AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್ ಅಧಿಕಾರಿ ಜಿತೇಂದ್ರ ನರೈನ್​ ವಿರುದ್ಧ ಅತ್ಯಾಚಾರ ಆರೋಪ, ಅಧಿಕಾರದಿಂದ ಅಮಾನತುಗೊಳಿಸಿದ ಕೇಂದ್ರ

ಅತ್ಯಾಚಾರ ಆರೋಪ ಹೊತ್ತಿರುವ ಕೇಂದ್ರದ ಹಿರಿಯ ಅಧಿಕಾರಿ ಜಿತೇಂದ್ರ ನರೈನ್ ಅವರನ್ನು ಕೇಂದ್ರ ಸರ್ಕಾರದ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.

ಐಎಎಸ್ ಅಧಿಕಾರಿ ಜಿತೇಂದ್ರ ನರೈನ್​ ವಿರುದ್ಧ ಅತ್ಯಾಚಾರ ಆರೋಪ, ಅಧಿಕಾರದಿಂದ ಅಮಾನತುಗೊಳಿಸಿದ ಕೇಂದ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 17, 2022 | 7:48 PM

ದೆಹಲಿ: ಅತ್ಯಾಚಾರ ಆರೋಪ ಹೊತ್ತಿರುವ ಕೇಂದ್ರದ ಹಿರಿಯ ಅಧಿಕಾರಿ ಜಿತೇಂದ್ರ ನರೈನ್ ಅವರನ್ನು ಕೇಂದ್ರ ಸರ್ಕಾರದ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಆಗಸ್ಟ್‌ನಲ್ಲಿ ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಅತ್ಯಾಚಾರದ ಆರೋಪದ ಮೇಲೆ ಹಿರಿಯ ಅಧಿಕಾರಿ ಜಿತೇಂದ್ರ ನರೈನ್ ಅವರನ್ನು ಕೇಂದ್ರ ಸರ್ಕಾರದ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಹಿರಿಯ ಅಧಿಕಾರಿ ಜಿತೇಂದ್ರ ನರೇನ್ ಅವರನ್ನು ಕೇಂದ್ರವು ಅಮಾನತುಗೊಳಿಸಿದೆ. ಆಗಿನ ದ್ವೀಪಗಳ ಮುಖ್ಯ ಕಾರ್ಯದರ್ಶಿಯಾಗಿದ್ದ ನರೇನ್ ಮತ್ತು ಇನ್ನೋರ್ವ ಅಧಿಕಾರಿ ಆರ್.ಎಲ್.ರಿಷಿ ಅವರು ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು 21 ವರ್ಷದ ಮಹಿಳೆ ಆರೋಪಿಸಿದ್ದಾರೆ.

ಗೃಹ ಸಚಿವಾಲಯವು ಅಕ್ಟೋಬರ್ 16 ರಂದು ಅಂಡಮಾನ್ ಮತ್ತು ನಿಕೋಬಾರ್ ಪೊಲೀಸರಿಂದ ವರದಿಯನ್ನು ಪಡೆದು, ಜಿತೇಂದ್ರ ನಾರಾಯಣ್, IAS (AGMUT: 1990), ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಆಗಿನ ಮುಖ್ಯ ಕಾರ್ಯದರ್ಶಿಯಾಗಿದ್ದ ಜಿತೇಂದ್ರ ನರೇನ್ ಅವರನ್ನು ಕೇಂದ್ರ ಸರ್ಕಾರ ಇಂದು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಇದನ್ನು ಓದಿಆಶ್ರಮದಲ್ಲಿ 52 ವರ್ಷದ ಮಹಿಳೆಯ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ವರದಿಯಲ್ಲಿ ಜಿತೇಂದ್ರ ನರೇನ್ ಕಡೆಯಿಂದ ಘೋರ ದುರ್ನಡತೆ ಮತ್ತು ಅಧಿಕೃತ ಸ್ಥಾನದ ದುರುಪಯೋಗದ ಸಾಧ್ಯತೆ ಇರುವ ಕಾರಣ ಗೃಹ ಸಚಿವರು ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕಾನೂನು ಪ್ರಕಾರ ತಕ್ಷಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಆ ಕಾರಣಕ್ಕಾಗಿ ಅವರ ಅವರನ್ನು ಅಧಿಕಾರದಿಂದ ಅಮಾನತುಗೊಳಿಸುವಂತೆ ತಿಳಿಸಿದೆ.

ಪೊಲೀಸ್ ಪ್ರಕರಣ ದಾಖಲು ಮಾಡಿದ್ದಾರೆ. 2022ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತನ್ನ ಮೇಲೆ ಎರಡು ಬಾರಿ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಾಜಿ ಮುಖ್ಯ ಕಾರ್ಯದರ್ಶಿ ತಂಗಿದ್ದ ಆಸ್ತಿಯ ಸಾಕ್ಷ್ಯವಾಗಿ ಬಳಸಬಹುದಾದ ಸಿಸಿಟಿವಿ ದೃಶ್ಯಗಳನ್ನು ಸಂರಕ್ಷಿತಗೊಳಿಸುವಂತೆ ಅವರು ಪೊಲೀಸರನ್ನು ಕೋರಿದ್ದಾರೆ.

ಮಹಿಳೆ ವರದಿಯಲ್ಲಿ ತಿಳಿಸಿರುವಂತೆ ತಾನು ಕೆಲಸ ಹುಡುಕುತ್ತಿದ್ದಾಗ ಹೋಟೆಲ್ ಮಾಲೀಕರ ಮೂಲಕ RL ರಿಷಿಗೆ ಪರಿಚಯವಾಗಿತ್ತು. ಅವರು ಜಿತೇಂದ್ರ ನರೇನ್ ಅವರ ಮನೆಗೆ ಕರೆದುಕೊಂಡು ಹೋಗಿದ್ದಾರೆ.

ಮಾಜಿ ಮುಖ್ಯ ಕಾರ್ಯದರ್ಶಿಯ ಮನೆಯಲ್ಲಿ ತನಗೆ ಮದ್ಯವನ್ನು ಕುಡಿಯಲು ಒತ್ತಾಯ ಮಾಡಿದ್ದಾರೆ. ಆದರೆ ಅದನ್ನು ನಾನು ನಿರಾಕರಿಸಿದೆ. ಜಿತೇಂದ್ರ ನರೇನ್ ತನಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ನಂತರ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

Published On - 6:44 pm, Mon, 17 October 22

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು