ವಿದ್ಯಾರ್ಥಿಗಳೊಂದಿಗೆ ಕೇಂದ್ರ ಶಿಕ್ಷಣ ಸಚಿವರ ಸಂವಾದ: ಆಗಸ್ಟ್​​ನಲ್ಲಿ ಸಿಬಿಎಸ್​ಇ ಆಪ್ಷನಲ್ ಪರೀಕ್ಷೆ

ವಿದ್ಯಾರ್ಥಿಗಳ ಹಿಂದಿನ ಅಂಕಗಳಿಕೆ ಮತ್ತು ಕ್ಷಮತೆ ಆಧರಿಸಿ ಮಂಡಳಿಯು ನೀಡುವ ಅಂಕಗಳ ಬಗ್ಗೆ ಅಸಮಾಧಾನ ಇದ್ದವರು ಲಿಖಿತ ಪರೀಕ್ಷೆಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದರು.

ವಿದ್ಯಾರ್ಥಿಗಳೊಂದಿಗೆ ಕೇಂದ್ರ ಶಿಕ್ಷಣ ಸಚಿವರ ಸಂವಾದ: ಆಗಸ್ಟ್​​ನಲ್ಲಿ ಸಿಬಿಎಸ್​ಇ ಆಪ್ಷನಲ್ ಪರೀಕ್ಷೆ
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 25, 2021 | 9:33 PM

ದೆಹಲಿ: ಸೆಂಟ್ರಲ್ ಬೋರ್ಡ್ ಅಫ್ ಸೆಕಂಡರಿ ಎಜುಕೇಶನ್ (Central Board of Secondary Education – CBSE) ಮಂಡಳಿಯು ಆಗಸ್ಟ್​ ತಿಂಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ವಿದ್ಯಾರ್ಥಿಗಳೊಂದಿಗೆ ನಡೆಸಿದ ವರ್ಚುವಲ್ ಸಂವಾದದಲ್ಲಿ ಹೇಳಿದರು. ವಿದ್ಯಾರ್ಥಿಗಳ ಹಿಂದಿನ ಅಂಕಗಳಿಕೆ ಮತ್ತು ಕ್ಷಮತೆ ಆಧರಿಸಿ ಮಂಡಳಿಯು ನೀಡುವ ಅಂಕಗಳ ಬಗ್ಗೆ ಅಸಮಾಧಾನ ಇದ್ದವರು ಲಿಖಿತ ಪರೀಕ್ಷೆಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದರು.

ಪರೀಕ್ಷೆ ತೆಗೆದುಕೊಳ್ಳಲೇಬೇಕು ಎಂಬ ಮನೋಭಾವದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿದೆ. ಪರೀಕ್ಷೆಯನ್ನು ರದ್ದುಪಡಿಸಿರುವ ವಿವಿಧ ಮಂಡಳಿಗಳು ಮೌಲ್ಯಮಾಪನಕ್ಕೆ ಒಂದು ಪರ್ಯಾಯ ಸೂತ್ರ ರೂಪಿಸಿದೆ. ಇದು ವಿದ್ಯಾರ್ಥಿಯ ಒಂದಿಡೀ ವರ್ಷದ ಸಾಧನೆಯನ್ನು ಅವಲಂಬಿಸಿರುತ್ತದೆ ಎಂದು ಹೇಳಿದರು.

ಕಾಲೇಜುಗಳಿಗೆ ದಾಖಲಾತಿ, ಪ್ರವೇಶ ಪರೀಕ್ಷೆ, ಮೌಲ್ಯಮಾಪನ ಸೂತ್ರ ಮತ್ತು ಫಲಿತಾಂಶ ದಿನಾಂಕಗಳ ಬಗ್ಗೆ ವಿದ್ಯಾರ್ಥಿಗಳು ಗೊಂದಲ ಎದುರಿಸುತ್ತಿರುವ ಸಂದರ್ಭದಲ್ಲಿ ಈ ಹೇಳಿಕೆ ಹೊರಬಿದ್ದಿದೆ. ಸಚಿವರ ವರ್ಚುವಲ್ ಸಂವಾದವು ಫೇಸ್​ಬುಕ್​ನಲ್ಲಿ ಲೈವ್ ಆಗಿ ಪ್ರಸಾರವಾಗಿತ್ತು.

ವಿದ್ಯಾರ್ಥಿಗಳೊಂದಿಗೆ ನಡೆಸಿದ ಲೈವ್ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ಸಚಿವರು, ವಿದ್ಯಾರ್ಥಿಗಳ ಭವಿಷ್ಯ ಮತ್ತು ಆರೋಗ್ಯದ ಕಾಳಜಿ ಸರ್ಕಾರಕ್ಕೆ ಇದೆ ಎಂದರು. ಪ್ರಶ್ನೆಗಳನ್ನು ಕಳಿಸುವಂತೆ ಸಂವಾದದ ವೇಳೆ ಸಚಿವರು ಕೋರಿದ್ದರು. ಕೆಲ ವಿದ್ಯಾರ್ಥಿಗಳು ಪ್ರಶ್ನೆಗಳನ್ನೂ ಕಳಿಸಿದರು. ಆದರೆ ಸಚಿವರು ಈ ಪ್ರಶ್ನೆಗಳಿಗೆ ಉತ್ತರಿಸಲು ಮುಂದಾಗಲಿಲ್ಲ.

ಬಹುತೇಕ ವಿದ್ಯಾರ್ಥಿಗಳು ಮೌಲ್ಯಮಾಪನ ಮಾನದಂಡ, ಪರೀಕ್ಷಾ ದಿನಾಂಕಗಳ ಬಗ್ಗೆ ಪ್ರಶ್ನೆ ಕೇಳಿದ್ದರು. ಕಾಲೇಜುಗಳಿಗೆ ಸೇರುವ ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕಾದ CUCET ಪರೀಕ್ಷೆಗಳ ಬಗ್ಗೆಯೂ ಕೆಲ ವಿದ್ಯಾರ್ಥಿಗಳು ಪ್ರಸ್ತಾಪಿಸಿದರು. JEE Main ಮತ್ತು NEET ಪರೀಕ್ಷೆಗಳ ಬಗ್ಗೆ ಹಲವರು ತಮ್ಮ ಗೊಂದಲಗಳನ್ನು ಹಂಚಿಕೊಂಡರು.

JEE Main ಮತ್ತು NEET ಆಕಾಂಕ್ಷಿಗಳು ಪರೀಕ್ಷೆಯ ಬಗೆಗಿನ ತಮ್ಮ ಬಹುಕಾಲದ ಪ್ರಶ್ನೆಗಳನ್ನೇ ಮತ್ತೊಮ್ಮೆ ಪ್ರಸ್ತಾಪಿಸಿದರು. ಈ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಜೆಇಇ ಮೇನ್​ ಬಾಕಿ ಪರೀಕ್ಷೆಗಳು ಜುಲೈ ತಿಂಗಳಲ್ಲಿ ಮತ್ತು NEET ಪರೀಕ್ಷೆಗಳು ಸೆಪ್ಟೆಂಬರ್​ವರೆಗೆ ಮುಂದೂಡಿಕೆಯಾಗಿವೆ ಎಂದು ಮಾಹಿತಿ ನೀಡಿದರು.

(Central Education Minister Live with Students clarifies CBSE Optional Exams)

ಇದನ್ನೂ ಓದಿ: ಸಿಬಿಎಸ್​ಇ, ಐಎಸ್​ಸಿಇ 12ನೇ ತರಗತಿ ಪರೀಕ್ಷೆ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂಕೋರ್ಟ್

ಇದನ್ನೂ ಓದಿ: CBSE 12th Board Exam 2021: 12 ನೇ ತರಗತಿಯ ಸಿಬಿಎಸ್‌ಇ, ಸಿಐಎಸ್‌ಸಿಇ ಪರೀಕ್ಷೆ ರದ್ದು: ಪ್ರಧಾನಿ ಮೋದಿ

Published On - 9:25 pm, Fri, 25 June 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ