ರಾಜ್ಯಗಳಿಗೆ ಒಬಿಸಿ ಪಟ್ಟಿ ರೂಪಿಸಿಕೊಳ್ಳುವ ಅಧಿಕಾರ ಮರುಸ್ಥಾಪನೆಗೆ ಕೇಂದ್ರ ಸಂಪುಟ ನಿರ್ಧಾರ

ಮಹಾರಾಷ್ಟ್ರದ ಮರಾಠ ಮೀಸಲಾತಿ ರದ್ದುಪಡಿಸಿದ್ದಕ್ಕೆ ಪರಿಹಾರ ರೂಪದಲ್ಲಿ ಈ ಮಸೂದೆಯನ್ನು ಸಿದ್ಧಪಡಿಸಿದ್ದು ಸಂಸತ್ತಿನ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆಯಲು ಪ್ರಯತ್ನ ಮಾಡಲಾಗುತ್ತಿದೆ.

ರಾಜ್ಯಗಳಿಗೆ ಒಬಿಸಿ ಪಟ್ಟಿ ರೂಪಿಸಿಕೊಳ್ಳುವ ಅಧಿಕಾರ ಮರುಸ್ಥಾಪನೆಗೆ ಕೇಂದ್ರ ಸಂಪುಟ ನಿರ್ಧಾರ
ಸಂಸತ್ ಭವನ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 04, 2021 | 6:41 PM

ದೆಹಲಿ: ದೇಶದ ವಿವಿಧ ರಾಜ್ಯಗಳು ತಮ್ಮದೇ ಆದ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿ ಹೊಂದಲು ಅವಕಾಶ ಮಾಡಿಕೊಡುವ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇದೇ ಮುಂಗಾರು ಅಧಿವೇಶನದಲ್ಲಿ ಮಸೂದೆಯು ಸಂಸತ್ತಿನಲ್ಲಿ ಮಂಡನೆಯಾಗುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಮರಾಠ ಮೀಸಲಾತಿ ರದ್ದುಪಡಿಸಿದ್ದಕ್ಕೆ ಪರಿಹಾರ ರೂಪದಲ್ಲಿ ಈ ಮಸೂದೆಯನ್ನು ಸಿದ್ಧಪಡಿಸಿದ್ದು ಸಂಸತ್ತಿನ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆಯಲು ಪ್ರಯತ್ನ ಮಾಡಲಾಗುತ್ತಿದೆ.

ಸಂವಿಧಾನದ 127ನೇ ತಿದ್ದುಪಡಿಯ ಈ ಮಸೂದೆಗೆ ಉಭಯ ಸದನಗಳ ಅನುಮೋದನೆ ದೊರೆತರೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೇ ಮುಂದಿನ ದಿನಗಳಲ್ಲಿ ತಮ್ಮ ಅಗತ್ಯಕ್ಕೆ ತಕ್ಕಂತೆ ತಮ್ಮದೇ ಆದ ಒಬಿಸಿ ಪಟ್ಟಿ ರಚಿಸಿಕೊಳ್ಳಲು ಅವಕಾಶ ಸಿಗಲಿದೆ. ಮೇ 5ರಂದು ಸುಪ್ರೀಂಕೋರ್ಟ್ ನೀಡಿದ್ದ ಆದೇಶವು ರಾಜ್ಯ ಸರ್ಕಾರಗಳ ಅಧಿಕಾರವನ್ನು ತೆಗೆದುಹಾಕಿತ್ತು. ಕೇಂದ್ರ ಸರ್ಕಾರಕ್ಕೆ ಮಾತ್ರ ಒಬಿಸಿ ಪಟ್ಟಿ ಸಿದ್ಧಪಡಿಸುವ ಅಧಿಕಾರವಿದೆ ಎಂದು ಹೇಳಿತ್ತು.

ಸಂವಿಧಾನದ 342-ಎ ಮತ್ತು 366 (26) ಸಿ ಪರಿಚ್ಛೇದಗಳ ತಿದ್ದುಪಡಿಗೆ ಸಂಸತ್ತು ಒಪ್ಪಿಕೊಂಡ ನಂತರ ರಾಜ್ಯ ಸರ್ಕಾರಗಳಿಗೆ ಒಬಿಸಿ ಪಟ್ಟಿ ಸಿದ್ಧಪಡಿಸುವ ಅಧಿಕಾರ ಸಿಗುತ್ತದೆ. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಅಗತ್ಯಕ್ಕೆ ತಕ್ಕಂತೆ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಸವಲತ್ತು ನೀಡಲು ಪಟ್ಟಿ ಸಿದ್ಧಪಡಿಸಬಹುದಾಗಿದೆ. ಸಂವಿಧಾನದ 366 (26ಸಿ) ಪರಿಚ್ಛೇದಕ್ಕೆ ತಿದ್ದುಪಡಿ ಮಾಡುವ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪಟ್ಟಿಯು ಈಗಾಗಲೇ ಕೇಂದ್ರ ಅಥವಾ ಇತರ ರಾಜ್ಯಗಳು 342ಎ ಪರಿಚ್ಛೇದದ ಅನ್ವಯ ಸೇರ್ಪಡೆಯಾಗಿರುವ ಸಮುದಾಯಗಳನ್ನೂ ಪ್ರತ್ಯೇಕವಾಗಿ ಪರಿಷ್ಕರಿಸಲು ಅವಕಾಶ ಸಿಗಲಿದೆ.

ವಿಚಾರಣೆ ವೇಳೆ ಕೇಂದ್ರ ಸರ್ಕಾರ ವಾದಿಸಿದ್ದ ಕೆಲ ಅಂಶಗಳು ಈ ಮಸೂದೆಯ ಕರಡಿನಲ್ಲಿ ಪ್ರಸ್ತಾಪವಾಗಿವೆ. ಸಂವಿಧಾನದ 15 (4), 15 (5) ಮತ್ತು 15 (4) ಪರಿಚ್ಛೇದಗಳ ಅನ್ವಯ ರಾಜ್ಯಗಳಿಗೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳನ್ನು ಗುರುತಿಸುವ ಅಧಿಕಾರವಿದೆ. ಕಳೆದ 68 ವರ್ಷಗಳಿಂದ ರಾಜ್ಯಗಳು ಹೀಗೆಯೇ ನಡೆದುಕೊಳ್ಳುತ್ತಿವೆ. ಸಂವಿಧಾನದ 342 (2) ವಿಧಿಯ ಅನ್ವಯ ಇತರ ಹಿಂದುಳಿದ ವರ್ಗಗಳ ಪಟ್ಟಿಗೆ ಯಾವುದೇ ಸಮುದಾಗಿ ಹೊಸದಾಗಿ ಸೇರ್ಪಡೆಯಾದರೆ ರಾಷ್ಟ್ರಪತಿ ಆ ಪ್ರಸ್ತಾವವನ್ನು ಅನುಮೋದಿಸಬೇಕಾಗುತ್ತದೆ. ಇದು ಕೇಂದ್ರ ಸರ್ಕಾರ ರೂಪಿಸುವ ಪಟ್ಟಿಗೆ ಮಾತ್ರ ಅನ್ವಯವಾಗುತ್ತದೆ. ಈ ನಿಯಮವನ್ನೇ ಮುಂದಿಟ್ಟು ರಾಜ್ಯ ಸರ್ಕಾರಗಳಿಗೆ ತಮ್ಮ ಅಗತ್ಯಕ್ಕೆ ತಕ್ಕಂತೆ ಹಿಂದುಳಿದ ವರ್ಗಗಳ ಪಟ್ಟಿ ರೂಪಿಸುವ ಅಧಿಕಾರ ವಿಲ್ಲ ಎನ್ನಲು ಆಗುವುದಿಲ್ಲ ಎನ್ನುವುದು ಕೇಂದ್ರ ಸರ್ಕಾರದ ವಾದ.

ಸಂವಿಧಾನಕ್ಕೆ 102ನೇ ತಿದ್ದುಪಡಿ ಮಾಡುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2018ರಲ್ಲಿ 342ಎ ಪರಿಚ್ಛೇದವನ್ನು ಸೇರ್ಪಡೆ ಮಾಡಿತ್ತು. ಇದರಿಂದ ರಾಜ್ಯಗಳ ಅಧಿಕಾರಕ್ಕೆ ಧಕ್ಕೆಯಾಗುತ್ತದೆ ಎಂದು ಹಿಂದೆಯೂ ವಿರೋಧಪಕ್ಷಗಳು ಎಚ್ಚರಿಸಿದ್ದವು. ಈ ಬೆಳವಣಿಗೆ ನಡೆದ ಸುಮಾರು 2 ವರ್ಷಗಳ ನಂತರ ಸುಪ್ರೀಂಕೋರ್ಟ್​ ಮರಾಠ ಸಮುದಾಯಕ್ಕೆ ಒಬಿಸಿ ಸೌಲಭ್ಯ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ತಳ್ಳಿಹಾಕಿತ್ತು. ಸಂವಿಧಾನದ 342ಎ ಪರಿಚ್ಛೇದದ ಅನ್ವಯ ಕೇಂದ್ರ ಸರ್ಕಾರಕ್ಕೆ ಮಾತ್ರ ಒಬಿಸಿ ಪಟ್ಟಿ ರೂಪಿಸಲು ಅಧಿಕಾರವಿದೆ ಎನ್ನುವ ನಿಲುವನ್ನು ಸುಪ್ರೀಂಕೋರ್ಟ್ ತಳೆದಿತ್ತು.

(Central Cabinet Decides to Give States power to make own OBC List)

ಇದನ್ನೂ ಓದಿ: ಮಸೂದೆಗೆ ಅಂಗೀಕಾರ ನೀಡುತ್ತಿರುವುದೋ ಅಥವಾ ಪಾಪ್ಡಿ ಚಾಟ್ ಮಾಡುತ್ತಿರುವುದೋ?: ಕೇಂದ್ರ ಸರ್ಕಾರ ವಿರುದ್ಧ ಡೆರಿಕ್ ಒಬ್ರೇನ್ ತರಾಟೆ

ಇದನ್ನೂ ಓದಿ: ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲದ ನಡುವೆಯೇ ದಿವಾಳಿ ಸಂಹಿತೆಯ ಮಸೂದೆ-2021 ಅಂಗೀಕಾರ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ