ದೆಹಲಿ: ಮುಂಗಾರು ಮಳೆಯಿಂದ ಸಂಭವಿಸಿದ ಅನಾಹುತದಿಂದಾಗಿ ದೇಶದ ಹಲವು ರಾಜ್ಯಗಳು ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದವು. ಹೀಗಾಗಿ, ಮಳೆಯಿಂದ ಸಂಕಷ್ಟ ಅನುಭವಿಸಿದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಇಂದು ಪರಿಹಾರ ಬಿಡುಗಡೆ ಮಾಡಿದೆ.
ಈ ಬಾರಿ, ವರುಣನ ರೌದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ನಲುಗಿ ಹೋಗಿತ್ತು. ಜೊತೆಗೆ ಪ್ರವಾಹ, ಭೂಕುಸಿತ ಮುಂತಾದ ನೈಸರ್ಗಿಕ ಹೊಡೆತಗಳಿಗೆ ಗುರಿಯಾಗಿದ್ದ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 577 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಪರಿಹಾರದ ಮೊತ್ತದ ಬಿಡುಗಡೆಯಾಗಿದ್ದು, ಕೇಂದ್ರದ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪರಿಹಾರ ಬಿಡುಗಡೆಗೆ ಒಪ್ಪಿಗೆ ಸೂಚಿಸಲಾಗಿದೆ. ಒಟ್ಟು ಆರು ರಾಜ್ಯಗಳಿಗೆ 4,382 ಕೋಟಿ ರೂಪಾಯಿ ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಗಿದೆ. ಇದಲ್ಲದೆ, ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತದಿಂದ ಆದ ನಷ್ಟವನ್ನು ಭರಿಸಲು 2,708 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕೇಂದ್ರಿದಿಂದ ಅನುಮತಿ ನೀಡಲಾಗಿದೆ.