ಅಮಿತ್ ಶಾ

ಚುನಾವಣಾ ಆಯೋಗವು ಜೂನ್ 1ರಂದು ಜೈರಾಮ್ ರಮೇಶ್ ಅವರು ಮಾಡಿದ್ದ ಟ್ವೀಟ್ ಅನ್ನು ಉಲ್ಲೇಖಿಸಿ ಮಾಹಿತಿ ಕೇಳಿದೆ. ‘ಮತ ಎಣಿಕೆ ಪ್ರಕ್ರಿಯೆಯು ಪ್ರತಿಯೊಬ್ಬ ಚುನಾವಣಾಧಿಕಾರಿಯ ಪವಿತ್ರ ಕರ್ತವ್ಯವಾಗಿದೆ ಮತ್ತು ಅಂತಹ ಸಾರ್ವಜನಿಕ ಹೇಳಿಕೆಗಳು ಅನುಮಾನವನ್ನು ಉಂಟುಮಾಡುತ್ತವೆ. ಆದ್ದರಿಂದ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಈ ವಿಚಾರದ ಬಗ್ಗೆ ಹೆಚ್ಚಿನ ಮಾಹಿತಿ ಒದಗಿಸಲು ಅರ್ಹವಾಗಿದೆ’ ಎಂದು ಚುನಾವಣಾ ಆಯೋಗ ರಮೇಶ್ ಅವರಿಗೆ ತಿಳಿಸಿದೆ.

ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಎಲ್ಲ ಅಧಿಕಾರಿಗಳು ಆಯೋಗದ ಡೀಮ್ಡ್ ಡೆಪ್ಯುಟೇಶನ್ ಅಡಿಯಲ್ಲಿರುತ್ತಾರೆ ಮತ್ತು ಅವರು ಯಾವುದೇ ನಿರ್ದೇಶನಗಳಿಗಾಗಿ ನೇರವಾಗಿ ಚುನಾವಣಾ ಆಯೋಗಕ್ಕೆ ವರದಿ ಮಾಡುತ್ತಾರೆ. ಆದಾಗ್ಯೂ, ನೀವು ಆರೋಪಿಸಿದಂತೆ ಯಾವುದೇ ಜಿಲ್ಲಾಧಿಕಾರಿಗಳು ಅನಗತ್ಯ ಪ್ರಭಾವ ಬೀರಲು ಯತ್ನಿಸಿರುವ ಬಗ್ಗೆ ವರದಿ ಮಾಡಿಲ್ಲ’ ಎಂದು ಅದು ಕಾಂಗ್ರೆಸ್ ನಾಯಕನಿಗೆ ತಿಳಿಸಿದೆ.

ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4 ರಂದು ಹೊರಬೀಳಲಿದೆ, ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ ಬಹುಮತ ಸಾಧಿಸಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ