ಕೊರೊನಾ ಲಸಿಕೆ ಸಾಗಣೆಗೆ ₹ 480 ಕೋಟಿ ಅನುದಾನ ಬಿಡುಗಡೆ ಮಾಡಿದ ಕೇಂದ್ರ ಹಣಕಾಸು ಸಚಿವಾಲಯ

| Updated By: ಸಾಧು ಶ್ರೀನಾಥ್​

Updated on: Jan 08, 2021 | 12:28 PM

ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ₹480 ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು, ಆಯಾ ರಾಜ್ಯಗಳ ಕೊರೊನಾ ಲಸಿಕೆ ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲಾಗುವುದು.

ಕೊರೊನಾ ಲಸಿಕೆ ಸಾಗಣೆಗೆ ₹ 480 ಕೋಟಿ ಅನುದಾನ ಬಿಡುಗಡೆ ಮಾಡಿದ ಕೇಂದ್ರ ಹಣಕಾಸು ಸಚಿವಾಲಯ
ಸಾಂದರ್ಭಿಕ ಚಿತ್ರ
Follow us on

ದೆಹಲಿ: ಕೊರೊನಾ ಲಸಿಕೆ ಸಾಗಣೆ ಖರ್ಚಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ₹ 480 ಕೋಟಿ ಬಿಡುಗಡೆಯಾಗಿದೆ. ಲಸಿಕೆ ವಿತರಣೆಗಾಗಿ ವಿವಿಧ ರಾಜ್ಯಗಳಿಗೆ ಹಣ ಬಿಡುಗಡೆ ಮಾಡಲಾಗಿದ್ದು, ಆಯಾ ರಾಜ್ಯಗಳ ಕೊರೊನಾ ಲಸಿಕೆ ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಇದುವರೆಗೆ ಒಟ್ಟು 78 ಲಕ್ಷ ಆರೋಗ್ಯ ಕಾರ್ಯಕರ್ತರು ಕೊರೊನಾ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ದೇಶದಲ್ಲಿ ಒಟ್ಟಾರೆ ಒಂದು ಕೋಟಿ ಆರೋಗ್ಯ ಕಾರ್ಯಕರ್ತರಿದ್ದು, ಹೆಸರು ನೋಂದಾಯಿಸಿಕೊಳ್ಳಲು ಈಗಲೂ ಮುಕ್ತ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೊರೊನಾ ಲಸಿಕೆ ಖರೀದಿ ಒಪ್ಪಂದಕ್ಕೆ ಇಲ್ಲಿಯ ತನಕ ಸಹಿ ಹಾಕಿಲ್ಲ. ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳಿಂದ ಲಸಿಕೆ ಖರೀದಿಗೆ ಕೇಂದ್ರ ಸರ್ಕಾರ ಸಹಿ ಹಾಕಬೇಕು ಎನ್ನುವ ಮಾಹಿತಿಯೂ ಇದೇ ಸಂದರ್ಭದಲ್ಲಿ ಲಭ್ಯವಾಗಿದೆ.

ದೇಶದ ಮೂಲೆ ಮೂಲೆಗೂ ಹಾರಲಿವೆ ಕೊರೊನಾ ಲಸಿಕೆ ಹೊತ್ತ ವಿಮಾನಗಳು!