ಆಯುಷ್ ಮಿಷನ್ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

| Updated By: ganapathi bhat

Updated on: Jul 14, 2021 | 6:12 PM

ಕಳೆದ ವರ್ಷ ಏಪ್ರಿಲ್​ನಲ್ಲಿ ಹೀಗೆ ಭೌತಿಕವಾಗಿ ಕೇಂದ್ರ ಸಂಪುಟ ಸಭೆ ನಡೆದಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯನ್ನು ನರೇಂದ್ರ ಮೋದಿ ಭೌತಿಕವಾಗಿ ನಡೆಸಿದ್ದಾರೆ. ಹಾಗೇ, ಇಂದು ಸಂಜೆ 4ಗಂಟೆಗೆ ತಮ್ಮ ಮಂತ್ರಿ ಮಂಡಲವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.

ಆಯುಷ್ ಮಿಷನ್ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಪ್ರಧಾನಿ ನರೇಂದ್ರ ಮೋದಿ
Follow us on

ದೆಹಲಿ: ರಾಷ್ಟ್ರೀಯ ಆಯುಷ್ ಮಿಷನ್ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರದಿಂದ ಪ್ರಾಯೋಜಿತ ಯೋಜನೆಯಾಗಿ ಏಪ್ರಿಲ್ 1, 2021 ರಿಂದ ಮಾರ್ಚ್ 31, 2026ರ ವರೆಗೆ ಈ ಯೋಜನೆ ನಡೆಸಲು ಕೇಂದ್ರ ಮಂತ್ರಿ ಮಂಡಲದ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ 4,607. 30 ಕೋಟಿ ರೂಪಾಯಿ ಅನುದಾನ ಸೂಚಿಸಲಾಗಿದೆ. ದೇಶದಾದ್ಯಂತ 12,000 ಆಯುಷ್ ಹೆಲ್ತ್ ಸೆಂಟರ್ ಸ್ಥಾಪನೆ ಮಾಡಲಾಗುವವುದು ಎಂದು ಮಾಹಿತಿ ಲಭ್ಯವಾಗಿದೆ.

ಕಳೆದ ಕೆಲವು ದಿನಗಳಿಂದ ಕೊರೊನಾ ತಡೆಯ ನಿರ್ಬಂಧಗಳು, ಕೊವಿಡ್-19 ಮಾರ್ಗಸೂಚಿಗಳನ್ನು ಮರೆತು ಜನರು ಸಾಮೂಹಿಕವಾಗಿ, ಸಾರ್ವಜನಿಕವಾಗಿ ವ್ಯವಹರಿಸುತ್ತಿರುವುದು ಕಂಡುಬರುತ್ತಿದೆ. ಈ ಸಂಬಂಧ ಕೆಲವು ಚಿತ್ರಗಳೂ ಹರಿದಾಡುತ್ತಿವೆ. ಮಾಸ್ಕ್, ಸಾಮಾಜಿಕ ಅಂತರ ಇಲ್ಲದೆ ಜನರು ವ್ಯವಹರಿಸುತ್ತಿದ್ದಾರೆ. ಇದು ಅಪಾಯಕಾರಿ ಚಿಹ್ನೆ ಎಂದು ಮೋದಿ ಹೇಳಿರುವ ಬಗ್ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಗೋಕುಲ್​ ಯೋಜನೆಯಡಿ ತಳಿ ಸಮೃದ್ಧಿ ಮಾಡಲಾಗುವ ಪಶು ವಿಕಾಸ ಯೋಜನೆಗೆ ಸರ್ಕಾರದಿಂದ ಸಹಾಯಧನ ನೀಡಲು ಕೂಡ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್​ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸಾಂಕ್ರಾಮಿಕ ರೋಗ ತಡೆ ಯೋಜನೆ ಜೋಡಣೆ, ಪಶು ತಪಾಸಣೆಗೆ ಆಂಬುಲೆನ್ಸ್​ ಬಳಸಿಕೊಳ್ಳಲು ನಿರ್ಣಯ ಕೈಗೊಳ್ಳಲಾಗಿದೆ. ಡೇರಿ ಮೂಲಸೌಕರ್ಯ ಅಭಿವೃದ್ಧಿ ನಿಧಿಯಡಿ ಅನುದಾನ ಬಳಕೆ ಮಾಡಲಾಗುವುದು. ರೈತರಿಗೆ ಗುಣಮಟ್ಟದ ತಳಿ ಸಿಗಬೇಕು ಎಂಬುದು ಉದ್ದೇಶ. ಇದಕ್ಕಾಗಿ ಕೇಂದ್ರ ಸರ್ಕಾರದಿಂದ 9,800 ಕೋಟಿ ರೂಪಾಯಿ ನೀಡಲಾಗುವುದು ಎಂದು ತಿಳಿದುಬಂದಿದೆ.

ಭಾರತದಲ್ಲಿ ಹಡಗು ಅಭಿವೃದ್ಧಿಗೆ 1,624 ಕೋಟಿ ಹಣ ಖರ್ಚು ಮಾಡಲಾಗುವುದು. ಮುಂದಿನ 5 ವರ್ಷಗಳಿಗೆ 1,624 ಕೋಟಿ ಹಣ ಖರ್ಚು ಮಾಡಲಾಗುವುದು ಎಂದೂ ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್​ ಹೇಳಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಕೇಂದ್ರ ಸಂಪುಟದ ಸಚಿವರೊಂದಿಗೆ ಭೌತಿಕವಾಗಿಯೇ ಸಭೆ ನಡೆಸಿದರೆ. ಕೊವಿಡ್​ 19 ಕಾರಣದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಸಚಿವ ಸಂಪುಟದ ಸಭೆ ನಡೆಯುತ್ತಿತ್ತು. ಜು.7ರಂದು ಹೊಸದಾಗಿ ಕ್ಯಾಬಿನೆಟ್​ ವಿಸ್ತರಣೆಯಾಗಿದ್ದು, 43 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಜು.8ರಂದು ತಮ್ಮ ಸಂಪುಟದ ನೂತನ ಸಚಿವರೊಂದಿಗೆ ಮಾತುಕತೆ ನಡೆಸಿದ್ದ ಪ್ರಧಾನಿ ಮೋದಿ ಕೆಲವು ಸಲಹೆಗಳನ್ನು ನೀಡಿದ್ದರು.

ಕಳೆದ ವರ್ಷ ಏಪ್ರಿಲ್​ನಲ್ಲಿ ಹೀಗೆ ಭೌತಿಕವಾಗಿ ಕೇಂದ್ರ ಸಂಪುಟ ಸಭೆ ನಡೆದಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯನ್ನು ನರೇಂದ್ರ ಮೋದಿ ಭೌತಿಕವಾಗಿ ನಡೆಸಿದ್ದಾರೆ. ಹಾಗೇ, ಇಂದು ಸಂಜೆ 4ಗಂಟೆಗೆ ತಮ್ಮ ಮಂತ್ರಿ ಮಂಡಲವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ. ಇದೇ ಕಾರಣಕ್ಕೆ ಪ್ರಧಾನಿ ಮೋದಿ ಕ್ಯಾಬಿನೆಟ್ ಸಭೆ ನಡೆಸಿದ್ದಾರೆ ಮತ್ತು ಮಂತ್ರಿಮಂಡಲವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಕ್ಯಾಬಿನೆಟ್ ಸಮಿತಿಗಳನ್ನು ಪುನರ್ ರಚಿಸಿದ್ದಾರೆ. ಆರ್ಥಿಕ ವ್ಯವಹಾರಗಳ ಪ್ರಬಲ ಕ್ಯಾಬಿನೆಟ್ ಸಮಿತಿಯನ್ನು ಕಿರಿದಾಗಿಸಿದ್ದು ಮತ್ತು ರಾಜಕೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಗೆ ಹೊಸಬರನ್ನು ತರಲಾಗಿದೆ. ಪ್ರಧಾನಿ ಮೋದಿ ನೇತೃತ್ವದ ನಿರ್ಣಾಯಕ ಸಿಸಿಪಿಎದಲ್ಲಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಗಿರಿರಾಜ್ ಸಿಂಗ್, ಮನ್ಸುಖ್ ಮಾಂಡವಿಯಾ, ಭೂಪೇಂದರ್ ಯಾದವ್ ಮತ್ತು ಸರ್ಬಾನಂದ ಸೋನೊವಾಲ್ ಹೊಸದಾಗಿ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಮುಂಗಾರು ಅಧಿವೇಶನದ ಸಿದ್ಧತೆ; ಕೇಂದ್ರ ಸಚಿವ ಸಂಪುಟದ ಸಭೆ ನಡೆಸಿದ ಪ್ರಧಾನಿ ಮೋದಿ

ನಿರೀಕ್ಷೆಗಳನ್ನು ಪಕ್ಕಕ್ಕಿಟ್ಟು ಪ್ರಯತ್ನಿಸಿದರೆ ಗೆಲುವು ನಿಮ್ಮದೇ: ಒಲಿಂಪಿಕ್ಸ್ ಕ್ರೀಡಾಪಟುಗಳನ್ನು ಹುರಿದುಂಬಿಸಿದ ಮೋದಿ

Published On - 4:27 pm, Wed, 14 July 21