AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಸದ್ಯ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಅವರ ದಿಢೀರ್ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಅಚ್ಚರಿಗೆ ಕಾರಣವಾಗಿದೆ. 

ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್
ಅರುಣ್ ಗೋಯಲ್
ಗಂಗಾಧರ​ ಬ. ಸಾಬೋಜಿ
|

Updated on:Mar 09, 2024 | 9:44 PM

Share

ದೆಹಲಿ, ಮಾರ್ಚ್​​ 09: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ (Arun Goel) ಅವರು ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಸದ್ಯ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಹೀಗಾಗಿ ಚುನಾವಣಾ ವ್ಯವಸ್ಥೆಯ ಸಂಪೂರ್ಣ ಜವಾಬ್ದಾರಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಹೆಗಲ ಮೇಲೆ ಬಿದ್ದಿದೆ. ಗೋಯಲ್​ ಅವರ ರಾಜೀನಾಮೆಯಿಂದಾಗಿ ಇದೀಗ ಚುನಾವಣಾ ಸಮಿತಿಯಲ್ಲಿ ಎರಡು ಚುನಾವಣಾ ಆಯುಕ್ತ ಸ್ಥಾನಗಳು ಖಾಲಿಯಾಗಿವೆ.

ಮುಂದಿನ ವಾರ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಗೋಯಲ್​ ಅವರ ರಾಜೀನಾಮೆಯಿಂದ ಚುನಾವಣಾ ದಿನಾಂಕ ಘೋಷಣೆ ಮತ್ತಷ್ಟು ಮುಂದೆ ಹೋಗಬಹುದು ಎಂದು ವರದಿ ಆಗಿದೆ.

ಅರುಣ್ ಗೋಯಲ್ ಯಾರು?

ಅರುಣ್ ಗೋಯೆಲ್ ಪಂಜಾಬ್ ಕೇಡರ್‌ಗೆ ಸೇರಿದ 1985-ಬ್ಯಾಚ್‌ನ ನಿವೃತ್ತ ಭಾರತೀಯ ಆಡಳಿತ ಸೇವಾ ಅಧಿಕಾರಿ ಆಗಿದ್ದರು. ನವೆಂಬರ್ 19, 2022 ರಂದು, ಅವರು ಭಾರತದ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು. ನವೆಂಬರ್ 21, 2022 ರಂದು ಅಧಿಕಾರ ವಹಿಸಿಕೊಂಡರು. ಕಾರ್ಯವಿಧಾನದ ಕಾಳಜಿಯಿಂದಾಗಿ ಅವರ ನೇಮಕಾತಿಯನ್ನು ಭಾರತೀಯ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ 3 ಆಗಸ್ಟ್ 2023 ರಂದು ಅನುಮತಿ ನೀಡಲಾಯಿತು.

ಇದನ್ನೂ ಓದಿ: Lok Sabha Election Dates: ಲೋಕಸಭೆ ಚುನಾವಣೆ ದಿನಾಂಕ ಮುಂದಿನ ಗುರುವಾರ ಪ್ರಕಟ ಸಾಧ್ಯತೆ

ಅರುಣ್ ಗೋಯೆಲ್​ ಅವರು ಲೋಕಸಭೆ ಚುನಾವಣೆಯ ಸಿದ್ಧತೆಯಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. ವಿವಿಧ ರಾಜ್ಯಗಳಲ್ಲಿ ಸಿದ್ಧತೆ ಪರಿಶೀಲನೆಗಾಗಿ ನಿರಂತರ ಪ್ರವಾಸ ಕೈಗೊಂಡಿದ್ದರು. ಆದರೆ ಇದೇ ವಾರದ ಅಂತ್ಯದೊಳಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎನ್ನುವ ವರದಿಗಳ ಮಧ್ಯೆಯೇ ಅವರು ರಾಜೀನಾಮೆ ನೀಡಿದ್ದಾರೆ. ಅವರ ದಿಢೀರ್ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಕಾಂಗ್ರೆಸ್, ಡಿಎಂಕೆ ಮೈತ್ರಿ: 9 ಕ್ಷೇತ್ರದಲ್ಲಿ ಕಾಂಗ್ರೆಸ್​ ಸ್ಪರ್ಧೆ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ. ಇತ್ತೀಚಿಗಷ್ಟೇ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿ ಇಂಡಿಯಾ ಒಕ್ಕೂಟಕ್ಕೆ ವಿದಾಯ ಹೇಳಿತ್ತು. ಇದೀಗ ಕಾಂಗ್ರೆಸ್ ನಿನ್ನೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳು ಸೇರಿ ಒಟ್ಟು 39 ಕ್ಷೇತ್ರಗಳಿಗೆ ಕದನ ಕಲಿಗಳನ್ನು ಘೋಷಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:13 pm, Sat, 9 March 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ