Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Chakra ಸೈಬರ್ ಅಪರಾಧಿಗಳ ವಿರುದ್ಧ 105 ಸ್ಥಳಗಳಲ್ಲಿ ಸಿಬಿಐ ಶೋಧ; ₹1.5 ಕೋಟಿ ನಗದು, ಚಿನ್ನ ವಶ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳ ಸಹಯೋಗದಲ್ಲಿ ನಡೆಸಿದ ಈ ಕಾರ್ಯಾಚರಣೆಯನ್ನು 'ಆಪರೇಷನ್ ಚಕ್ರ' ಎಂದು ಕರೆಯಲಾಗಿದೆ.

Operation Chakra ಸೈಬರ್ ಅಪರಾಧಿಗಳ ವಿರುದ್ಧ 105 ಸ್ಥಳಗಳಲ್ಲಿ ಸಿಬಿಐ ಶೋಧ; ₹1.5 ಕೋಟಿ ನಗದು, ಚಿನ್ನ ವಶ
ಸಿಬಿಐ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 04, 2022 | 7:59 PM

ಸಿಬಿಐ (CBI) ಮಂಗಳವಾರ ಭಾರತದಾದ್ಯಂತ 105 ಸ್ಥಳಗಳಲ್ಲಿ ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವ ಸೈಬರ್ ಅಪರಾಧಿಗಳ ವಿರುದ್ಧ ಶೋಧ ನಡೆಸಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳ ಸಹಯೋಗದಲ್ಲಿ ನಡೆಸಿದ ಈ ಕಾರ್ಯಾಚರಣೆಯನ್ನು ‘ಆಪರೇಷನ್ ಚಕ್ರ’ (Operation Chakra)ಎಂದು ಕರೆಯಲಾಗಿದೆ. ಸುದ್ದಿ ಸಂಸ್ಥೆ ಪಿಟಿಐ ವರದಿ ಪ್ರಕಾರ  87 ಸ್ಥಳಗಳನ್ನು ಸಿಬಿಐ ಮತ್ತು 18 ಸ್ಥಳಗಳನ್ನು ರಾಜ್ಯ ಮತ್ತು ಯುಟಿ ಪೊಲೀಸರು ಶೋಧಿಸುತ್ತಿದ್ದಾರೆ. ಇದರಲ್ಲಿ 300 ಕ್ಕೂ ಹೆಚ್ಚು ಶಂಕಿತರನ್ನು ವಿಚಾರಣೆಯಡಿಯಲ್ಲಿದ್ದಾರೆ ಎಂದು ವರದಿ ಮಾಡಿದೆ. ಈ ಶೋಧದ ವೇಳೆ ಅಪಾರ ಪ್ರಮಾಣದ ಡಿಜಿಟಲ್ ಸಾಕ್ಷ್ಯಗಳು, ₹1.5 ಕೋಟಿ ನಗದು ಮತ್ತು 1.5 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಆರಂಭಿಕ ಮಾಹಿತಿಯ ಪ್ರಕಾರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಾಲ್ಕು ಸ್ಥಳಗಳು, ದೆಹಲಿಯಲ್ಲಿ ಐದು, ಚಂಡೀಗಢದಲ್ಲಿ ಮೂರು ಮತ್ತು ಪಂಜಾಬ್, ಕರ್ನಾಟಕ ಮತ್ತು ಅಸ್ಸಾಂನಲ್ಲಿ ತಲಾ ಎರಡು ಸ್ಥಳಗಳಲ್ಲಿ ಕಾರ್ಯಾಚರಣ ನಡೆಸಲಾಗಿದೆ ಪಿಟಿಐ ವರದಿ ಮಾಡಿದೆ.

ಪುಣೆ ಮತ್ತು ಅಹಮದಾಬಾದ್‌ನಲ್ಲಿ ಅಮೆರಿಕದ ಪ್ರಜೆಗಳನ್ನು ಗುರಿಯಾಗಿಸಿಕೊಂಡ ಎರಡು ಕಾಲ್ ಸೆಂಟರ್‌ಗಳನ್ನು ಭೇದಿಸಲಾಗಿದೆ. ಈ ಕ್ರಮದ ಬಗ್ಗೆ ಸಿಬಿಐ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಗೆ ಮಾಹಿತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಸ್ಥಾನದ ಒಂದು ಸ್ಥಳದಿಂದ ಸಿಬಿಐ ₹ 1.5 ಕೋಟಿ ನಗದು ಮತ್ತು ಒಂದೂವರೆ ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ. ಸಂಬಂಧಪಟ್ಟ ವ್ಯಕ್ತಿ ಅಕ್ರಮವಾಗಿ ಕಾಲ್ ಸೆಂಟರ್ ನಡೆಸುತ್ತಿದ್ದ. ಅಹಮದಾಬಾದ್ ಮತ್ತು ಪುಣೆಯಲ್ಲಿ ಇಂತಹ ಎರಡು ಕಾಲ್ ಸೆಂಟರ್‌ಗಳನ್ನು ಕೂಡ ಭೇದಿಸಲಾಗಿದೆ. ಆತ ಅಮೆರಿಕದಲ್ಲಿ ಕಾಲ್ ಸೆಂಟರ್ ವಂಚನೆಯಲ್ಲಿ ತೊಡಗಿದ್ದರು. ಎಫ್‌ಬಿಐಗೆ ಮಾಹಿತಿ ನೀಡಲಾಗಿದೆ ಮತ್ತು ಅವರು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಾರ್ಕ್ ವೆಬ್‌ನಲ್ಲಿನ ಹಣಕಾಸಿನ ವಹಿವಾಟುಗಳು ಮತ್ತು ಸೈಬರ್‌ಕ್ರೈಮ್ ಚಟುವಟಿಕೆಗಳ ವಿವರಗಳನ್ನು ಒಳಗೊಂಡಿರುವ ಬೃಹತ್ ಡಿಜಿಟಲ್ ಪುರಾವೆಗಳನ್ನು ಸಹ ಸಂಸ್ಥೆ ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಪಂಜಾಬ್‌ನ  ವ್ಯಕ್ತಿಯೊಬ್ಬನನ್ನು ಗುರುತಿಸಲಾಗಿದೆ ಎಂದು ಅವರು ಹೇಳಿದರು.

ಈ ಕಾರ್ಯಾಚರಣೆಯನ್ನು ಸಿಬಿಐನ ಸೈಬರ್ ಕ್ರೈಂ ವಿಭಾಗವು ಸಂಯೋಜಿಸುತ್ತಿದೆ. ಈ ಜಾಗತಿಕ ಕಾರ್ಯಾಚರಣೆಗಳನ್ನು ಇತ್ತೀಚೆಗೆ ರಚಿಸಲಾದ ಸೈಬರ್ ಕ್ರೈಮ್ ಇನ್ವೆಸ್ಟಿಗೇಶನ್ ಡಿವಿಷನ್ ಎಂಬ ಏಜೆನ್ಸಿಯ ಅಂತರಾಷ್ಟ್ರೀಯ ಕಾರ್ಯಾಚರಣೆ ವಿಭಾಗವು ನಡೆಸುತ್ತಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Published On - 7:38 pm, Tue, 4 October 22

ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ