AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಸಿಬಿಐಗೆ; ಎಫ್ಐಆರ್ ದಾಖಲು

ಕೇಂದ್ರ ಗೃಹ ಸಚಿವಾಲಯದ ಉಲ್ಲೇಖದ ಮೇರೆಗೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ. ವಿಚಾರಣೆಯು ಕಾಲಮಿತಿಯಾಗಿರಬೇಕು ಮತ್ತು ಮಣಿಪುರದ ಹೊರಗೆ ನಡೆಯಬೇಕು ಎಂದು ಕೇಂದ್ರವು ಗುರುವಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

Manipur Violence: ಮಣಿಪುರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಸಿಬಿಐಗೆ; ಎಫ್ಐಆರ್ ದಾಖಲು
ಸಿಬಿಐ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 29, 2023 | 3:32 PM

Share

ದೆಹಲಿ ಜುಲೈ 29:  ಮೇ 4 ರಂದು ಮಣಿಪುರದಲ್ಲಿ (Manipur Horror) ಜನರ ಗುಂಪೊಂದು ಮೂವರು ಕುಕಿ ಮಹಿಳೆಯರನ್ನು ವಿವಸ್ತ್ರಗೊಳಿಸಿ, ಬೆತ್ತಲೆಯಾಗಿ ಮೆರವಣಿಗೆ ಮಾಡಿ, ಅವರಲ್ಲಿ ಒಬ್ಬಾಕೆಯನ್ನು ಸಾಮೂಹಿಕ ಅತ್ಯಾಚಾರಕ್ಕೆ ಒಳಪಡಿಸಿದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (CBI) ಶುಕ್ರವಾರ ವಹಿಸಿಕೊಂಡಿದೆ. ತನಿಖೆಯನ್ನು ಕೈಗೆತ್ತಿಕೊಂಡ ನಂತರ, ಸಂಸ್ಥೆಯು ಮಣಿಪುರ ಪೊಲೀಸರು ದಾಖಲಿಸಿದ ಪ್ರಥಮ ಮಾಹಿತಿ ವರದಿಯನ್ನು (FIR) ಮರು ನೋಂದಾಯಿಸಿದೆ ಎಂದು ಈ ಬಗ್ಗೆ ತಿಳಿದಿರುವ ಜನರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಈ ಭೀಕರ ಅಪರಾಧದ ವೈರಲ್ ವಿಡಿಯೊ ಜುಲೈ 19 ರಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಈ ವಿಡಿಯೊ ಘಟನೆ ನಡೆದು ಸುಮಾರು ಮೂರು ತಿಂಗಳ ನಂತರ ಬೆಳಕಿಗೆ ಬಂದಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಮೇ 4 ರಂದು ಒಬ್ಬಾಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸಂತ್ರಸ್ತೆಯ ಕುಟುಂಬದ ಇಬ್ಬರು ಪುರುಷರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಕೇಂದ್ರ ಗೃಹ ಸಚಿವಾಲಯದ ಉಲ್ಲೇಖದ ಮೇರೆಗೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ. ವಿಚಾರಣೆಯು ಕಾಲಮಿತಿಯಾಗಿರಬೇಕು ಮತ್ತು ಮಣಿಪುರದ ಹೊರಗೆ ನಡೆಯಬೇಕು ಎಂದು ಕೇಂದ್ರವು ಗುರುವಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಕೇಂದ್ರ ಸರ್ಕಾರವು ಈಗಿನ ಅಪರಾಧಗಳನ್ನು ತುಂಬಾ ಘೋರವೆಂದು ಪರಿಗಣಿಸುತ್ತದೆ.  ಅದನ್ನು ಗಂಭೀರವಾಗಿಯೇ ತೆಗೆದುಕೊಳ್ಳಬೇಕು. ಆದರೆ ನ್ಯಾಯವನ್ನು ನೋಡಬೇಕು. ಅದು ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದಂತೆ ರಾಷ್ಟ್ರದಾದ್ಯಂತ ಪ್ರತಿಬಂಧಕ ಪರಿಣಾಮವನ್ನು ಬೀರುತ್ತದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ವಿಡಿಯೊ ವೈರಲ್ ಆದ ನಂತರ, ಇಬ್ಬರು ಮಹಿಳೆಯರ ಮೇಲಿನ ಹಲ್ಲೆಗಳು ಅಕ್ಷಮ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇತ್ತ ಕಾಂಗ್ರೆಸ್ ನೇತೃತ್ವದ ವಿಪಕ್ಷ ಗುಂಪುಗಳು ಮಣಿಪುರ ವಿಷಯದ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿಯವರ ಹೇಳಿಕೆ ಮತ್ತು ನಂತರ ಉಭಯ ಸದನಗಳಲ್ಲಿ ಚರ್ಚೆಗೆ ಒತ್ತಾಯಿಸುತ್ತಿವೆ.

ಇದನ್ನೂ ಓದಿ: Manipur Violence: ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ

ಈ ಪ್ರಕರಣದಲ್ಲಿ ಮಣಿಪುರ ಪೊಲೀಸರು ಇದುವರೆಗೆ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ವೈರಲ್ ವೀಡಿಯೊದಲ್ಲಿ ಕಂಡುಬರುವ ಕೆಲವರು ಸೇರಿದಂತೆ ಇತರರ ಹುಡುಕಾಟ ನಡೆಯುತ್ತಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಬಿಐನ ವಿಶೇಷ ತನಿಖಾ ತಂಡ (ಎಸ್‌ಐಟಿ) ಈಗಾಗಲೇ ಮಣಿಪುರದಲ್ಲಿ ಹಿಂಸಾಚಾರ ಮತ್ತು ರಾಜ್ಯದ ಶಸ್ತ್ರಾಗಾರಗಳಿಂದ ಶಸ್ತ್ರಾಸ್ತ್ರಗಳನ್ನು ಲೂಟಿಗೆ ಸಂಬಂಧಿಸಿದ ಇತರ ಆರು ಪ್ರಕರಣಗಳನ್ನು ತನಿಖೆ ನಡೆಸುತ್ತಿದೆ ಎಂದು ಬೆಳವಣಿಗೆಯ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರ ಪೊಲೀಸರು ಬಂಧಿಸಿರುವ ಆರೋಪಿಗಳನ್ನು ಏಜೆನ್ಸಿ ವಶಕ್ಕೆ ಪಡೆದು ವಿಚಾರಣೆ ನಡೆಸುವುದಲ್ಲದೆ, ಸಂತ್ರಸ್ತರು, ಅವರ ಕುಟುಂಬಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುತ್ತದೆ ಎಂದು ಸಿಬಿಐ ತನಿಖೆಯ ಪರಿಚಯವಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ