AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಿಂದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಡಲು ಹೊಸ ವಿಧೇಯಕ ಮಂಡಿಸಲಿರುವ ಕೇಂದ್ರ

ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಡಲು ಕೇಂದ್ರ ಸರ್ಕಾರ ಎಲ್ಲ ಸಿದ್ದತೆಗಳನ್ನು ನಡೆಸುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಇಂದು ರಾಜ್ಯ ಸಭೆಯಲ್ಲಿ ಮಹತ್ವದ ವಿಧೇಯಕವನ್ನು ಮಂಡಿಸಲಿದೆ.

ಚುನಾವಣಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಿಂದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಡಲು ಹೊಸ ವಿಧೇಯಕ ಮಂಡಿಸಲಿರುವ ಕೇಂದ್ರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Aug 10, 2023 | 1:54 PM

Share

ದೆಹಲಿ, ಆ.10 : ಇನ್ನು ಮುಂದೆ ದೇಶದ ಮುಖ್ಯ ಚುನಾವಣಾ ಆಯುಕ್ತರನ್ನು (Election Commission of India) ನೇಮಿಸುವ ಪ್ರಕ್ರಿಯೆಯಲ್ಲಿ ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳು ತಲೆ ಹಾಕುವಂತಿಲ್ಲ. ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಡಲು ಕೇಂದ್ರ ಸರ್ಕಾರ ಎಲ್ಲ ಸಿದ್ದತೆಗಳನ್ನು ನಡೆಸುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಇಂದು ರಾಜ್ಯ ಸಭೆಯಲ್ಲಿ ಮಹತ್ವದ ವಿಧೇಯಕವನ್ನು ಮಂಡಿಸಲಿದೆ. ಈ ಹಿಂದೆ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಲ್ಲಿ ಪ್ರಧಾನ ಮಂತ್ರಿ, ಲೋಕಸಭೆ ವಿರೋಧ ಪಕ್ಷದ ನಾಯಕರು, ಮುಖ್ಯ ನ್ಯಾಯಮೂರ್ತಿ ಇರುತ್ತಿದ್ದರು. ಆದರೆ ಇನ್ನು ಮುಂದೆ ಈ ಸಮಿತಿಯಲ್ಲಿ ಪ್ರಧಾನ ಮಂತ್ರಿ ಮತ್ತು ಲೋಕಸಭೆ ವಿರೋಧ ಪಕ್ಷ ನಾಯಕ ಜತೆಗೆ ಪ್ರಧಾನಮಂತ್ರಿಗಳು ಸೂಚಿಸಿದ ಕೆಲವೊಂದು ಸಚಿವರು ಇರುತ್ತಾರೆ. ಸಮಿತಿ ಆಯ್ಕೆ ಮಾಡಿದ ಅಧಿಕಾರಿಯನ್ನು ಮುಖ್ಯ ಚುನಾವಣಾ ಆಯುಕ್ತರಾಗಿ ಆಯ್ಕೆ ಮಾಡಲು ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಲಾಗುತ್ತದೆ.

ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿಯ ಬಗ್ಗೆ ಈ ಹಿಂದೆ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಹಲವು ಬಾರಿ ಸಂಘರ್ಷ ಏರ್ಪಟ್ಟಿದ್ದು. ಈ ಸಂಘರ್ಷವನ್ನು ಅಂತ್ಯ ಕಾಣಿಸಲು ಕೇಂದ್ರ ಸರ್ಕಾರ ನ್ಯಾಯಾಂಗವನ್ನು ಈ ಆಯ್ಕೆ ಸಮಿತಿಯಿಂದ ದೂರು ಇಡಲು ನಿರ್ಧಾರಿಸಿದೆ. ದೇಶದ ಉನ್ನತ ಚುನಾವಣಾ ಅಧಿಕಾರಿಗಳನ್ನು ನೇಮಿಸುವ ಪ್ರಕ್ರಿಯೆಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳು ಹಸ್ತಕ್ಷೇಪ ಮಾಡಬಾರದು ಎಂದು ಇಂದು ರಾಜ್ಯಸಭೆಯಲ್ಲಿ ವಿಧೇಯಕವನ್ನು ಮಂಡಿಸಲಿದೆ.

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವೆಗಳ ಷರತ್ತುಗಳು ಮತ್ತು ಅಧಿಕಾರದ ಅವಧಿ) ನೇಮಕಾತಿಗೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳನ್ನು ಒಳಗೊಂಡಿರುವ ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ ಎಂಬುದನ್ನು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಈ ಸಮಿತಿಯಲ್ಲಿ ಮುಖ್ಯವಾಗಿ ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನ ಮಂತ್ರಿಯಿಂದ ನಾಮನಿರ್ದೇಶನಗೊಂಡ ಕೇಂದ್ರ ಸಂಪುಟ ಸಚಿವರು ಇರುತ್ತಾರೆ. ಪ್ರಧಾನಿ ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.

ಇದನ್ನೂ ಓದಿ: ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಸಮಿತಿಯನ್ನು ರಚಿಸಿದ ಸುಪ್ರೀಂಕೋರ್ಟ್​

ಇನ್ನು ಕೇಂದ್ರ ಮತ್ತು ಸುಪ್ರೀಂ ಕೋರ್ಟ್​ ನಡುವೆ ನ್ಯಾಯಾಧೀಶರ ನೇಮಕಾತಿಯಿಂದ ಹಿಡಿದು ದೆಹಲಿ ಸೇವಾ ಕಾಯ್ದೆಯಂತಹ ವಿವಾದಾತ್ಮಕ ಕಾನೂನುಗಳ ವಿಚಾರವಾಗಿ ಸಂಘರ್ಷ ನಡೆಯುತ್ತಲೇ ಇತ್ತು. ಇದೀಗ ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಬಗ್ಗೆ ಕೇಂದ್ರ ಮತ್ತು ಸುಪ್ರೀಂ ನಡುವೆ ಹೊಸ ವಿವಾದ ಸೃಷ್ಟಿಯಾಗಿದೆ.

ಈ ಹಿಂದೆ ದೆಹಲಿಯ ಸಾರ್ವಜನಿಕ ಸುವ್ಯವಸ್ಥೆ ಮತ್ತು ಪೊಲೀಸ್ ಹೊರತುಪಡಿಸಿ ಎಲ್ಲಾ ಸೇವೆಗಳನ್ನು ದೆಹಲಿ ಸರ್ಕಾರ ನಿಯಂತ್ರಿಸುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಆದರೆ ಕೇಂದ್ರವು ಇದನ್ನು ಮರುಪರಿಶೀಲನೆಗೆ ಕೋರಿ ದೆಹಲಿಯ ಮೇಲೆ ಕೇಂದ್ರ ನಿಯಂತ್ರಣವನ್ನು ಮತ್ತೆ ಸ್ಥಾಪಿಸಲು ಸುಗ್ರೀವಾಜ್ಞೆಯನ್ನು ತಂದಿತು. ಈ ಮೂಲಕ ಉಭಯ ಸದನದಲ್ಲಿ ದೆಹಲಿ ಸೇವಾ ಮಸೂದೆಯನ್ನು ಅಂಗೀಕಾರಗೊಳಿಸಿತ್ತು. ಇನ್ನು ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗಳ ನೇಮಕಾತಿ ವಿಚಾರಕ್ಕೆ ಬಂದರೆ, ಕೇಂದ್ರ ಮತ್ತು ಸುಪ್ರೀಂ ನಡುವೆ ದೀರ್ಘಕಾಲದವರೆಗೆ ಒಳಜಗಳಗಳು ಉಂಟಾಗಿ ದೊಡ್ಡ ವಿವಾದ ಸೃಷ್ಟಿಸಿತ್ತು. ಕೊನೆಗೆ ಎರಡು ಕಡೆ ಸಮನ್ವಯ ಸಾಧಿಸಿ, ಆಯ್ಕೆ ಪ್ರಕ್ರಿಯೆ ನಡೆಸಿತ್ತು. ಚುನಾವಣಾ ಆಯುಕ್ತರ ನೇಮಕಾತಿಯಲ್ಲೂ ಮತ್ತೆ ಅದೇ ತಕರಾರು, ಈ ಹಿಂದೆ ಸುಪ್ರೀಂ ಕೋರ್ಟ್​ ಅತುರದ ಆಯ್ಕೆ ಬೇಡ ಎಂದು ಕೇಂದ್ರಕ್ಕೆ ಖಡಕ್​​ ಆದೇಶವನ್ನು ನೀಡಿತ್ತು. ಸುಪ್ರೀಂ ಕೇಂದ್ರದ ಎಲ್ಲ ವಿಚಾರಕ್ಕೂ ಹಸ್ತಕ್ಷೇಪ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ಇದೀಗ ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳು ಹಸ್ತಕ್ಷೇಪ ಮಾಡಬಾರದು ಎಂದು ಹೊಸ ವಿಧೇಯಕವನ್ನು ರಾಜ್ಯ ಸಭೆಯಲ್ಲಿ ಮಂಡಿಸಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:18 pm, Thu, 10 August 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ